ಭಾರತದಲ್ಲಿ ಹಳೇಯ ಸ್ಮಾರ್ಟ್ಫೋನ್ಗಳ (Smartphone) ಬೆಲೆ ಕಡಿತಗೊಳ್ಳುವ ಕಾರ್ಯ ಮುಂದುವರೆದಿದೆ. ಇದೀಗ ಸ್ಯಾಮ್‌ಸಂಗ್ ಸಂಸ್ಥೆ (Samsung) ಕಳೆದ ವರ್ಷ ಭಾರತದಲ್ಲಿ ಬಿಡುಗಡೆ ಮಾಡಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ21ಎಸ್ (Samsung Galaxy A21s) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಕ್ವಾಡ್ ರಿಯುರ್ ಕ್ಯಾಮೆರಾ ಸೆಟ್‌ಅಪ್, ಪಂಚ್ ಹೋಲ್ ಡಿಸ್‌ಪ್ಲೇ, ಆಕರ್ಷಕ ಸೆಲ್ಫಿ ಕ್ಯಾಮೆರಾ, 5,000mAh ಸಾಮರ್ಥ್ಯದ ಬ್ಯಾಟರಿ ಲೈಫ್ ಸೇರಿದಂತೆ ಅನೇಕ ಅತ್ಯುತ್ತಮ ಫೀಚರ್ಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ.
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಸದ್ಯ ಇದರ ಮೇಲೆ ಬರೋಬ್ಬರಿ 2,500 ರೂ. ಕಡಿತ ಮಾಡಲಾಗಿದೆ. 4GB RAM ಮತ್ತು 64GB ಸ್ಟೋರೇಜ್ ಮಾದರಿಯ ನೂತನ ಬೆಲೆ 13,999 ರೂ. ಆಗಿದೆ. ಅಂತೆಯೆ 6GB RAM ಮತ್ತು 64GB ಸ್ಟೋರೆಜ್ ಆಯ್ಕೆಯು ಕಡಿತಗೊಂಡು 16,490 ರೂ. ಗೆ ಲಭ್ಯವಾಗುತ್ತಿದೆ. ಇದು ನೀಲಿ, ಕಪ್ಪು ಮತ್ತು ಬಿಳಿ ಆಯ್ಕೆಗಳಲ್ಲಿ ಲಭ್ಯವಿದೆ.
ಗ್ಯಾಲಕ್ಸಿ A21s ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 270 ppi ಆಗಿದ್ದು, ಅನುಪಾತವು 20:9 ರಷ್ಟಾಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ.
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850 SoC ಪ್ರೊಸೆಸರ್ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲದಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ 4GB RAM +128GB ಮತ್ತು 6GB RAM + 64GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ 512GB ವರೆಗೂ ವಿಸ್ತರಿಸಲು ಅವಕಾಶ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A21s ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ಡ್ಯುಯಲ್-ಬ್ಯಾಂಡ್ ವೈ-ಫೈ, 3.5mm ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಪಡೆದುಕೊಂಡಿದೆ. ನೀವು ಕಡಿಮೆ ಬೆಲೆಗೆ ಸಾಧಾರಣ ಸ್ಮಾರ್ಟ್‌ಫೋನ್ ಕೊಂಡುಕೊಳ್ಳುವ ಯೋಜನೆಯಲ್ಲಿದ್ದರೆ ಈ ಫೋನನ್ನು ಖರೀದಿಸಬಹುದು.
Airtel: ನೀವು ಏರ್ಟೆಲ್ ಸಿಮ್ ಉಪಯೋಗಿಸುತ್ತಿದ್ದಲ್ಲಿ ಒಮ್ಮೆ ಈ ಆಫರ್ಗಳನ್ನು ಚೆಕ್ ಮಾಡಿ
iPhone 12: ಐಫೋನ್ ಮೇಲೆ ಬರೋಬ್ಬರಿ 25,500 ರೂ. ಡಿಸ್ಕೌಂಟ್: ಫ್ಲಿಪ್ಕಾರ್ಟ್ನಿಂದ ಹಿಂದೆಂದೂ ನೀಡಿರದ ಆಫರ್
(Samsung Galaxy A21s has received a price cut in India Here is the new price)