Galaxy F23 5G: ಬೆಲೆ ಕೇವಲ 15,000 ರೂ.: ಹೊಸ ಕಲರ್​ನಲ್ಲಿ ಗ್ಯಾಲಕ್ಸಿ F23 5G: ಬಂಪರ್ ಆಫರ್ ಮೂಲಕ ಖರೀದಿಸಿ

ಭರ್ಜರಿ ಸೇಲ್ ಕಾಣುತ್ತಿರುವ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಇದೀಗ ಮತ್ತೊಂದು ಕಲರ್​ನಲ್ಲಿ ಅನಾವರಣಗೊಂಡಿದೆ. ಜೊತೆಗೆ ಆಕರ್ಷಕ ಆಫರ್ ಅನ್ನು ನೀಡಲಾಗಿದೆ.

Galaxy F23 5G: ಬೆಲೆ ಕೇವಲ 15,000 ರೂ.: ಹೊಸ ಕಲರ್​ನಲ್ಲಿ ಗ್ಯಾಲಕ್ಸಿ F23 5G: ಬಂಪರ್ ಆಫರ್ ಮೂಲಕ ಖರೀದಿಸಿ
Samsung Galaxy F23 5G
Follow us
TV9 Web
| Updated By: Vinay Bhat

Updated on: May 17, 2022 | 6:36 AM

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ (Samsung) ಕಂಪನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವಲ್ಲಿ ಎತ್ತಿದ ಕೈ. ಈಗಾಗಲೇ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಫ್‌, ಗ್ಯಾಲಕ್ಸಿ ಎಸ್‌ (Galaxy S Series), ಗ್ಯಾಲಕ್ಸಿ ಎ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಕಳೆದ ಮಾರ್ಚ್​​ನಲ್ಲಿ ಸ್ಯಾಮ್​ಸಂಗ್ ತನ್ನ ಗ್ಯಾಲಕ್ಸಿ ಎಫ್‌ ಸಿರೀಸ್‌ನಲ್ಲಿ ಹೊಸ ಗ್ಯಾಲಕ್ಸಿ ಎಫ್​23 5ಜಿ (Galaxy F23 5G) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭರ್ಜರಿ ಸೇಲ್ ಕಾಣುತ್ತಿರುವ ಈ ಸ್ಮಾರ್ಟ್‌ಫೋನ್‌ ಇದೀಗ ಮತ್ತೊಂದು ಕಲರ್​ನಲ್ಲಿ ಅನಾವರಣಗೊಂಡಿದೆ. ಜೊತೆಗೆ ಆಕರ್ಷಕ ಆಫರ್ ಅನ್ನು ನೀಡಲಾಗಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಈ ಫೋನ್ ಈಗ ಕಾಪರ್ ಬ್ಲಶ್ ಕಲರ್​ನಲ್ಲಿ ಬಿಡುಗಡೆ ಆಗಿದೆ.

  1. ಹೌದು, ಸ್ಯಾಮ್‌ಸಂಗ್‌ ಕಂಪನಿ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಅನ್ನು ಕಾಪರ್ ಬ್ಲಶ್ ಕಲಪರ್​​ನಲ್ಲಿ ಲಾಂಚ್‌ ಮಾಡಿದೆ. ಇದರ 4GB + 128GB ಮಾದರಿಗೆ 15,999 ರೂ. ಮತ್ತು 6GB + 128GB ಆಯ್ಕೆಗೆ 16,999 ರೂ. ಬೆಲೆ ನಿಗದಿ ಮಾಡಲಾಗಿದೆ. ಆಫರ್ ಕೂಡ ಘೋಷಣೆ ಮಾಡಲಾಗಿದ್ದು, ICICI ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 1,000 ತ್ವರಿತ ಕ್ಯಾಶ್‌ಬ್ಯಾಕ್ ಸಿಗಲಿದೆ. ಫ್ಲಿಪ್​ಕಾರ್ಟ್​ನಲ್ಲಿ ಖರೀದಿಸಬಹುದು.
  2. ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.
  3. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ 6GB ವರ್ಚುವಲ್ RAM ವಿಸ್ತರಣೆಯ ಬೆಂಬಲವೂ ಇದೆ.
  4. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  5. ಇದನ್ನೂ ಓದಿ
    Image
    iPhone SE 2022: ಐಫೋನ್ ಖರೀದಿಗೆ ಕ್ಯೂ ನಿಂತ ಜನರು: ಕೇವಲ 18,599 ರೂ. ಗೆ ಸಿಗುತ್ತಿದೆ ಆ್ಯಪಲ್ ಫೋನ್
    Image
    Smart TV: ಕೇವಲ 26 ಸಾವಿರಕ್ಕೆ 43 ಇಂಚಿನ ಸ್ಮಾರ್ಟ್ ಟಿವಿ: ಫೀಚರ್ಸ್ ನೋಡಿದ್ರೆ ಖರೀದಿಸದೆ ಇರಲ್ಲ
    Image
    ಐಫೋನ್ ಬಳಕೆದಾರರಿಗೆ ಸಿಹಿ ಸುದ್ದಿ, ಐಫೋನ್ಗಳಿಗು ಯುಎಸ್‌ಬಿ ಟೈಪ್-ಸಿ ಚಾರ್ಜರ್ ಅಳವಡಿಸಲು ಚಿಂತನೆ
    Image
    Realme Narzo 50 5G: ಭಾರತಕ್ಕೆ ಬರುತ್ತಿದೆ ರಿಯಲ್ ಮಿಯ ಮತ್ತೊಂದು ಪವರ್​ಫುಲ್ ಫೋನ್: ಯಾವುದು?
  6. ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಬ್ಯಾಟರಿ ದಕ್ಷತೆಯನ್ನು ಹೆಚ್ಚಿಸಲು ಹೇಳಲಾದ ಅಡಾಪ್ಟಿವ್ ಪವರ್ ಸೇವಿಂಗ್ ತಂತ್ರಜ್ಞಾನವನ್ನು ಫೋನ್ ಒಳಗೊಂಡಿದೆ.
  7. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್‌, GPS/ A-GPS, NFC, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ NFC ಯಲ್ಲಿ ಸ್ಯಾಮ್‌ಸಂಗ್‌ ಪೇ ಬೆಂಬಲವನ್ನು ಕೂಡ ಒಳಗೊಂಡಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ