ಭಾರತದಲ್ಲಿ ಸ್ಯಾಮ್‌ಸಂಗ್ (Samsung) ಕಂಪೆನಿಯ ಸ್ಮಾರ್ಟ್ಫೋನ್ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಪ್ರಮುಖವಾಗಿ ಗ್ಯಾಲಕ್ಸಿ M ಮತ್ತು A ಸರಣಿಯ ಫೋನುಗಳು ದೇಶದಲ್ಲಿ ಹೆಚ್ಚು ಮಾರಾಟ ಕಾಣುತ್ತದೆ. ಸದ್ಯ ಸ್ಯಾಮ್‌ಸಂಗ್ ಕಳೆದ ವರ್ಷ ಬಿಡುಗಡೆ ಮಾಡಿ ಉತ್ತಮ ವಿಮರ್ಶೆ ಪಡೆದುಕೊಂಡಿದ್ದ ಗ್ಯಾಲಕ್ಸಿ M21 (Galaxy M21) ಸ್ಮಾರ್ಟ್ಫೋನ್ನ ಹೊಸ ಎಡಿಷನ್ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ M21 2020 ರಲ್ಲಿ ಬಿಡುಗಡೆ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ಸದ್ಯ ಇದೇ ಫೋನಿನ ಬ್ಯಾಟರಿ, ಕ್ಯಾಮೆರಾದಲ್ಲಿ ಬದಲಾವಣೆ ಮಾಡಿ ಎರಡು ಬಣ್ಣಗಳಲ್ಲಿ ಗ್ಯಾಲಕ್ಸಿ M21 2021 ಎಡಿಷನ್ ರಿಲೀಸ್ ಆಗಿದೆ.
ಈ ನೂತನ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಹಾಗೂ ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿರುವುದು ಆಕರ್ಷಣಿಯವಾಗಿದೆ. ಬ್ಲೂ ಮತ್ತು ಚಾರ್ಕೋಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಪಡೆದಿರುವ ಗ್ಯಾಲಕ್ಸಿ M21 2021 ಎಡಿಷನ್, ಜುಲೈ 26 ರಿಂದ ಅಮೆಜಾನ್ ಇಂಡಿಯಾದಲ್ಲಿ ಅಮೆಜಾನ್ ಪ್ರೈಮ್ ಡೇ ಸೇಲ್ನಲ್ಲಿ ಖರೀದಿಗೆ ಲಭ್ಯವಾಗಲಿದೆ.
ಒಟ್ಟು ಎರಡು ಮಾದರಿಯಲ್ಲಿ ಈ ಫೋನ್ ಖರೀದಿಗೆ ಲಭ್ಯವಿದೆ. 4GB RAM ಮತ್ತು 64GB ಸ್ಟೋರೇಜ್‌ನ ಬೇಸ್ ವೇರಿಯಂಟ್ ದರವು 12,499ರೂ. ಆಗಿದೆ. ಹಾಗೆಯೇ 6GB RAM ಮತ್ತು 128GB ವೇರಿಯಂಟ್ ಬೆಲೆಯು 14,499ರೂ. ಆಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಎಡಿಷನ್ ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ.
ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5 ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20 ಎಂಪಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ.
ಇನ್ನೂ ಬಲಿಷ್ಠ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯ ಹೊಂದಿದ್ದು, ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಅಳವಡಿಸಲಾಗಿದೆ.
ಪ್ರತಿ ಹಳ್ಳಿಗೂ ಬ್ರಾಡ್ಬ್ಯಾಂಡ್ ಸಂಪರ್ಕ ಒದಗಿಸಲು ಕೇಂದ್ರದ ನಿರ್ಧಾರ
Explainer: ಭಾರತದಲ್ಲಿ ಕಣ್ಗಾವಲು ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕಾದ 7 ಪ್ರಮುಖ ವಿಷಯಗಳು
(Samsung Galaxy M21 2021 Edition With 6000mAh battery Triple Rear Cameras Launched in India price)