Samsung Galaxy F42 5G: ಸ್ಯಾಮ್ಸಂಗ್ನಿಂದ ಗ್ಯಾಲಕ್ಸಿ F ಸರಣಿಯಲ್ಲಿ ಭರ್ಜರಿ ಫೀಚರ್ಸ್ನ ಹೊಸ 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 29 ರಂದು ಮಧ್ಯಾಹ್ನ 12 ಗಂಟೆಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಬಿಡುಗಡೆ ಆಗಲಿದೆ. ಆದರೆ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟು ಎಂಬ ಬಗ್ಗೆ ಕಂಪನಿ ಇನ್ನೂ ಬಹಿರಂಗ ಪಡಿಸಿಲ್ಲ.
ತನ್ನ ಗ್ಯಾಲಕ್ಸಿ ಸರಣಿಗಳಿಂದಲೇ ಭಾರತದಲ್ಲಿ ಅಲೆ ಎಬ್ಬಿಸಿರುವ ಸ್ಯಾಮ್‌ಸಂಗ್ (Samsung) ಕಂಪನಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಸೇಲ್ ಕಾಣುವ ಮೊಬೈಲ್ಗಳ ಸಾಲಿನಲ್ಲಿ ಸ್ಯಾಮ್‌ಸಂಗ್ ಎರಡನೇ ಸ್ಥಾನದಲ್ಲಿದೆ. ಸದ್ಯ ಇದೀಗ ಸ್ಯಾಮ್‌ಸಂಗ್ ಭಾರತದಲ್ಲಿ ಹೊಸ ಗ್ಯಾಲಕ್ಸಿ ಎಫ್42 5G (Samsung Galaxy F42 5G) ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ 29 ರಂದು ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಅನಾವರಣಗೊಳ್ಳಲಿದೆ ಎಂದು ಕಂಪನಿ ಅಧಿಕೃತವಾಗಿ ತಿಳಿಸಿದೆ. 64 ಮೆಗಾಪಿಕ್ಸೆಲ್ ಕ್ಯಾಮೆರಾ, 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಸೇರಿದಂತೆ ಅಮೋಘ ಫೀಚರ್ಗಳಿಂದ ಈ ಫೋನ್ ಕೂಡಿವೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 29 ರಂದು ಮಧ್ಯಾಹ್ನ 12 ಗಂಟೆಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಬಿಡುಗಡೆ ಆಗಲಿದೆ. ಆದರೆ ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟು ಎಂಬ ಬಗ್ಗೆ ಕಂಪನಿ ಇನ್ನೂ ಬಹಿರಂಗ ಪಡಿಸಿಲ್ಲ.
ಈ ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದೆ. ಇದು 12 5G ಬ್ಯಾಂಡ್‌ಗಳನ್ನು ಒಳಗೊಂಡಿದ್ದು N1 (2100), N3 (1800), N5 (850), N7 (2600), N8 (900), N20 (800) , N28 (700), N66 (AWS-3), N38 (2600), N40 (2300), N41 (2500), ಮತ್ತು N78 (3500) ಬ್ಯಾಂಡ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ.
ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ನೈಟ್ ಮೋಡ್ ಫೀಚರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಮೂರನೇ ಕ್ಯಾಮೆರಾ 5ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು ಬಳಕೆದಾರರಿಗೆ ಸಂಪೂರ್ಣ ದಿನದ ಬಾಳಿಕೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ವಾಲ್ಯೂಮ್ ರಾಕರ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಮೈಕ್ರೊಫೋನ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ನೂತನ ಫೀಚರ್ಗಳು ಇರಲಿವೆ.
ಬರೋಬ್ಬರಿ 97 ಕೋಟಿ ರೂ. ಮೊಬೈಲ್ ಬಗ್ಗೆ ಕೇಳಿದ್ದೀರಾ?: ಅಷ್ಟಕ್ಕೂ ಇದರಲ್ಲೇನಿದೆ ಗೊತ್ತಾ?
iQoo Z5: 44W ಫ್ಲ್ಯಾಶ್ ಚಾರ್ಜ್, 64MP ಕ್ಯಾಮೆರಾ: ಐಕ್ಯೂ ಕಂಪನಿಯ ಹೊಸ Z5 ಸ್ಮಾರ್ಟ್‌ಫೋನ್ ಬಿಡುಗಡೆ
(Samsung Galaxy F42 5G will be unveiled on September 29 at 12pm IST)