Samsung Galaxy A21: ಸ್ಯಾಮ್​ಸಂಗ್​ ಕಂಪೆನಿಯಿಂದ ಬಜೆಟ್ ಬೆಲೆಗೆ ಹೊಸ ಸ್ಮಾರ್ಟ್​ಫೋನ್ ಲಾಂಚ್

| Updated By: Vinay Bhat

Updated on: Aug 29, 2021 | 12:45 PM

ಸ್ಯಾಮ್​ಸಂಗ್ ಗ್ಯಾಲಕ್ಸಿ A21 ಸ್ಯಾಂಪಲ್ ಫೋನ್ ಬೆಲೆಯು ಜಪಾನನಲ್ಲಿ JPY 22,000 ಆಗಿದೆ. ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 14,700 ರೂ. ಎನ್ನಬಹುದು.

Samsung Galaxy A21: ಸ್ಯಾಮ್​ಸಂಗ್​ ಕಂಪೆನಿಯಿಂದ ಬಜೆಟ್ ಬೆಲೆಗೆ ಹೊಸ ಸ್ಮಾರ್ಟ್​ಫೋನ್ ಲಾಂಚ್
Samsung Galaxy A21 Simple
Follow us on

ಪ್ರಸಿದ್ಧ ಸ್ಯಾಮ್‌ಸಂಗ್ ಸಂಸ್ಥೆಯು ಇದೀಗ ಹೊಸದಾಗಿ ತನ್ನ A ಸರಣಿಯಲ್ಲಿ ಗ್ಯಾಲಕ್ಸಿ A21 ಸ್ಯಾಂಪಲ್ (Samsung Galaxy A21) ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬೇಸಿಕ್ ಮಾದರಿಯ ಫೀಚರ್ಸ್‌ ಹೊಂದಿದ್ದು ಬಜೆಟ್ ಬೆಲೆಗೆ ಮಾರಾಟವಾಗುತ್ತಿದೆ. ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಸೇರಿದಂತೆ ಪ್ರಮುಖ ಫೀಚರ್​ಗಳಿರುವ ಈ ಸ್ಮಾರ್ಟ್​ಫೋನ್ ಸದ್ಯಕ್ಕೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಸದ್ಯದಲ್ಲೇ ಭಾರತಕ್ಕೂ ಕಾಲಿಡಲಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ A21 ಸ್ಯಾಂಪಲ್ ಫೋನ್ ಬೆಲೆಯು ಜಪಾನನಲ್ಲಿ JPY 22,000 ಆಗಿದೆ. ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 14,700 ರೂ. ಎನ್ನಬಹುದು. ಇದು 720 x 1,560 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 5.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. TFT ಮಾದರಿಯ ಡಿಸ್‌ಪ್ಲೇಯಿದ್ದು, 16.77 ಮಿಲಿಯನ್ ಕಲರ್‌ಗಳ ಸಂಯೋಜನೆ ಪಡೆದಿದೆ.

ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ Exynos 7884B SoC ಪ್ರೊಸೆಸರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ 3GB RAM + 64GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಹೊಂದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ 1TB ವರೆಗೂ ವಿಸ್ತರಿಸಲು ಅವಕಾಶ ಹೊಂದಿದೆ.

ಗ್ಯಾಲಕ್ಸಿ A21 ಸ್ಯಾಂಪಲ್ ಸ್ಮಾರ್ಟ್‌ಫೋನ್‌ ಸಿಂಗಲ್ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಅದು 13 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿ 5 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ. 3,600mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಸಂಪರ್ಕ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, ಜಿಪಿಎಸ್, ಮತ್ತು ಯುಎಸ್‌ಬಿ ಟೈಪ್‌-ಸಿ ಪೋರ್ಟ್ ಸೇರಿವೆ. ಆನ್‌ಬೋರ್ಡ್‌ನಲ್ಲಿರುವ ಸೆನ್ಸರ್‌ಗಳು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಿವೆ.

iPhone 13 ಬಿಡುಗಡೆಗೆ ದಿನಾಂಕ ಫಿಕ್ಸ್: ಹೊಸ ಸ್ಮಾರ್ಟ್​ಫೋನ್ ಬೆಲೆ ಎಷ್ಟು ಗೊತ್ತಾ?

ವಾಟ್ಸ್​ಆ್ಯಪ್ ಲಿಂಕ್ ಕ್ಲಿಕ್ ಮಾಡಿ 3 ಲಕ್ಷ ರೂ. ಕಳೆದುಕೊಂಡ ಮಹಿಳೆ

(Samsung Galaxy A21 Simple With Exynos 7884B SoC Single Rear Camera Launched Price Specifications)