AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy S20 FE: 74,999 ರೂ. ವಿನ ಗ್ಯಾಲಕ್ಸಿ S20 FE ಫೋನ್ ಈಗ ಕೇವಲ 27,999 ರೂ. ಗೆ ಮಾರಾಟ ಆಗುತ್ತಿದೆ

ಬಿಗ್ ಬಚತ್ ದಮಾಲ್ ಸೇಲ್​ನಲ್ಲಿ ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ S20 FE (Galaxy S20 FE) ​ಫೋನ್ ಬಂಪರ್ ರಿಯಾಯಿತಿ ಪಡೆದುಕೊಂಡಿದೆ. ಕೊಂಚ ದುಬಾರಿ ಬೆಲೆ ಹೊಂದಿರುವ ಈ ಮೊಬೈಲ್ ಅನ್ನು ಆಫರ್ ಮೂಲಕ ಕಡಿಮೆ ದರಕ್ಕೆ ನಿಮ್ಮದಾಗಿಸಬಹುದು.

Galaxy S20 FE: 74,999 ರೂ. ವಿನ ಗ್ಯಾಲಕ್ಸಿ S20 FE ಫೋನ್ ಈಗ ಕೇವಲ 27,999 ರೂ. ಗೆ ಮಾರಾಟ ಆಗುತ್ತಿದೆ
Samsung Galaxy S20 FE
Vinay Bhat
|

Updated on: Jun 25, 2023 | 12:35 PM

Share

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ಬಿಗ್ ಬಚತ್ ದಮಾಲ್ ಸೇಲ್ ನಡೆಯುತ್ತಿದೆ. ಈ ಮೇಳದಲ್ಲಿ ಪ್ರಸಿದ್ಧ ಸ್ಮಾರ್ಟ್​ಫೋನ್​ಗಳಿಗೆ (Smartphones) ಭರ್ಜರಿ ಆಫರ್ ಘೋಷಣೆ ಮಾಡಲಾಗಿದ್ದು, ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ. ಇದರಲ್ಲಿ ನೀವು ಮಧ್ಯಮ ಬೆಲೆಗೆ ದುಬಾರಿ ಬೆಲೆಯ ಫೋನನ್ನು ಖರೀದಿಸಬಹುದು. ಅಂತೆಯೆ ಬಜೆಟ್ ಬೆಲೆಗೆ ಮಧ್ಯಮ ಬೆಲೆಯ ಮೊಬೈಲ್ ಪಡೆದುಕೊಳ್ಳಬಹುದು. ಈ ಸೇಲ್​ನಲ್ಲಿ ಮುಖ್ಯವಾಗಿ ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ S20 FE (Galaxy S20 FE) ಸ್ಮಾರ್ಟ್​ಫೋನ್ ಬಂಪರ್ ರಿಯಾಯಿತಿ ಪಡೆದುಕೊಂಡಿದೆ. ಕೊಂಚ ದುಬಾರಿ ಬೆಲೆ ಹೊಂದಿರುವ ಈ ಮೊಬೈಲ್ ಅನ್ನು ಆಫರ್ ಮೂಲಕ ಕಡಿಮೆ ದರಕ್ಕೆ ನಿಮ್ಮದಾಗಿಸಬಹುದು. ಇದರಲ್ಲಿ ಕ್ಯಾಮೆರಾ, ಪ್ರೊಸೆಸರ್, ಡಿಸ್ ಪ್ಲೇ ಎಲ್ಲವೂ ಅದ್ಭುತವಾಗಿದೆ.

ಆಫರ್ ಏನಿದೆ?:

ಸ್ಯಾಮ್​ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್​ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯ ಮೂಲ ಬೆಲೆ 74,999 ರೂ. ಆಗಿದೆ. ಆದರೀಗ ಫ್ಲಿಪ್​ಕಾರ್ಟ್​ನ ಬಿಗ್ ಬಚತ್ ದಮಾಲ್ ಸೇಲ್​ನಲ್ಲಿ ಬರೋಬ್ಬರಿ 63 ಶೇ. ರಿಯಾಯಿತಿ ಘೋಷಿಸಲಾಗಿದೆ. ಹೀಗಾಗಿ ಗ್ಯಾಲಕ್ಸಿ S20 FE ಫೋನನ್ನು ನೀವು ಕೇವಲ 27,650 ರೂ. ಗೆ ಖರೀದಿಸಬಹುದು. ಇದರ ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

ಇದನ್ನೂ ಓದಿ
Image
Mobile Camera Cleaning Tips: ಮನೆಯಲ್ಲೇ ಕುಳಿತು ಸ್ಮಾರ್ಟ್​ಫೋನ್ ಕ್ಯಾಮೆರಾ ಕ್ಲೀನ್ ಮಾಡುವುದು ಹೇಗೆ?
Image
Tech Tips: ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿಗಳನ್ನು ಹೈಡ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್
Image
Realme GT 2: 40,000 ರೂ. ವಿನ ಈ ಸ್ಮಾರ್ಟ್​ಫೋನ್ ಮೇಲೆ ಶೇ. 40 ರಷ್ಟು ಡಿಸ್ಕೌಂಟ್: ಆಫರ್ ಮಿಸ್ ಮಾಡ್ಬೇಡಿ
Image
Vivo X90s: ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ: ಬಿಡುಗಡೆಗೆ ಸಿದ್ಧವಾದ ವಿವೋ X90s ಸ್ಮಾರ್ಟ್​ಫೋನ್

AC Gas Leak: ಎಸಿ ಹಾಳಾಗಿದೆ ಎಂದು ಮೆಕ್ಯಾನಿಕ್ ಕರೆಯುವ ಮುನ್ನ ಈ ಅಂಶಗಳನ್ನು ನೆನಪಿನಲ್ಲಿಡಿ

ಫೀಚರ್ಸ್ ಏನಿದೆ?:

ಸ್ಯಾಮ್​ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್​ನಲ್ಲಿ 1,080 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ನೀಡಲಾಗಿದೆ. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್ 865 ಆಕ್ಟಾ-ಕೋರ್ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. 1ಟಿಬಿ ವರೆಗೆ ಮೆಮೋರಿಯನ್ನು ಹೆಚ್ಚಿಸುವ ಆಯ್ಕೆ ಇದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಮತ್ತು ವಿಡಿಯೋ ಕ್ಯಾಮೆರಾವನ್ನು ನೀಡಲಾಗಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್​ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವೈಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವೈಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಜೊತೆಗೆ 4G VOLTE ವೈ-ಫೈ, ಬ್ಲೂಟೂತ್ V5.0, ಜಿಪಿಎಸ್‌, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!