Samsung Galaxy M52 5G: ಭಾರತದಲ್ಲಿ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್​ಫೋನ್ ಬಿಡುಗಡೆ: ಭರ್ಜರಿ ಆಫರ್​ನಲ್ಲಿ ಲಭ್ಯ

| Updated By: Vinay Bhat

Updated on: Sep 28, 2021 | 2:28 PM

Samsung Galaxy M52 5G was launched: ಒಟ್ಟು ಎರಡು ಮಾದರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯವಿದೆ. 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 29,999 ರೂ. ಆಗಿದೆ.

Samsung Galaxy M52 5G: ಭಾರತದಲ್ಲಿ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್​ಫೋನ್ ಬಿಡುಗಡೆ: ಭರ್ಜರಿ ಆಫರ್​ನಲ್ಲಿ ಲಭ್ಯ
Samsung Galaxy M52 5G
Follow us on

ಭಾರತೀಯ ಸ್ಮಾರ್ಟ್​ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್‌ (Samsung) ಕಂಪೆನಿ ಇದೀಗ ದೇಶದಲ್ಲಿ ಗ್ಯಾಲಕ್ಸಿ ಎಂ ಸರಣಿಯ ಹೊಸ ಫೋನನ್ನು ಪರಿಚಯಿಸಿದೆ. ಸ್ಯಾಮ್​ಸಂಗ್ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್​52 5ಜಿ (Samsung Galaxy M52 5G) ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿಂದು ಅನಾವರಣ ಮಾಡಿದೆ. ಈ ಹೊಸ ಸ್ಯಾಮ್​ಸಂಗ್ ಫೋನ್ ಕಳೆದ ವರ್ಷ ಬಿಡುಗಡೆಯಾಗಿದ್ದ ಗ್ಯಾಲಕ್ಸಿ M51 ನ ಮತ್ತೊಂದು ಆವೃತ್ತಿಯಾಗಿದೆ. ಅತ್ಯುತ್ತಮ 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಸೇರಿದಂತೆ ಆಕರ್ಷಕ ಫೀಚರ್​ಗಳನ್ನು ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಹೊಸ 5G ಮಿಡ್ ರೇಂಜ್ ಸ್ಮಾರ್ಟ್ ಫೋನ್ ಆಗಿದೆ.

ಒಟ್ಟು ಎರಡು ಮಾದರಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯವಿದೆ. 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 29,999 ರೂ. ಆಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 31,999 ರೂ. ಆಗಿದೆ. ಅಕ್ಟೋಬರ್ 3 ರಿಂದ ಈ ಸ್ಮಾರ್ಟ್​ಫೋನ್ ಮಾರಾಟ ಶುರುಮಾಡಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2021ರ ಪ್ರಯುಕ್ತ ಭರ್ಜರಿ ಆಫರ್​ನಲ್ಲಿ ಖರೀದಿಸಬಹುದು. ಅಂತೆಯೆ ಸ್ಯಾಮ್​ಸಂಗ್ ಕಂಪನಿಯ ಅಧಿಕೃತ ವೆಬ್​ಸೈಟ್ ಮತ್ತು ಆಯ್ದ ರಿಟೇಲ್ ಸ್ಟೋರ್​​ಗಳಲ್ಲಿ ಮಾರಾಣ ಕಾಣಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ AMOLED ಡಿಸ್‌ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇನ್ನೂ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಿರುವುದು ವಿಶೇಷ.

ಪ್ರಮುಖವಾಗಿ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಬರೋಬ್ಬರಿ 5000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್‌ಟಿಇ, ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್/ ಎ-ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆ ಇದೆ.

Oppo F19s: 5000mAh ಬ್ಯಾಟರಿ, 48MP ಕ್ಯಾಮೆರಾ: ಒಪ್ಪೋದಿಂದ F19s ಹೆಸರಿನ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

Oppo K9 Pro 5G: 64MP ಕ್ಯಾಮೆರಾ, 60W ಫ್ಲ್ಯಾಶ್ ಚಾರ್ಜ್: ಒಪ್ಪೋ K9 ಪ್ರೊ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

(Samsung Galaxy M52 5G was launched in India on Tuesday as the latest mid-range 5G phone)

Published On - 2:28 pm, Tue, 28 September 21