Samsung Galaxy M52 5G: ಸ್ಯಾಮ್ಸಂಗ್ನಿಂದ ಬರೋಬ್ಬರಿ 7000mAh ಬ್ಯಾಟರಿಯ ಮತ್ತೊಂದು ಸ್ಮಾರ್ಟ್‌ಫೋನ್
ಅತ್ಯುತ್ತಮ 7000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಹೊಂದಿರಲಿದೆ.
ಭಾರತೀಯ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ (Samsung) ಕಂಪೆನಿ ಇದೀಗ ದೇಶದಲ್ಲಿ ಗ್ಯಾಲಕ್ಸಿ ಎಂ ಸರಣಿಯ ಹೊಸ ಫೋನನ್ನು ಪರಿಚಯಿಸಲು ದಿನಾಂಕ ನಿಗದಿ ಮಾಡಿದೆ. ಸ್ಯಾಮ್‌ಸಂಗ್ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G (Samsung Galaxy M52 5G) ಸ್ಮಾರ್ಟ್‌ಫೋನ್ ಅನ್ನು ಇದೇ ಸೆಪ್ಟೆಂಬರ್ 19 ರಂದು ಬಿಡುಗಡೆ ಮಾಡಲಿದೆ. ಈ ಬಗ್ಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ (Amazon) ತನ್ನ ವೆಬ್ಸೈಟ್ನಲ್ಲಿ ಟೀಸರ್ ಬಿಡುಗಡೆ ಮಾಡಿದೆ.
ಈ ಹೊಸ ಸ್ಯಾಮ್‌ಸಂಗ್ ಫೋನ್ ಕಳೆದ ವರ್ಷ ಬಿಡುಗಡೆಯಾಗಿದ್ದ ಗ್ಯಾಲಕ್ಸಿ M51 ನ ಮತ್ತೊಂದು ಆವೃತ್ತಿಯಾಗಿದೆ. ಅತ್ಯುತ್ತಮ 7000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಹೊಸ 5G ಮಿಡ್ ರೇಂಜ್ ಸ್ಮಾರ್ಟ್ ಫೋನ್ ಆಗಿರಲಿದೆ. ಅಮೆಜಾನ್ ಇಂಡಿಯಾದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 52 ಟೀಸರ್‌ನಲ್ಲಿ “ಮಾನ್ಸ್ಟರ್ ಈಸ್ ಬ್ಯಾಕ್” ಎಂದು ಹೇಳಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು ಸೂಪರ್ AMOLED ಡಿಸ್‌ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಇನ್ನೂ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಮುಖವಾಗಿ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಬರೋಬ್ಬರಿ 7000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್‌ಟಿಇ, ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್/ ಎ-ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆ ಇರಲಿದೆ.
iPhone 13: ಹೊಸ ಐಫೋನ್ 13 ಮೊದಲ ಸೇಲ್ ಮುನ್ನವೇ ಆಫರ್ಗಳು ಬಿಡುಗಡೆ: ಕಂಪೆನಿಯಿಂದ ಬಂಪರ್ ಡಿಸ್ಕೌಂಟ್
WhatsApp: ವಾಟ್ಸ್ಆ್ಯಪ್ನಲ್ಲಿ ಬರುತ್ತಿದೆ ಹೊಸ ಫೀಚರ್: ಸ್ಥಳೀಯ ವ್ಯವಹಾರಗಳು ಮತ್ತಷ್ಟು ಸುಲಭ
(Samsung Galaxy M52 5G 7000mAh Battery India Launch Date fixed Teaser released in Amazon)