ಬಿಡುಗಡೆಗು ಮುನ್ನವೇ ಸ್ಯಾಮ್​ಸಂಗ್​ನ ಹೊಸ Galaxy A22 5G ಫೋನಿನ ಬೆಲೆ ಸೋರಿಕೆ

ಮೂಲಗಳ ಪ್ರಕಾರ ಈ ಸ್ಮಾರ್ಟ್​ಫೋನ್ ಆಗಸ್ಟ್​ನಲ್ಲಿ ಭಾರತಕ್ಕೆ ಕಾಲಿಡಲಿದೆಯಂತೆ. ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ.

ಬಿಡುಗಡೆಗು ಮುನ್ನವೇ ಸ್ಯಾಮ್​ಸಂಗ್​ನ ಹೊಸ Galaxy A22 5G ಫೋನಿನ ಬೆಲೆ ಸೋರಿಕೆ
Samsung Galaxy A22 5G

ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿರುವ ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್ (Samsung) ಸಂಸ್ಥೆ ಈಗ 5G ಫೋನಿನ ಮೇಲೆ ಗಮನಹರಿಸುತ್ತಿದೆ. ಸದ್ಯ ಗ್ಯಾಲಕ್ಸಿ A  ಸರಣಿಯ ಮುಂದುವರಿದ ಭಾಗವಾಗಿ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ A22 5G  (Galaxy A22 5G) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್ ಮಾಡಲು ಸಿದ್ಧತೆ ನಡೆಸುತ್ತಿದೆ. ಆದರೆ, ಬಿಡುಗಡೆಗು ಮುನ್ನವೇ ಈ ಫೋನಿನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆಯಾಗಿದೆ.

91 ಮೊಬೈಲ್.ಕಾಮ್ ಹೇಳಿರುವ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಮಾದರಿಯಲ್ಲಿ ಬಿಡುಗಡೆ ಆಗಲಿದೆಯಂತೆ. 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದ ಬೆಲೆ 19,999 ರೂ. ಇರಲಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯಕ್ಕೆ 21,999 ರೂ. ನಿಗದಿ ಮಾಡಲಾಗಿದೆ ಎಂದು ಹೇಳಿದೆ.

ಮೂಲಗಳ ಪ್ರಕಾರ ಈ ಸ್ಮಾರ್ಟ್​ಫೋನ್ ಆಗಸ್ಟ್​ನಲ್ಲಿ ಭಾರತಕ್ಕೆ ಕಾಲಿಡಲಿದೆಯಂತೆ. ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ರೀಫ್ರೇಶ್ ರೇಟ್ 90Hz ಆಗಿದೆ. ಸೆಲ್ಫಿ ಕ್ಯಾಮೆರಾ ನಾಚ್ ರಚನೆ ಇದೆ. ಆಕ್ಟಾಕೋರ್ ಮೀಡಿಯಾ ಟೆಕ್ Dimensity 700 ಪ್ರೊಸೆಸರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನೂ ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 8 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಜೊತೆಗೆ ರಿಯರ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, 5G, ವೈಫೈ, ಬ್ಲೂಟೂತ್‌ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

How To: ವಿಂಡೋಸ್ 11 ಆಪರೇಟಿಂಗ್ ಸಿಸ್ಟಂ ಬಳಸಲು ನಿಮ್ಮ ಕಂಪ್ಯೂಟರ್​​ನಲ್ಲಿ ಏನೆಲ್ಲ ಇರಬೇಕು?

ಕೇವಲ 5,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ

(Samsung Galaxy A22 5G India Prices Leaked in online Ahead of Official Launch)