ಎರಡೇ ದಿನ ಬಾಕಿ: ಸ್ಯಾಮ್​ಸಂಗ್​ನಿಂದ ಬರುತ್ತಿದೆ ಆಕರ್ಷಕ ಬಜೆಟ್ ಸ್ಮಾರ್ಟ್​ಫೋನ್

Samsung Galaxy A05s launch in India on October 18: ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್‌ಫೋನ್‌ನ ಬೆಲೆ ಗ್ಯಾಲಕ್ಸಿ M15 ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ M15 ಗಿಂತ ಹೆಚ್ಚಿನ ಬೆಲೆಯಲ್ಲಿ ಗ್ಯಾಲಕ್ಸಿ A05s ಬಿಡುಗಡೆ ಆದರೆ ಎಮ್​15 ಬೇಡಿಕೆ ಕುಸಿಯಲಿದೆ. ಗ್ಯಾಲಕ್ಸಿ M15 ಆರಂಭಿಕ ಬೆಲೆ 13,490 ರೂ. ಯಿಂದ ಆರಂಭವಾಗುತ್ತಿದೆ.

ಎರಡೇ ದಿನ ಬಾಕಿ: ಸ್ಯಾಮ್​ಸಂಗ್​ನಿಂದ ಬರುತ್ತಿದೆ ಆಕರ್ಷಕ ಬಜೆಟ್ ಸ್ಮಾರ್ಟ್​ಫೋನ್
Samsung Galaxy A05s
Follow us
Vinay Bhat
|

Updated on:Oct 16, 2023 | 2:11 PM

ಆಕರ್ಷಕ ಬಜೆಟ್ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದಲ್ಲಿ ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ ಕಂಪನಿ ಎತ್ತಿದ ಕೈ. ಭಾರತದಲ್ಲಿ ತಿಂಗಳಿಗೆ ಒಂದಾದರೂ ಕಡಿಮೆ ಬೆಲೆಯ ಫೋನನ್ನು ಅನಾವರಣ ಮಾಡುತ್ತಿದೆ. ಅದರಂತೆ ಇದೀಗ ಕಂಪನಿ ಹೊಸ ಸ್ಯಾಮ್​ಸಂಗ್ ಗ್ಯಾಲಕ್ಸಿ A05s (Samsung Galaxy A05s) ಫೋನ್​ನೊಂದಿಗೆ ಬರುತ್ತಿದ್ದು, ಇದೇ ಅಕ್ಟೋಬರ್ 18 ರಂದು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಕಂಪನಿಯು ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಖಚಿತ ಪಡಿಸಿದೆ. ಇದು ಭಾರತದಲ್ಲಿ 15,000 ರೂ. ಒಳಗೆ ರಿಲೀಸ್ ಆಗುವ ಅಂದಾಜಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಬೆಲೆ ಎಷ್ಟಿರಬಹುದು?

ಈ ಸ್ಮಾರ್ಟ್‌ಫೋನ್‌ನ ಬೆಲೆ ಗ್ಯಾಲಕ್ಸಿ M15 ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ M15 ಗಿಂತ ಹೆಚ್ಚಿನ ಬೆಲೆಯಲ್ಲಿ ಗ್ಯಾಲಕ್ಸಿ A05s ಬಿಡುಗಡೆ ಆದರೆ ಎಮ್​15 ಬೇಡಿಕೆ ಕುಸಿಯಲಿದೆ. ಗ್ಯಾಲಕ್ಸಿ M15 ಆರಂಭಿಕ ಬೆಲೆ 13,490 ರೂ. ಯಿಂದ ಆರಂಭವಾಗುತ್ತಿದೆ. ಇದೇ ಪ್ರೈಸ್ ರೇಂಜ್​ನಲ್ಲಿ ಹೊಸ ಫೋನ್ ಕೂಡ ಇರಬಹುದು ಎನ್ನಲಾಗಿದೆ. ಅಲ್ಲದೆ ಈ ಮೊಬೈಲ್ ಹಬ್ಬದ ಸಂದರ್ಭ ಬಿಡುಗಡೆಯಾಗುವುದರಿಂದ, ಬಿಡುಗಡೆಯ ನಂತರ ಕಡಿಮೆ ಬೆಲೆಗೆ ಸಿಗಬಹುದು.

ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೀಚರ್ಸ್

ಕಂಪನಿಯು ನೀಡಿರುವ ವಿವರಗಳ ಪ್ರಕಾರ, ಮುಂಬರುವ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ 6.7-ಇಂಚಿನ FHD+ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು ಮುಂಭಾಗದಲ್ಲಿ ಟಿಯರ್‌ಡ್ರಾಪ್ ನಾಚ್ ಅನ್ನು ಹೊಂದಿದ್ದು, ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಹಿಂಭಾಗದಲ್ಲಿ, ಸ್ಯಾಮ್‌ಸಂಗ್‌ನ “ಫ್ಲೋಟಿಂಗ್” ಕ್ಯಾಮೆರಾ ಆಯ್ಕೆ ಇದೆ. ಇದು ಗ್ಯಾಲಕ್ಸಿ S23 ಸರಣಿಯನ್ನು ಹೋಲುತ್ತದೆ. ಕಂಪನಿಯು ಈ ಬಜೆಟ್​ನಲ್ಲಿ ಫ್ಲ್ಯಾಗ್‌ಶಿಪ್ ವಿನ್ಯಾಸದ ಸ್ಮಾರ್ಟ್​ಫೋನ್ ಪರಿಚಯಿಸುತ್ತಿರುವುದು ಇದೇ ಮೊದಲ ಎನ್ನಬಹುದು.

ಇದನ್ನೂ ಓದಿ
Image
I'm not a robot: ವೆಬ್‌ಸೈಟ್‌ಗಳನ್ನು ತೆರೆದಾಗ ಹೀಗೆ ಕಾಣುವುದು ಏಕೆ?
Image
ಈ ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಬಂದ್
Image
ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಇಂದು ಕೊನೇ ದಿನ: ಆಫರ್ ಮಿಸ್ ಮಾಡ್ಬೇಡಿ
Image
ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಫೋಟೋ ಚೆನ್ನಾಗಿ ಬರ್ತಿಲ್ವಾ?

ಮಾರುಕಟ್ಟೆಗೆ ಅಪ್ಪಳಿಸಿತು ಮತ್ತೊಂದು ಮಡಚುವ ಫೋನ್: ಹಾನರ್ ಮ್ಯಾಜಿಕ್ Vs 2 ಫೋನ್ ಬಿಡುಗಡೆ

50-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಸೇರಿದಂತೆ ಹಿಂಬದಿ ಟ್ರಿಪಲ್ ಕ್ಯಾಮೆರಾ ಸೆಟಪ್ ಇದೆ. ಈ ಫೋನ್​ನಲ್ಲಿ ಕ್ಯಾಮೆರಾಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಬಿಡುಗಡೆ ಆದ ನಂತರ ಈ ಬಗ್ಗೆ ಪೂರ್ಣ ಮಾಹಿತಿ ಲಭ್ಯವಾಗುತ್ತದೆ. 2-ಮೆಗಾಪಿಕ್ಸೆಲ್ ಡೆಪ್ತ್ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಕೂಡ ನೀಡಲಾಗಿದೆ. ಮುಂಭಾಗದಲ್ಲಿ, ಸೆಲ್ಫಿಗಳನ್ನು ಸೆರೆಹಿಡಿಯಲು 13-ಮೆಗಾಪಿಕ್ಸೆಲ್ ಸಂವೇದಕವಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ ಸ್ನಾಪ್​ಡ್ರಾಗನ್ 680 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದು ಮೂರು ರಿಫ್ರೆಶ್ ಬಣ್ಣಗಳಲ್ಲಿ ಲಭ್ಯವಿರುತ್ತದೆ – ತಿಳಿ ಹಸಿರು, ತಿಳಿ ನೇರಳೆ ಮತ್ತು ಕಪ್ಪು ಎಂದು ಕಂಪನಿ ಹೇಳಿದೆ. ಉಳಿದ ವಿವರಗಳು ಪ್ರಸ್ತುತ ತಿಳಿದಿಲ್ಲ. ಅಕ್ಟೋಬರ್ 18 ರಂದು ಈ ಫೋನಿನ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Mon, 16 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್