Galaxy M13: 50MP ಕ್ಯಾಮೆರಾ, 5000mAh ಬ್ಯಾಟರಿ: ಸ್ಯಾಮ್​ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ

ಇದೀಗ ಮತ್ತೊಂದು ಬೊಂಬಾಟ್ ಫೋನನ್ನು ಸ್ಯಾಮ್​​ಸಂಗ್ ಬಿಡುಗಡೆ ಮಾಡಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್​13 (Galaxy M13). ಯಾವುದೇ ಪ್ರಚಾವಿಲ್ಲದೆ ಈ ಸ್ಮಾರ್ಟ್‌ಫೋನ್‌ (Smartphone) ಅನ್ನು ಸ್ಯಾಮ್​ಸಂಗ್ ಅನಾವರಣ ಮಾಡಿದೆ.

Galaxy M13: 50MP ಕ್ಯಾಮೆರಾ, 5000mAh ಬ್ಯಾಟರಿ: ಸ್ಯಾಮ್​ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ
Samsung Galaxy M13
Follow us
| Updated By: Vinay Bhat

Updated on:May 27, 2022 | 3:50 PM

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್‌ (Samsung) ಕಂಪನಿಯ ಗ್ಯಾಲಕ್ಸಿ M ಸರಣಿಯ ಫೋನ್​ಗಳಿಗೆ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಈ ಸರಣಿಯಡಿಯಲ್ಲಿ ಕಂಪನಿ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಪರಿಚಯಿಸಿದೆ. ಇದೀಗ ಮತ್ತೊಂದು ಬೊಂಬಾಟ್ ಫೋನನ್ನು ಸ್ಯಾಮ್​​ಸಂಗ್ ಬಿಡುಗಡೆ ಮಾಡಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್​13 (Galaxy M13). ಯಾವುದೇ ಪ್ರಚಾವಿಲ್ಲದೆ ಈ ಸ್ಮಾರ್ಟ್‌ಫೋನ್‌ (Smartphone) ಅನ್ನು ಸ್ಯಾಮ್​ಸಂಗ್ ಅನಾವರಣ ಮಾಡಿದೆ. ಇದರಲ್ಲಿ ಆಕ್ಟಾ ಕೋರ್ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅಳವಡಿಸಲಾಗಿದ್ದು, ದೀರ್ಘ ಸಮಯ ಬಾಳಕೆ ಬರಲು 5,000mAh ಬ್ಯಾಟರಿ ಸಾಮರ್ಥ್ಯವನ್ನು ನೀಡಲಾಗಿದೆ. ಹಾಗಾದ್ರೆ ಇದರ ಬೆಲೆ ಎಷ್ಟು? ಏನೆಲ್ಲ ಫೀಚರ್​​ಗಳಿವೆ ಎಂಬುದನ್ನು ನೋಡೋಣ.

  1. ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ಶೈಲಿಯ ನಾಚ್​ನಿಂದ ಕೂಡಿದೆ ಎಂದು ಕಂಪನಿ ಹೇಳಿದೆ.
  2. ಆಕ್ಟಾ ಕೋರ್ ಎಕ್ಸಿನೋಸ್‌ 850SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  3. ಹಾಗೆಯೇ ಈ ಫೋನ್ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
  4. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಅನ್ನು ಹೊಂದಿದೆ.
  5. ಇದನ್ನೂ ಓದಿ
    Image
    ಸದ್ದಿಲ್ಲದೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಮೋಟೋ E32s: ಏನು ವಿಶೇಷತೆ?, ಬೆಲೆ ಎಷ್ಟು?
    Image
    Infinix Hot 12 Play: 6000mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ 8,499 ರೂ.
    Image
    Best Smartphone: 20,000 ರೂ. ಒಳಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ ಇರುವ ಸ್ಮಾರ್ಟ್​​ಫೋನ್​ ಬೇಕೇ: ಇಲ್ಲಿದೆ ನೋಡಿ
    Image
    TRAI: ಟ್ರೂ ಕಾಲರ್​ಗೆ ಬಿಗ್ ಶಾಕ್: ಬರುತ್ತಿದೆ ಇದೇ ಮಾದರಿಯಲ್ಲಿ ಮತ್ತೊಂದು ಹೊಸ ಆ್ಯಪ್
  6. ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ನಲ್ಲಿ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ.
  7. ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಈ ಡಿವೈಸ್‌ ಸ್ಯಾಮ್‌ಸಂಗ್‌ನ ನಾಕ್ಸ್ ಮೊಬೈಲ್ ಭದ್ರತಾ ವೇದಿಕೆಯೊಂದಿಗೆ ಬರುತ್ತದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ v5.0 ಸಂಪರ್ಕವನ್ನು ಬೆಂಬಲಿಸುತ್ತದೆ. ತನ್ನ ವಿನೂತನ Galaxy M13 ಬಜೆಟ್ ಸ್ಮಾರ್ಟ್‌ಫೋನನ್ನು ಬಿಡುಗಡೆಗೊಳಿಸಿದ್ದರೂ ಸಹ ಈ ಸ್ಮಾರ್ಟ್‌ಫೋನ್ ಬೆಲೆಯನ್ನು ಈವರೆಗೂ ಬಹಿರಂಗಪಡಿಸಿಲ್ಲ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Fri, 27 May 22

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್