Samsung Galaxy F14 5G: ಸ್ಮಾರ್ಟ್​ಫೋನ್ ಮಾರುಕಟ್ಟೆ ಶಾಕ್: ಕೇವಲ 12,990 ರೂ. ಗೆ ಹೊಸ 5G ಫೋನ್ ರಿಲೀಸ್ ಮಾಡಿದ ಸ್ಯಾಮ್​ಸಂಗ್

Budget 5G Phones: ಸ್ಯಾಮ್​ಸಂಗ್ ಕಂಪನಿ ಅಚ್ಚರಿ ಎಂಬಂತೆ ಅತ್ಯಂತ ಕಡಿಮೆ ಬೆಲೆಗೆ ಭಾರತದಲ್ಲಿ ನೂತನ 5ಜಿ ಮೊಬೈಲ್ ಅನಾವರಣ ಮಾಡಿದೆ. ಅದುವೇ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಫ್ 14 5ಜಿ (Samsung Galaxy F14 5G).

Samsung Galaxy F14 5G: ಸ್ಮಾರ್ಟ್​ಫೋನ್ ಮಾರುಕಟ್ಟೆ ಶಾಕ್: ಕೇವಲ 12,990 ರೂ. ಗೆ ಹೊಸ 5G ಫೋನ್ ರಿಲೀಸ್ ಮಾಡಿದ ಸ್ಯಾಮ್​ಸಂಗ್
Samsung Galaxy F14 5G
Follow us
Vinay Bhat
|

Updated on:Mar 24, 2023 | 3:06 PM

ಭಾರತದಲ್ಲಿ 5ಜಿ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಯೋ, ಏರ್ಟೆಲ್ 5ಜಿ (Airtel 5G) ಸೇವೆ ಆರಂಭಿಸಿದ್ದೆ ತಡ ಪ್ರಸಿದ್ಧ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳು ಒಂದರ ಹಿಂದೆ ಒಂದರಂತೆ 5ಜಿ ಬೆಂಬಲ ನೀಡುವ ಮೊಬೈಲ್ (Mobile) ಅನ್ನು ರಿಲೀಸ್ ಮಾಡುತ್ತಿದೆ. ಅದುಕೂಡ ಬಜೆಟ್ ಬೆಲೆಗೆ ಎಂಬುದು ವಿಶೇಷ. ಇದೀಗ ಸ್ಯಾಮ್​ಸಂಗ್ ಕಂಪನಿ ಅಚ್ಚರಿ ಎಂಬಂತೆ ಅತ್ಯಂತ ಕಡಿಮೆ ಬೆಲೆಗೆ ಭಾರತದಲ್ಲಿ ನೂತನ 5ಜಿ ಮೊಬೈಲ್ ಅನಾವರಣ ಮಾಡಿದೆ. ಅದುವೇ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಫ್ 14 5ಜಿ (Samsung Galaxy F14 5G). ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಪ್ರೊಸೆಸರ್​ನಿಂದ ಈ ಫೋನ್ ಆವೃತ್ತವಾಗಿದೆ. ಹಾಗಾದರೆ ಇದರ ಬೆಲೆ ಎಷ್ಟು?, ದೇಶದಲ್ಲಿ ಯಾವಾಗಿನಿಂದ ಖರೀದಿಗೆ ಲಭ್ಯವಿದೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 4GB RAM + 128GB ರೂಪಾಂತರದ ಆಯ್ಕೆಗೆ 14,490 ರೂ. ಇದೆ. ಅಂತೆಯೆ 6GB RAM + 128GB ಆಯ್ಕೆಗೆ 15,990 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಸೇರಿದಂತೆ ಸ್ಯಾಮ್​ಸಂಗ್​ನ ಅಧಿಕೃತ ವೆಬ್​ಸೈಟ್​ನಲ್ಲಿ ಇದೇ ಮಾರ್ಚ್ 30 ರಿಂದ ಖರೀದಿಗೆ ಸಿಗಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಕೂಡ ಘೋಷಣೆ ಮಾಡಲಾಗಿದ್ದು, HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 1,500 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಈ ಮೂಲಕ ಈ ಫೋನಿನ 4GB RAM ಆಯ್ಕೆಯನ್ನು ಕೇವಲ 12,990 ರೂ. ಗೆ ನಿಮ್ಮದಾಗಿಸಬಹುದು.

ಇದನ್ನೂ ಓದಿ
Image
Redmi Note 12 4G: ಬಹುನಿರೀಕ್ಷಿತ ರೆಡ್ಮಿ ನೋಟ್ 12 4G ಸ್ಮಾರ್ಟ್​ಫೋನ್ ಬಿಡುಗಡೆ: ಇದರ ಬೆಲೆ ಕೇವಲ …
Image
JIO Prepaid Plans: ಜಿಯೋದಿಂದ ಮೂರು ಹೊಸ ಧಮಾಕ ಪ್ಲಾನ್ ಬಿಡುಗಡೆ: ದಂಗಾದ ಏರ್ಟೆಲ್, ವೊಡಾಫೋನ್ ಐಡಿಯಾ
Image
Smartphones: ಭಾರತೀಯರು ಎಷ್ಟು ತಿಂಗಳಿಗೊಮ್ಮೆ ಸ್ಮಾರ್ಟ್​ಫೋನ್ ಬದಲಾಯಿಸುತ್ತಾರೆ ಗೊತ್ತೇ?: ಅಚ್ಚರಿ ವಿಚಾರ ಬಹಿರಂಗ
Image
OnePlus 11 5G: ಆಕರ್ಷಕ ಬಣ್ಣದಲ್ಲಿ ಬರುತ್ತಿದೆ OnePlus 11 5G

WhatsApp Web: ವಾಟ್ಸ್​ಆ್ಯಪ್​ನಿಂದ ವೆಬ್ ಬಳಕೆದಾರರಿಗೆ ಬಂತು ವಿಶೇಷ ಫೀಚರ್: ಕೂಡಲೇ ಅಪ್ಡೇಟ್ ಮಾಡಿ

ಏನು ಫೀಚರ್ಸ್?:

ಈ ಸ್ಮಾರ್ಟ್​ಫೋನ್ F14 5G ಸ್ಮಾರ್ಟ್‌ಫೋನ್ 2408*1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಐಪಿಎಸ್ ಎಲ್​ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದ್ದು, ಡಿಸ್ ಪ್ಲೇ ಅತ್ಯುತ್ತಮ ಅನುಭವ ನೀಡುತ್ತದೆ. ಆಕ್ಟಾ-ಕೋರ್ Exynos 1330 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್‌ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹಿಂಭಾಗದ ಕ್ಯಾಮೆರಾ ಜೊತೆ ಎಲ್​ಇಡಿ ಫ್ಲ್ಯಾಶ್ ನೀಡಲಾಗಿದೆ.

ಈ ಸ್ಮಾರ್ಟ್‌ಫೋನ್​ನ ಪ್ರಮುಖ ಹೈಲೇಟ್ ಆಗಿರುವ ಬ್ಯಾಟರಿಯು 6000mAh ಸಾಮರ್ಥ್ಯದಿಂದ ಕೂಡಿದೆ. 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿದ್ದು, 5G, 4G, Wi-Fi, ಬ್ಲೂಟೂತ್, NFC ಮತ್ತು GPS ಕನೆಕ್ಟಿವಿಟಿ ಆಯ್ಕೆಯನ್ನು ನೀಡಲಾಗಿದೆ. ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಸ್ಮಾರ್ಟ್​ಫೋನ್​ಗಳ ಸಾಲಿಗೆ ಇದುಕೂಡ ಸೇರ್ಪಡೆ ಆಗಿದ್ದು ಬಜೆಟ್ ಪ್ರಿಯರು ಫಿದಾ ಆಗುವುದು ಖಚಿತ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Fri, 24 March 23

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ