7000mAh ಬ್ಯಾಟರಿ, 64MP ಕ್ಯಾಮೆರಾ: ಸ್ಯಾಮ್​ಸಂಗ್​ನ ಈ ​ಫೊನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಖರೀದಿಸಬಹುದೇ?

ಕಳೆದ ಫೆಬ್ರವರಿಯಲ್ಲಿ ಗ್ಯಾಲಕ್ಸಿ F62 ಸ್ಮಾರ್ಟ್​ಫೋನ್ ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ರಿಲೀಸ್ ಆದ ಸಂದರ್ಭದಲ್ಲಿ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಬೆಲೆ 23,999 ರೂ. ಇತ್ತು. ಇದೀಗ 17,999 ರೂ. ಗೆ ಲಭ್ಯವಿದೆ.

7000mAh ಬ್ಯಾಟರಿ, 64MP ಕ್ಯಾಮೆರಾ: ಸ್ಯಾಮ್​ಸಂಗ್​ನ ಈ ​ಫೊನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಖರೀದಿಸಬಹುದೇ?
Samsung Galaxy F62
Follow us
TV9 Web
| Updated By: Vinay Bhat

Updated on: Aug 05, 2021 | 2:21 PM

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಎರಡನೇ ಸ್ಥಾನದಲ್ಲಿರುವ ಸ್ಯಾಮ್​ಸಂಗ್ (Samsung) ಕಂಪೆನಿ ನಂಬರ್ ಒನ್ ಪಟ್ಟಕ್ಕೇರಲಿ ಹರಸಾಹಸ ಪಡುತ್ತಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳುಳ್ಳ ಫೋನನ್ನು ಬಿಡುಗಡೆ ಮಾಡುತ್ತಿದೆಯಾದರೂ ಶವೋಮಿ (Xiaomi) ಕಂಪೆನಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸದ್ಯ ಹೊಸ ಪ್ರಯೋಗಕ್ಕೆ ಇಳಿದಿರುವ ಸ್ಯಾಮ್​ಸಂಗ್ ತನ್ನ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಇಳಿಕೆ ಮಾಡಿ ಮಾರಾಟ ಮಾಡುತ್ತಿದೆ. ಸದ್ಯ ಸ್ಯಾಮ್​ಸಂಗ್​ ಗ್ಯಾಲಕ್ಸಿ ಎಫ್62 (Samsung Galaxy F62) ಫೋನ್ ಬೆಲೆಯಲ್ಲಿ ಬರೋಬ್ಬರಿ 6000 ರೂ. ಕಡಿತಗೊಳಿಸಿದೆ.

ಕಳೆದ ಫೆಬ್ರವರಿಯಲ್ಲಿ ಗ್ಯಾಲಕ್ಸಿ F62 ಸ್ಮಾರ್ಟ್​ಫೋನ್ ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ರಿಲೀಸ್ ಆದ ಸಂದರ್ಭದಲ್ಲಿ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಬೆಲೆ 23,999 ರೂ. ಇತ್ತು. ಇದೀಗ 17,999 ರೂ. ಗೆ ಲಭ್ಯವಿದೆ. ಅಂತೆಯೆ 28,999 ರೂ. ಇದ್ದ 8GB RAM ಮತ್ತು 128GB ಸ್ಟೋರೇಜ್‌ ಸಾಮರ್ಥ್ಯಕ್ಕೆ ಈಗ 19,999 ರೂ. ನಿಗದಿ ಮಾಡಲಾಗಿದೆ. ಈ ಮೂಲಕ 6,000 ರೂ. ಖಡಿತ ಮಾಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ 1,080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್‌ ಸ್ಕ್ರೀನ್‌ ವ್ಯವಸ್ಥೆಯಿಂದ ಕೂಡಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಎಕ್ಸಿನೋಸ್‌ 9611 ಪ್ರೊಸೆಸರ್‌ ಅನ್ನು ಹೊಂದಿದ್ದು, ಒನ್‌ ಯುಐ ಆಧಾರಿತ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 12ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್​ನಿಂದ ಕೂಡಿದೆ. ಸೆಲ್ಫಿಗಾಗಿ 32 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್​ನ ಪ್ರಮುಖ ಆಕರ್ಷಣೆ ಎಂದರೆ ಇದರ ಬ್ಯಾಟರಿ ಪವರ್. ಇದು ಬರೋಬ್ಬರಿ 7000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಬ್ಯಾಕಪ್ ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅತ್ಯುತ್ತಮ ಕ್ಯಾಮೆರಾ ಹಾಗೂ ಬ್ಯಾಟರಿಗೆ ನೀವು ಹೆಚ್ಚು ಒತ್ತು ನೀಡುವವರಾಗಿದ್ದರೆ ಈ ಸ್ಮಾರ್ಟ್​ಫೋನನ್ನು ಕೊಂಡುಕೊಳ್ಳಬಹುದು.

Flipkart Big Saving Days Sale: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಈ ಸ್ಮಾರ್ಟ್​ಫೋನ್ ಮೇಲೆ ಬರೋಬ್ಬರಿ 20000 ರೂ. ಡಿಸ್ಕೌಂಟ್

Jio Fiber: ಜಿಯೋ ಫೈಬರ್​ ಬಳಕೆದಾರರಿಗೆ ಖುಷಿ ವಿಚಾರ; ಇನ್ಮುಂದೆ ಸ್ಮಾರ್ಟ್ ಟಿವಿಯಲ್ಲೂ ಸಿಗಲಿದೆ ವಿಡಿಯೋ ಕಾಲ್​ ಸೌಲಭ್ಯ

(Samsung Galaxy F62 Price Cut 7000mAh Battery 64MP Camera Galaxy F62 price Dropped in India)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್