ಭಾರತದಲ್ಲಿ ಬರೋಬ್ಬರಿ 6,000mAh ಬ್ಯಾಟರಿಯ ಗ್ಯಾಲಕ್ಸಿ F34 5G ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?:

Galaxy F34 5G: ಮಧ್ಯಮ ಬೆಲೆಯ ಗ್ಯಾಲಕ್ಸಿ F34 5G ಫೋನ್​ನಲ್ಲಿ ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದೆ. ಇದರ ಜೊತೆಗೆ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹಾಗಾದರೆ, ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಭಾರತದಲ್ಲಿ ಬರೋಬ್ಬರಿ 6,000mAh ಬ್ಯಾಟರಿಯ ಗ್ಯಾಲಕ್ಸಿ F34 5G ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?:
Samsung Galaxy F34 5G
Follow us
|

Updated on: Aug 07, 2023 | 3:37 PM

ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಸ್ಯಾಮ್​ಸಂಗ್ (Samsung) ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ ಎಫ್ ಸರಣಿ ಅಡಿಯಲ್ಲಿ ನೂತನ ಸ್ಯಾಮ್​ಸಂಗ್ ಗ್ಯಾಲಕ್ಸಿ F34 5G (Galaxy F34 5G) ಸ್ಮಾರ್ಟ್​ಫೋನ್ ಅನ್ನು ಅನಾವರಣ ಮಾಡಿದೆ. ಮಧ್ಯಮ ಬೆಲೆಯ ಈ ಫೋನ್​ನಲ್ಲಿ ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದೆ. ಇದರ ಜೊತೆಗೆ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹಾಗಾದರೆ, ಈ ಫೋನಿನ (Phone) ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಸ್ಯಾಮ್​ಸಂಗ್ ಗ್ಯಾಲಕ್ಸಿ F34 5G ಬೆಲೆ, ಲಭ್ಯತೆ:

ಗ್ಯಾಲಕ್ಸಿ F34 5G ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ. ಇದೆ. ಅಂತೆಯೆ ಇದರ 8GB RAM + 128GB ಆಯ್ಕೆಗೆ 20,999ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸ್ತುತ ಫ್ಲಿಪ್‌ಕಾರ್ಟ್ ಮೂಲಕ ಮುಂಗಡ-ಆರ್ಡರ್‌ಗಳಿಗೆ ಲಭ್ಯವಿದೆ. ಈ ಹ್ಯಾಂಡ್‌ಸೆಟ್‌ನ ಆಗಸ್ಟ್ 12 ರಿಂದ ಖರೀದಿಗೆ ಸಿಗಲಿದೆ. ಗ್ಯಾಲಕ್ಸಿ F34 5G ಫೋನ್ ಎಲೆಕ್ಟ್ರಿಕ್ ಬ್ಲಾಕ್ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಮಾರಾಟ ಕಾಣಲಿದೆ.

ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಲು ಸಾಧ್ಯ?; ಈ ಬಗ್ಗೆ ಟ್ರಾಯ್ ನಿಯಮ ಏನು ಹೇಳುತ್ತೆ?

ಇದನ್ನೂ ಓದಿ
Image
ಐಫೋನ್ 15 ಸರಣಿ ಬಿಡುಗಡೆಯ ದಿನಾಂಕ ಬಹಿರಂಗ: ಈ ಬಾರಿ ಏನೆಲ್ಲ ವಿಶೇಷತೆ ಇದೆ ನೋಡಿ
Image
ಸ್ಮಾರ್ಟ್​ಫೋನ್ ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ: ಮೊಬೈಲ್ ಹಾಳಾಗಬಹುದು
Image
ಬಹುನಿರೀಕ್ಷಿತ ಒನ್​ಪ್ಲಸ್ ಏಸ್ 2 ಪ್ರೊ ಬಿಡುಗಡೆಗೆ ದಿನಾಂಕ ಫಿಕ್ಸ್: ಏನಿದೆ ಫೀಚರ್ಸ್ ನೋಡಿ
Image
ಎಲಾನ್ ಮಸ್ಕ್ ಮತ್ತು ಮಾರ್ಕ್ ಜುಕರ್‌ಬರ್ಗ್ ಕೇಜ್ ಫೈಟ್: ಎಕ್ಸ್‌ನಲ್ಲಿ ಪ್ರಸಾರ

ಸ್ಯಾಮ್​ಸಂಗ್ ಗ್ಯಾಲಕ್ಸಿ F34 5G ಫೀಚರ್ಸ್ ಏನಿದೆ?:

ಸ್ಯಾಮ್​ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್​ಫೋನ್ 6.46-ಇಂಚಿನ ಪೂರ್ಣ-HD+ (2340 x 1080 ಪಿಕ್ಸೆಲ್‌ಗಳು) AMOLED ಡಿಸ್‌ಪ್ಲೇಯನ್ನು ಹೊಂದಿದೆ. 120Hz ನ ರಿಫ್ರೆಶ್ ದರ, 398 ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಬರುತ್ತದೆ. ಇದು ಇನ್-ಹೌಸ್ ಆಕ್ಟಾ-ಕೋರ್ ಎಕ್ಸಿನೊಸ್ 1280 ಪ್ರೊಸೆಸರ್​ನಿಂದ ಚಾಲಿತವಾಗಿದ್ದು, 8GB RAM ಮತ್ತು 128GB ಅಂತರ್ಗತ ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ. ಇದು Android 13-ಆಧಾರಿತ One UI 5.1 ನೊಂದಿಗೆ ರನ್ ಆಗುತ್ತದೆ.

ಕ್ಯಾಮೆರಾ ವಿಭಾಗದಲ್ಲಿ, ಗ್ಯಾಲಕ್ಸಿ F34 5G 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ನೊಂದಿಗೆ 8-ಮೆಗಾಪಿಕ್ಸೆಲ್ ಸಂವೇದಕ ಮತ್ತು ಹಿಂಭಾಗದಲ್ಲಿ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸಂವೇದಕವನ್ನು ಜೋಡಿಸಲಾಗಿದೆ. ಹಿಂಭಾಗದ ಎಡಭಾಗದಲ್ಲಿ ಎಲ್ಇಡಿ ಫ್ಲ್ಯಾಷ್ ಇದೆ. ಇವುಗಳ ಜೊತೆಗೆ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 13-ಮೆಗಾಪಿಕ್ಸೆಲ್ ಸೆನ್ಸಾರ್​ನ ಕ್ಯಾಮೆರಾ ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 6,000mAh ಬ್ಯಾಟರಿಯನ್ನು ನೀಡಲಾಗಿದೆ. ಎರಡು ದಿನಗಳ ಕಾಲ ಚಾರ್ಜ್ ಬರುತ್ತದೆ ಎಂದು ಕಂಪನಿ ಹೇಳಿದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಯಲ್ಲಿ 5G, GPS, NFC, Wi-Fi, Bluetooth v5.3 ಮತ್ತು USB Type-C ಸಂಪರ್ಕವನ್ನು ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್