ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ (Samsung) ಕಂಪನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ A ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್ (Smartphone) ಪರಿಚಯಿಸಿರುವ ಸ್ಯಾಮ್‌ಸಂಗ್ ಇದರಲ್ಲಿ ಯಶಸ್ಸು ಸಾಧಿಸುತ್ತಿದೆ. ಕಳೆದ ವರ್ಷದಲ್ಲಿ ಸ್ಯಾಮ್‌ಸಂಗ್ ಕಂಪನಿ ಗ್ಯಾಲಕ್ಸಿ ಎ12 (Samsung Galaxy A12) ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಜೆಟ್ ಪ್ರಿಯರ ಮನಗೆದ್ದಿತ್ತು. ಸದ್ಯ ಹೊಸ ವರ್ಷದ ಪ್ರಯುಕ್ತ ಕಂಪನಿ ಗ್ಯಾಲಕ್ಸಿ A12 ಫೋನ್ ಬೆಲೆಯನ್ನ ಮತ್ತಷ್ಟು ಇಳಕೆ ಮಾಡಿದೆ. ಹಾಗಾದ್ರೆ ನೂತನ ಬೆಲೆ ಎಷ್ಟು?.
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM ಮತ್ತು 64GB ಇಂಟರ್ ಸ್ಟೋರೇಜ್ ರೂಪಾಂತರಕ್ಕೆ ಈ ಮೊದಲು 13,999 ರೂ. ಇತ್ತು. ಈಗ 1,000 ರೂ. ಖಡಿತ ಮಾಡಲಾಗಿದ್ದು 12,999 ರೂ. ಗೆ ಸಿಗುತ್ತಿದೆ. ಹಾಗೆಯೆ 4GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಈ ಮೊದಲು 16,499. ಬೆಲೆಯನ್ನು ಹೊಂದಿತ್ತು. ಇದೀಗ 15,499 ರೂ. ಗೆ ಮಾರಾಟ ಆಗುತ್ತಿದೆ. ಈ ಸ್ಮಾರ್ಟ್‌ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಸೇಲ್ನಲ್ಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ.
ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
WhatsApp Tricks: ನಿಮ್ಮ ವಾಟ್ಸ್ಆ್ಯಪ್ ಅನ್ನು ಕನ್ನಡ ಭಾಷೆಯಲ್ಲೇ ಬಳಸಿ: ಇಲ್ಲಿದೆ ನೋಡಿ ಟ್ರಿಕ್
BlackBerry OS: ಒಂದು ಕಾಲದಲ್ಲಿ ಮೊಬೈಲ್ ಮಾರುಕಟ್ಟೆ ಆಳುತ್ತಿದ್ದ ಈ ಫೋನ್ ನಾಳೆಯಿಂದ ಬಂದ್
(Samsung Galaxy A12 has received a price cut in India here is new price)