Airtel: ನೀವು ಏರ್ಟೆಲ್ ಸಿಮ್ ಉಪಯೋಗಿಸುತ್ತಿದ್ದಲ್ಲಿ ಒಮ್ಮೆ ಈ ಆಫರ್​ಗಳನ್ನು ಚೆಕ್ ಮಾಡಿ

ಪ್ರಮುಖವಾಗಿ ಏರ್ಟೆಲ್​ನ 379 ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ.

Airtel: ನೀವು ಏರ್ಟೆಲ್ ಸಿಮ್ ಉಪಯೋಗಿಸುತ್ತಿದ್ದಲ್ಲಿ ಒಮ್ಮೆ ಈ ಆಫರ್​ಗಳನ್ನು ಚೆಕ್ ಮಾಡಿ
Airtel
Follow us
TV9 Web
| Updated By: Vinay Bhat

Updated on: Oct 04, 2021 | 2:39 PM

ಟೆಲಿಕಾಂ ಮಾರುಕಟ್ಟೆಯಲ್ಲಿ ರಿಲಯನ್ಸ್ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವಣ ಪೈಪೋಟಿ ಮುಂದುವರಿಯುತ್ತಲೇ ಇದೆ. ಜಿಯೋವನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕಾಗಿ ಹೋರಾಡುತ್ತಿರುವ ಏರ್ಟೆಲ್ ತನ್ನ ಬಳಕೆದಾರರಿಗೆ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ. ಅಲ್ಲದೆ ಹೊಸ ಬಳಕೆದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ತನ್ನ ಪ್ಲಾನ್​ನ ಜೊತೆಗೆ ಇತರೆ ವಿಶೇಷ ಆಫರ್​ಗಳನ್ನು ನೀಡುತ್ತಿರುವ ಏರ್ಟೆಲ್​ನ ಈ ಯೋಜನೆಯಲ್ಲಿ ಭರ್ಜರಿ ಡೇಟಾ (Data Pack) ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇದ್ದು ಬಳಕೆದಾರರ ಗಮನ ಸೆಳೆದಿದೆ.

ಪ್ರಮುಖವಾಗಿ ಏರ್ಟೆಲ್​ನ 379 ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್ಟೆಲ್​​​ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆಯಬಹುದು.

ಇನ್ನೂ 598 ರೂ. ಪ್ರಿಪೇಯ್ಡ್ ಯೋಜನೆ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್‌ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

ಏರ್ಟೆಲ್ 558 ರೂ. ಪ್ರಿಪೇಯ್ಡ್‌ ಪ್ಲಾನ್​ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಪ್ರತಿದಿನ 3GB ಉಚಿತ ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಇದರ ಜೊತೆಗೆ ಈ ಪ್ಲಾನ್​ನಲ್ಲಿ ನೀವು ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್​ಟ್ಯಾಗ್​ ಕ್ಯಾಶ್‌ಬ್ಯಾಕ್ ಆಫರ್​ಗಳನ್ನು ಪಡೆಯಬಹುದು.

ಭಾರ್ತಿ ಏರ್ಟೆಲ್​ನ ಮತ್ತೊಂದು 698 ರೂಪಾಯಿಯ ಪ್ರಿಪೇಡ್‌ ಪ್ಲಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

iPhone 12: ಐಫೋನ್ ಮೇಲೆ ಬರೋಬ್ಬರಿ 25,500 ರೂ. ಡಿಸ್ಕೌಂಟ್: ಫ್ಲಿಪ್​ಕಾರ್ಟ್​ನಿಂದ ಹಿಂದೆಂದೂ ನೀಡಿರದ ಆಫರ್

Amazon Great Indian Festival Sale: ಗ್ರೇಟ್‌ ಇಂಡಿಯನ್‌ ಸೇಲ್​ನ ಎರಡನೇ ದಿನವೂ ಭರ್ಜರಿ ಆಫರ್: ಅತಿ ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್​ಗಳು

(Airtel These plans not only offer high-speed 4G data but also come with more benifits)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್