Samsung Galaxy M32 5G: ಸ್ಯಾಮ್​ಸಂಗ್​ನಿಂದ ಬಲಿಷ್ಠ ಬ್ಯಾಟರಿಯ ಹೊಸ 5G ಸ್ಮಾರ್ಟ್​ಫೋನ್ ಬಿಡುಗಡೆಗೆ ದಿನಾಂಕ ನಿಗದಿ

ಸ್ಯಾಮ್​ಸಂಗ್ ಭಾರತದಲ್ಲಿ ಬಿಡುಗಡೆ ಮಾಡಲು ಹೊರಟಿರುವ ಹೊಸ ಫೋನ್ Galaxy M32 ಆಗಿದ್ದು, ಇದು 5G ಬೆಂಬಲದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

Samsung Galaxy M32 5G: ಸ್ಯಾಮ್​ಸಂಗ್​ನಿಂದ ಬಲಿಷ್ಠ ಬ್ಯಾಟರಿಯ ಹೊಸ 5G ಸ್ಮಾರ್ಟ್​ಫೋನ್ ಬಿಡುಗಡೆಗೆ ದಿನಾಂಕ ನಿಗದಿ
Samsung Galaxy M32 5G
Follow us
TV9 Web
| Updated By: Vinay Bhat

Updated on:Aug 19, 2021 | 3:54 PM

ಟೆಕ್ ದೈತ್ಯ ಎನಿಸಿಕೊಂಡಿರುವ ಸ್ಯಾಮ್‌ಸಂಗ್ (Samsung) ಕಂಪೆನಿಗೆ ಭಾರತ ನೆಚ್ಚಿನ ತಾಣವಾಗಿದೆ. ಇದಕ್ಕಾಗಿಯೆ ದೇಶದಲ್ಲಿ ತಿಂಗಳಿಗೆ ಒಂದು ಅಥವಾ ಎರಡು ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಲೇ ಇರುತ್ತದೆ. ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಅತಿ ಹೆಚ್ಚು ಮಾರಾಟ ಆಗುತ್ತದೆ. ಸದ್ಯ ತನ್ನ M ಸರಣಿಯಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಹೊಸ ಫೋನನ್ನು ಲಾಂಚ್ ಮಾಡಲು ಮುಂದಾಗಿದೆ.

ಸ್ಯಾಮ್​ಸಂಗ್ ಭಾರತದಲ್ಲಿ ಬಿಡುಗಡೆ ಮಾಡಲು ಹೊರಟಿರುವ ಹೊಸ ಫೋನ್ Galaxy M32 ಆಗಿದ್ದು, ಇದು 5G ಬೆಂಬಲದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ. ಬರೋಬ್ಬರಿ 6,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ಹೊಂದಿರುವ ಈ ಸ್ಮಾರ್ಟ್​ಫೋನ್ ಇದೇ ಆಗಸ್ಟ್ 25 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸೂಪರ್‌ ಅಮೋಲೆಡ್‌ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. MediaTek Dimensity 720 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒಎಸ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 6GB RAM ಆಯ್ಕೆಯಲ್ಲಿ ಸಿಗಲಿದೆಯಂತೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಅಥವಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ನಿಂದ ಒಳಗೊಂಡಿರಲಿದೆ ಎನ್ನಲಾಗಿದೆ. ಸೆಲ್ಫಿಗಾಗಿ 13 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆಯಂತೆ.

ವಿಶೇಷ ಎಂದರೆ ಗ್ಯಾಲಕ್ಸಿ ಎಮ್32 ಸ್ಮಾರ್ಟ್‌ಫೋನ್‌ ಬರೋಬ್ಬರಿ 6,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, ಇದು 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ ಎನ್ನಲಾಗಿದೆ. ಇದರ ಬೆಲೆ ಎಷ್ಟಿರಬಹುದೆಂದು ತಿಳಿದುಬಂದಿಲ್ಲ.

Realme Book: ರಿಯಲ್​ ಮಿಯಿಂದ ಭಾರತದಲ್ಲಿ ಮೊಟ್ಟ ಮೊದಲ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಎಷ್ಟು?

Best Camera Phones: ಇಂದು ವಿಶ್ವ ಛಾಯಾಗ್ರಹಣ ದಿನ: ಇಲ್ಲಿವೆ ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಕ್ಯಾಮೆರಾ ಫೋನುಗಳು

(Samsung Galaxy M32 5G Launching in India on August 25 at 12 Noon Amazon India Confirmed)

Published On - 3:26 pm, Thu, 19 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ