Galaxy A14 4G: ಯಾವುದೇ ಸೂಚನೆ ಇಲ್ಲದೆ ದಿಢೀರ್ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಸ್ಯಾಮ್​ಸಂಗ್

|

Updated on: May 22, 2023 | 3:31 PM

ದೇಶದಲ್ಲಿ ಸ್ಯಾಮ್​ಸಂಗ್ ತನ್ನ ವಿಶೇಷ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ ಎ14 4ಜಿ (Samsung Galaxy A14 4G) ಅನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್‌ ಪ್ಲೇ ವಿನ್ಯಾಸ ಹಾಗೂ ಅತ್ಯುತ್ತಮವಾದ ಕಾರ್ಯಕ್ಷಮತೆಯನ್ನು ಹೊಂದಿದೆ.

Galaxy A14 4G: ಯಾವುದೇ ಸೂಚನೆ ಇಲ್ಲದೆ ದಿಢೀರ್ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಸ್ಯಾಮ್​ಸಂಗ್
samsung galaxy a14
Follow us on

ಈ ಮೊದಲು ಎರಡು ವಾರಕ್ಕೆ ಒಂದು ಸ್ಮಾರ್ಟ್​​ಫೋನನ್ನು (Smartphone) ಭಾರತದ ಮಾರುಕಟ್ಟೆಗೆ ಪರಿಚಿಯಿಸುತ್ತಿದ್ದ ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ (Samsung) ಕಂಪನಿ ಈಗ ತಿಂಗಳಿಗೆ ಒಂದರಂತೆ ಮೊಬೈಲ್​​ ಅನ್ನು ಬಿಡುಗಡೆ ಮಾಡುತ್ತಿದೆ. ಸಮಯ ತೆಗೆದುಕೊಂಡ ಆಕರ್ಷಕ ಮೊಬೈಲ್ ಅನ್ನು ಸ್ಯಾಮ್​ಸಂಗ್ ತಯಾರಿಸುತ್ತಿದೆ. ಇದೀಗ ದೇಶದಲ್ಲಿ ಸ್ಯಾಮ್​ಸಂಗ್ ತನ್ನ ವಿಶೇಷ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ ಎ14 4ಜಿ (Samsung Galaxy A14 4G) ಅನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್‌ ಪ್ಲೇ ವಿನ್ಯಾಸ ಹಾಗೂ ಅತ್ಯುತ್ತಮವಾದ ಕಾರ್ಯಕ್ಷಮತೆಯನ್ನು ಹೊಂದಿದೆ. ಹಾಗಾದ್ರೆ ಈ ಬಜೆಟ್ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್​ಗಳನ್ನು ಅಳವಡಿಸಲಾಗಿದೆ?, ಆಫರ್ ಏನಿದೆ ಎಂಬುದನ್ನು ನೋಡೋಣ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 13,999 ರೂ. ಬೆಲೆ ಹೊಂದಿದೆ. ಹಾಗೆಯೆ ಇದರ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ಹಸಿರು ಮತ್ತು ಸಿಲ್ವರ್ ಬಣ್ಣಗಳಲ್ಲಿ ಮಾರಾಟ ಕಾಣಲಿದೆ. ಗ್ಯಾಲಕ್ಸಿ A14 ಸದ್ಯಕ್ಕೆ ಕಂಪನಿಯ ಅಧಿಕೃತ ವೆಬ್​ಸೈಟ್​ನಲ್ಲಿ ಸೇಲ್ ಕಾಣುತ್ತಿದೆ. ಎಸ್​ಬಿಐ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 1,000 ರೂ. ಗಳ ಡಿಸ್ಕೌಂಟ್ ಪಡೆಯಬಹುದು.

iPhone 15: ಐಫೋನ್ 15 ನಲ್ಲಿ ಯುಎಸ್​ಬಿ ಟೈಪ್-ಸಿಯ ಅತ್ಯಂತ ವೇಗದ ಚಾರ್ಜರ್

ಇದನ್ನೂ ಓದಿ
Realme Narzo N53: ಕೇವಲ 8,999 ರೂ.: ರಿಯಲ್‌ ಮಿ ನಾರ್ಜೋ N53 ಮಾರಾಟ ಆರಂಭ
Samsung Galaxy S23: ಆಕರ್ಷಕ ಲೈಮ್ ಬಣ್ಣದ ಆವೃತ್ತಿ ಪರಿಚಯಿಸಿದ ಸ್ಯಾಮ್​ಸಂಗ್ ಗ್ಯಾಲಕ್ಸಿ
Tech Tips: ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಈ ಸಿಕ್ರೇಟ್ ಕೋಡ್ ಬಳಸಿದ್ದೀರಾ?: ಒಮ್ಮೆ ಚೆಕ್ ಮಾಡಿ
Galaxy F54 5G: 108MP ಕ್ಯಾಮೆರಾ, ನೈಟೋಗ್ರಫಿ ಫೀಚರ್: ಬರುತ್ತಿದೆ ಸ್ಯಾಮ್​ಸಂಗ್ ಗ್ಯಾಲಕ್ಸಿ F54 ಎಂಬ ಅದ್ಭುತ ಸ್ಮಾರ್ಟ್​ಫೋನ್

ಈ ಫೋನ್‌ 1,080×2,408 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇದು ನಿಮ್ಮ ಸ್ಮಾರ್ಟ್‌ಫೋನ್‌ ಅನ್ನು ಗೀರುಗಳಿಂದ ರಕ್ಷಣೆಯನ್ನು ನೀಡುತ್ತದೆ. ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಈ ಫೋನನ್ನು ಒಮ್ಮೆ ಚಾರ್ಜ್ ಮಾಡಿದರೆ ಎರಡು ದಿನಗಳ ಕಾಲ ಉಪಯೋಗಿಸಬಹುದಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. 4ಜಿ, ಹಾಟ್‌ಸ್ಪಾಟ್‌, ಬ್ಲುಟೂತ್‌ v5.1, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Mon, 22 May 23