Galaxy M34 5G: ಬಿಡುಗಡೆಗೆ ಸಿದ್ದವಾದ ಸ್ಯಾಮ್​ಸಂಗ್​ನ 6,000mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್

ಸ್ಯಾಮ್​ಸಂಗ್ ಕಂಪನಿ ಗ್ಯಾಲಕ್ಸಿ ಎಮ್​​33 5ಜಿ (Galaxy M34 5G) ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ BIS ಪ್ರಮಾಣೀಕರಣವನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಭಾರತಕ್ಕೆ ಅಪ್ಪಳಿಸಲಿದೆ.

Galaxy M34 5G: ಬಿಡುಗಡೆಗೆ ಸಿದ್ದವಾದ ಸ್ಯಾಮ್​ಸಂಗ್​ನ 6,000mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್
Samsung Galaxy M34 5G
Follow us
|

Updated on: Jun 17, 2023 | 12:37 PM

ಸ್ಯಾಮ್​ಸಂಗ್ (Samsung) ಕಂಪನಿಯ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್​ಫೋನ್​ಗಳಿಗೆ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಇತರೆ ದೇಶಗಳಲ್ಲೂ ಅತ್ಯುತ್ತಮ ಬೇಡಿಕೆ ಇದೆ. ಈ ಸರಣಿ ಅಡಿಯಲ್ಲಿ ಫೋನ್​ಗಳು ಬಿಡುಗಡೆ ಆಯಿತು ಎಂದಾದರೆ ಅದು ಭರ್ಜರಿ ಸೇಲ್ ಆಗುತ್ತದೆ. ಕಳೆದ ವರ್ಷ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಮ್​​33 5ಜಿ (Galaxy M33 5G) ಮೊಬೈಲ್ ಅನ್ನು ಬಿಡುಗಡೆ ಮಾಡಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದುವರೆದ ಭಾಗವಾಗಿ ಸ್ಯಾಮ್​ಸಂಗ್ ಕಂಪನಿ ಗ್ಯಾಲಕ್ಸಿ ಎಮ್​​33 5ಜಿ (Galaxy M34 5G) ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ BIS ಪ್ರಮಾಣೀಕರಣವನ್ನು ಪಡೆದುಕೊಂಡಿದ್ದು ಸದ್ಯದಲ್ಲೇ ಭಾರತಕ್ಕೆ ಅಪ್ಪಳಿಸಲಿದೆ.

ಬೆಲೆ ಎಷ್ಟಿರಬಹುದು?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್​ನ ಬೆಲೆ ಎಷ್ಟಿರಬಹುದು ಎಂಬುದು ಬಹಿರಂಗವಾಗಿಲ್ಲ. ಆದರೆ, ಒಟ್ಟು ಎರಡು ಸ್ಟೋರೆಜ್ ಮಾದರಿಯಲ್ಲಿ ಬಿಡುಗಡೆ ಆಗಲಿದೆ. 8GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 256GB ಸ್ಟೋರೇಜ್ ಆವೃತ್ತಿಯಲ್ಲಿ ಬರುವ ನಿರೀಕ್ಷೆಯಿದೆ. ಈ ಫೋನಿನ ಬೆಲೆ 30,000 ರೂ. ಇರಬಹುದು ಎನ್ನಲಾಗಿದೆ.

ಇದನ್ನೂ ಓದಿ
Image
Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಲು ಬರುತ್ತಿದೆ ನಥಿಂಗ್‌ ಫೋನ್‌ (2)
Image
Oppo Reno 9A: ರೆನೋ ಸರಣಿಯಲ್ಲಿ ಬಂತು ಮತ್ತೊಂದು ಸೂಪರ್ ಫೋನ್
Image
Infinix Note 30 5G: ಕ್ರೇಜಿ ಫೀಚರ್ಸ್ ಸಹಿತ ಮಾರುಕಟ್ಟೆಗೆ ಬಂತು ಮತ್ತೊಂದು ಇನ್ಫಿನಿಕ್ಸ್ ಫೋನ್
Image
Realme 11 Pro: 5G: ಭಾರತದಲ್ಲಿ ಖರೀದಿಗೆ ಸಿಗುತ್ತಿದೆ 200MP ಕ್ಯಾಮೆರಾದ ಹೊಸ ರಿಯಲ್ ಮಿ 11 ಪ್ರೊ+ 5G ಸ್ಮಾರ್ಟ್​ಫೋನ್

Father’s Day 2023: ನಿಮ್ಮ ತಂದೆಗೆ ಈ ವಿಶೇಷ ಉಡುಗೊರೆ ಕೊಡಲು ಮರೆಯದಿರಿ

ಫೀಚರ್ಸ್ ಏನಿದೆ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ವಿನ್ಯಾಸದಲ್ಲಿ ಬರಲಿದೆ. ಬೆಲೆಗೆ ತಕ್ಕಂತೆ ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1280 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿರಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಒಳಗೊಂಡಿರಬಹುದು.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್​ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಇದೆ. ಇದು 25W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, GPS, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಯನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ