Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ

| Updated By: Vinay Bhat

Updated on: Sep 02, 2021 | 12:29 PM

ಒಟ್ಟು ಎರಡು ಆಯ್ಕೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಖರೀದಿಗೆ ಸಿಗುತ್ತಿದೆ. 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಮಾದರಿಗೆ 20,999 ರೂ. ಬೆಲೆ ನಿಗದಿ ಮಾಡಲಾಗಿದೆ.

Samsung Galaxy M32 5G: ಭರ್ಜರಿ ಫೀಚರ್​, ಕಡಿಮೆ ಬೆಲೆ: ಗ್ಯಾಲಕ್ಸಿಯ ಹೊಸ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ
samsung galaxy m32 5g
Follow us on

ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M32 5G (Samsung Galaxy M32 5G) ಆವೃತ್ತಿಯ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯವಾಗುತ್ತಿದೆ. 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಸೇರಿದಂತೆ ಪ್ರಮುಖ ಫೀಚರ್​ಗಳಿರುವ ಈ ಫೋನ್ ಪ್ರಸಿದ್ಧ ಇ-ಕಾಮರ್ಸ್ ತಾಣ ಅಮೆಜಾನ್ (Amazon) ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಿದೆ. ಭಾರತದಲ್ಲಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಸ್ಮಾರ್ಟ್​ಫೋನ್​ಗಳ ಪೈಕಿ ಇದುಕೂಡ ಒಂದಾಗಿದೆ.

ಬೆಲೆ ಎಷ್ಟು?:

ಒಟ್ಟು ಎರಡು ಆಯ್ಕೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಖರೀದಿಗೆ ಸಿಗುತ್ತಿದೆ. 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಮಾದರಿಗೆ 20,999 ರೂ. ಬೆಲೆ ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಮಾದರಿಯ ಮಾಡೆಲ್​ಗೆ 22,999 ರೂ. ಇದೆ. ಐಸಿಐಸಿಐ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ತೆಗೆದುಕೊಂಡರೆ 2000 ರೂ. ಡಿಸ್ಕೌಂಟ್ ಸಿಗಲಿದೆ. ಸ್ಯಾಮ್​ಸಂಗ್ ವೆಬ್​ಸೈಟ್​ನಲ್ಲಿ ನೋ ಕಾಸ್ಟ್ ಇಎಮ್​ಐ ಆಯ್ಕೆ ಕೂಡ ಇದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ.

ಈ ಸ್ಮಾರ್ಟ್‌ಫೋನಿನ ಕ್ಯಾಮೆರಾ ವಿಶೇಷತೆ ಸೆಳೆಯುತ್ತಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. 48 ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾವನ್ನು ನೀಡಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದ್ದರೆ, ನಾಲ್ಕನೆಯದು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಕ್ಯಾಮೆರಾ ಆಗಿದೆ. ಜೊತೆಗೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಗ್ರಾಹಕರ ಗಮನಸೆಳೆಯುತ್ತಿದೆ.

ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಸೇರಿದಂತೆ ಪ್ರಮುಖ ನೂತನ ಫೀಚರ್​ಗಳಿಂದ ಕೂಡಿದೆ.

ಮೊಬೈಲ್ ಬಳಕೆದಾರರ ಗಮನಕ್ಕೆ! ಸೆ. 1 ರಿಂದ ಬದಲಾದ 5 ವಿಷಯಗಳ ಬಗ್ಗೆ ಗೊತ್ತಿರಲಿ

WhatsApp banned: ಭಾರತದಲ್ಲಿ 30 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್

(Samsung Galaxy M32 5G now available on Amazon and Company Website here is Price Offers and Specifications)