Galaxy M33 5G: ಬರೋಬ್ಬರಿ 6000mAh ಬ್ಯಾಟರಿ, 50MP ಕ್ಯಾಮೆರಾ: ಹೊಸ ಗ್ಯಾಲಕ್ಸಿ M33 5G ಖರೀದಿಸಬಹುದೇ?

Galaxy M33 5G Review: ಆಕರ್ಷಕ ಫೀಚರ್​​ಗಳಿಂದ ಕೂಡಿರುವ ಗ್ಯಾಲಕ್ಸಿ M33 5G ಇದೀಗ ಅಮೆಜಾನ್‌ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ, ಭರ್ಜರಿ ಪ್ರೊಸೆಸರ್, ಉತ್ತಮ ಬ್ಯಾಟರಿ ಲೈಫ್ ನೀಡಲಾಗಿದೆ.

Galaxy M33 5G: ಬರೋಬ್ಬರಿ 6000mAh ಬ್ಯಾಟರಿ, 50MP ಕ್ಯಾಮೆರಾ: ಹೊಸ ಗ್ಯಾಲಕ್ಸಿ M33 5G ಖರೀದಿಸಬಹುದೇ?
Samsung Galaxy M33 5G
Follow us
TV9 Web
| Updated By: Vinay Bhat

Updated on: Apr 09, 2022 | 6:35 AM

ಸ್ಯಾಮ್​ಸಂಗ್ (Samsung) ಕಂಪನಿ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಸಾಧಿಸಿದೆ. ಇತ್ತೀಚೆಗಷ್ಟೆ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಮ್​​33 5G (Galaxy M33 5G) ಮೊಬೈಲ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿತ್ತು. ಆಕರ್ಷಕ ಫೀಚರ್​​ಗಳಿಂದ ಕೂಡಿರುವ ಈ ಫೋನ್ ಇದೀಗ ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್‌ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಿದೆ. ಇದು ಬಜೆಟ್ ಬೆಲೆಗೆ ಲಭ್ಯವಿದ್ದು 50 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೆ ದೀರ್ಘ ಸಮಯದ ಬಾಳಿಕೆಗಾಗಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ. ಹಾಗಿದ್ರೆ ಇದರ ಬೆಲೆ ಎಷ್ಟು?, ಇತರೆ ವಿಶೇಷತೆ ಏನು ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೇಸ್‌ ಮಾಡೆಲ್‌ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 18,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ಆವೃತ್ತಿಯ ಬೆಲೆ 20,499 ರೂ. ಆಗಿದೆ. ಆದರೆ ಈ ಎರಡು ಮಾದರಿಯಗಳು ಲಾಂಚ್‌ ಆಫರ್‌ನಲ್ಲಿ ಕ್ರಮವಾಗಿ 17,999 ಮತ್ತು 19,999 ರೂ. ಗಳಿಗೆ ಮಾರಾಟ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಸ್ಯಾಮ್​ಸಂಗ್ ಕಂಪನಿಯ ಅಧಿಕೃತ ಭಾರತ ವೆಬ್​ಸೈಟ್​ನಲ್ಲಿ ಎಪ್ರಿಲ್ 8 ರಿಂದ ಮಾರಾಟ ಶುರುವಾಗಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ, ಭರ್ಜರಿ ಪ್ರೊಸೆಸರ್, ಉತ್ತಮ ಬ್ಯಾಟರಿ ಲೈಫ್ ನೀಡಲಾಗಿದ್ದು, ಬಜೆಟ್ ಬೆಲೆಗೆ ಒಂದೊಳ್ಳೆ ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಇದು ಅತ್ಯುತ್ತಮ ಆಯ್ಕೆಯಾಗಿದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದಾದ ಆಯ್ಕೆ ನೀಡಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಎಫೆಕ್ಟ್, ಸಿಂಗಲ್ ಟೇಕ್, ಆಬ್ಜೆಕ್ಟ್ ಎರೇಸರ್ ಮತ್ತು ವೀಡಿಯೋ TNR ಮತ್ತು ವೀಡಿಯೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯದ ಬಾಳಿಕೆಗಾಗಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಯನ್ನು ನೀಡಲಾಗಿದೆ.

Moto G22: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 10,999 ರೂ. ಗೆ ಮೋಟೋದಿಂದ ಅಚ್ಚರಿ ಫೋನ್ ಬಿಡುಗಡೆ

Vivo Y21G: ಭಾರತದಲ್ಲಿ ಕೇವಲ 13,990 ರೂಪಾಯಿಗೆ ಲಾಂಚ್​ ಆಗಿದೆ ವಿವೋ Y21G ಸ್ಮಾರ್ಟ್​​ಫೋನ್

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ