Flipkart ನಲ್ಲಿ ಬಂಪರ್ ಡಿಸ್ಕೌಂಟ್: ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾದ Galaxy F22 ಈಗ ಖರೀದಿಗೆ ಲಭ್ಯ

ಫ್ಲಿಪ್​ಕಾರ್ಟ್​ನಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ F22 ಫೋನನ್ನು ಆಫರ್​ನೊಂದಿಗೆ ಖರೀದಿಸುವ ಆಯ್ಕೆ ನೀಡಲಾಗಿದೆ. ನೀವು ಯಾವುದೇ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್​ ಮೂಲಕ ಈ ಫೋನನ್ನು ಖರೀದಿ ಮಾಡಿದರೆ 1000 ರೂ. ಡಿಸ್ಕೌಂಟ್ ನೀಡಲಾಗಿದೆ.

Flipkart ನಲ್ಲಿ ಬಂಪರ್ ಡಿಸ್ಕೌಂಟ್: ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾದ Galaxy F22 ಈಗ ಖರೀದಿಗೆ ಲಭ್ಯ
Samsung Galaxy F22
Follow us
TV9 Web
| Updated By: Vinay Bhat

Updated on: Jul 13, 2021 | 4:29 PM

ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ ಕಂಪೆನಿ ಇತ್ತೀಚೆಗಷ್ಟೆ ಸ್ಯಾಮ್​ಸಂಗ್ ಗ್ಯಾಲಕ್ಸಿ F22 (Samsung Galaxy F22) ಫೋನನ್ನು ಲಾಂಚ್ ಮಾಡಿತ್ತು. 6000mAh ಬ್ಯಾಟರಿ, ಆಕರ್ಷಕ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯವಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ಆಕರ್ಷಕ ಆಫರ್​ನೊಂದಿಗೆ ಪಡೆದುಕೊಳ್ಳಬಹುದು.

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಒಟ್ಟು ಎರಡು ಆಯ್ಕೆಯಲ್ಲಿ ಲಭ್ಯವಿದೆ. 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯ ಹೊಂದಿರುವ ಫೋನಿನ ಬೆಲೆ 12,499 ರೂ. ಆಗಿದೆ. ಅಂತೆಯೆ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 14,999 ರೂ. ನಿಗದಿ ಮಾಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಈ ಫೋನ್ ಫ್ಲಿಪ್​ಕಾರ್ಟ್​ನಲ್ಲಿ ಮತ್ತು ಸ್ಯಾಮ್​ಸಂಗ್.ಕಾಮ್ ವೆಬ್​ಸೈಟ್​ನಲ್ಲಿ ಮಾರಾಟ ಶುರುಮಾಡಿದೆ.

ಅಲ್ಲದೆ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನನ್ನು ಆಫರ್​ನೊಂದಿಗೆ ಖರೀದಿಸುವ ಆಯ್ಕೆ ನೀಡಲಾಗಿದೆ. ನೀವು ಯಾವುದೇ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್​ ಮೂಲಕ ಈ ಫೋನನ್ನು ಖರೀದಿ ಮಾಡಿದರೆ 1000 ರೂ. ಡಿಸ್ಕೌಂಟ್ ನೀಡಲಾಗಿದೆ. ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಪಡೆದುಕೊಂಡರೆ ಶೇ. 10 ರಷ್ಟು ರಿಯಾಯಿತಿ ಇದೆ. ಇದಲ್ಲದೆ 2,500 ರೂ. ಸ್ಪೆಷಲ್ ಡಿಸ್ಕೌಂಟ್ ಕೊಡಲಾಗಿದೆ. ಅಂತೆಯೆ 11,900 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ನೀಡಲಾಗಿದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಾಗಿ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ.

ವಿಶೇಷವಾಗಿ 6000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್ಲಾಕ್ ಆಯ್ಕೆ ನೀಡಲಾಗಿದೆ. ಗ್ಯಾಲಕ್ಸಿ F22 ಸ್ಮಾರ್ಟ್​ಫೋನ್ ಡೆನಿಮ್ ಬ್ಲ್ಯಾಕ್ ಮತ್ತು ಡೆನಿಮ್ ಬ್ಲೂ ಎಂಬ ಎರಡು ಬಣ್ಣಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.

Data Protection: ನಿಮ್ಮ ಡಾಟಾವನ್ನು ಸುರಕ್ಷಿತವಾಗಿ ಇಡುವುದು ಹೇಗೆ?: ಗೂಗಲ್ ಸಿಇಒ ಸುಂದರ್ ಪಿಚೈ ನೀಡಿದ್ದಾರೆ ಟಿಪ್ಸ್

How To: ಪಾಡ್​ಕಾಸ್ಟ್ ಚಾನೆಲ್ ಆರಂಭಿಸುವುದು ಹೇಗೆ? ಅದರಿಂದ ಹಣ ಗಳಿಸಲು ಇರುವ ಅವಕಾಶಗಳೇನು?

(Samsung Galaxy F22 Sale started in India via Flipkart offer Price Specifications)

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ