ಭಾರತದಲ್ಲಿ ಸ್ಯಾಮ್‌ಸಂಗ್ (Samsung) ಕಂಪನಿಯ ಮೊಬೈಲ್ಗಳಿಗೆ ವಿಶೇಷ ಬೇಡಿಕೆ ಇದೆ. ಯಾಕೆಂದರೆ ಸ್ಯಾಮ್‌ಸಂಗ್ ಬಜೆಟ್ ಬೆಲೆಯಿಂದ ಹಿಡಿದು ಮಧ್ಯಮ ಹಾಗೂ ಹೈ ರೇಂಜ್ ಮಾದರಿಯ ವರೆಗೆ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಕಡಿಮೆ ಬೆಲೆಯ ಸ್ಯಾಮ್‌ಸಂಗ್ ಫೋನುಗಳು ದೇಶದಲ್ಲಿ ಭರ್ಜರಿ ಸೇಲ್ ಆಗುತ್ತದೆ. ಇದಕ್ಕಾಗಿ ಭಾರತದಲ್ಲಿ ಹೆಚ್ಚು ಬಜೆಟ್ ಬೆಲೆಗೆವೇ ಫೋನ್ ಅನಾವರಣ ಮಾಡುತ್ತಿದೆ. ಅದರಲ್ಲೂ ತನ್ನ M ಸರಣಿಯ ಫೋನ್ಗೆ ಅತ್ಯುತ್ತಮ ಪ್ರತಿಕ್ರಿಯೆ ಕೇಳಿಬರುತ್ತದೆ. ಇದಕ್ಕಾಗಿ ಇದೀಗ ಸ್ಯಾಮ್‌ಸಂಗ್ ಕಂಪನಿ ದೇಶದಲ್ಲಿ ಹೊಸ ಗ್ಯಾಲಕ್ಸಿ ಎಮ್04 (Samsung Galaxy M04) ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಇದು ಬಜೆಟ್ ಬೆಲೆಯ ಫೋನಾಗಿದ್ದರೂ ಅತ್ಯುತ್ತಮ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಬಲಿಷ್ಠ ಬ್ಯಾಟರ್ ಸಾಮರ್ಥ್ಯ ನೀಡಲಾಗಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 8,499ರೂ. ಬೆಲೆ ನಿಗದಿ ಮಾಡಲಾಗಿದೆ. ಇದರ 8GB RAM + 128GB ಸ್ಟೋರೇಜ್ ಆಯ್ಕೆ ಬಗ್ಗೆ ಟೀಸರ್ ಬಿಡುಗಡೆ ಮಾಡಿದ್ದು, ಸದ್ಯದಲ್ಲೇ ಬರುವ ನಿರೀಕ್ಷೆಯಿದೆ. ಸದ್ಯ ಅನಾವರಣ ಆಗಿರುವ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಡಿಸೆಂಬರ್ 16 ರಂದು ಮೊದಲ ಸೇಲ್ ಕಾಣಲಿದೆ. ಫಸ್ಟ್ ಸೇಲ್ ಪ್ರಯುಕ್ತ ಆಫರ್ ಕೂಡ ನಿರೀಕ್ಷಿಸಲಾಗಿದೆ.
ಏನು ಫೀಚರ್ಸ್:
ಈ ಸ್ಮಾರ್ಟ್ಫೋನ್ನ ವಿಶೇಷತೆ ಬಗ್ಗೆ ನೋಡುವುದಾದರೆ, ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ಅನುಪಾತದಲ್ಲಿದ್ದು ವಾಟರ್ ಡ್ರಾಪ್ ಶೈಲಿಯ ನಾಚ್ ಅನ್ನು ಪಡೆದುಕೊಂಡಿದೆ. ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕಾರ್ಯನಿರ್ವಹಿಸಲಿದೆ.
Tecno POVA 4: ಕಡಿಮೆ ಬೆಲೆ, 6000mAh ಬಲಿಷ್ಠ ಬ್ಯಾಟರಿ: ಭಾರತದಲ್ಲಿ ಟೆಕ್ನೋದಿಂದ ಬಂಪರ್ ಸ್ಮಾರ್ಟ್‌ಫೋನ್ ಬಿಡುಗಡೆ
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಕೂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಎಷ್ಟು ವೋಲ್ಟ್ನ ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ ಎಂಬುದು ತಿಳಿದುಬಂದಿಲ್ಲ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಬೆಂಬಲವನ್ನು ಪಡೆದಿದೆ. ಈ ಫೋನ್ ಮಿಂಟ್ ಗ್ರೀನ್, ಗೋಲ್ಡ್, ವೈಟ್ ಮತ್ತು ನೀಲಿ ಕಲರ್ನಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:49 am, Sat, 10 December 22