Samsung Galaxy S20 FE: ಗ್ರಾಹಕರ ಹುಬ್ಬೇರುವಂತೆ ಮಾಡಿದ ಸ್ಯಾಮ್​ಸಂಗ್: ಈ ​ಫೋನ್ ಬೆಲೆಯಲ್ಲಿ ಬರೋಬ್ಬರಿ 14,000 ರೂ. ಇಳಿಕೆ

| Updated By: Vinay Bhat

Updated on: Oct 05, 2021 | 3:36 PM

Samsung Galaxy S20 FE Price Cut: ಸ್ಯಾಮ್‌ಸಂಗ್ ಸಂಸ್ಥೆಯು ಜನಪ್ರಿಯ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಬರೋಬ್ಬರಿ 14,000 ರೂ.  ಕಡಿತ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

Samsung Galaxy S20 FE: ಗ್ರಾಹಕರ ಹುಬ್ಬೇರುವಂತೆ ಮಾಡಿದ ಸ್ಯಾಮ್​ಸಂಗ್: ಈ ​ಫೋನ್ ಬೆಲೆಯಲ್ಲಿ ಬರೋಬ್ಬರಿ 14,000 ರೂ. ಇಳಿಕೆ
Samsung Galaxy S20 FE
Follow us on

ದೇಶದಲ್ಲಿ ಹಳೇಯ ಸ್ಮಾರ್ಟ್​ಫೋನ್​ಗಳ (Smartphone) ಬೆಲೆ ಕಡಿತಗೊಳ್ಳುವ ಕಾರ್ಯ ಮುಂದುವರೆದಿದೆ. ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ ಒಂದರ ಹಿಂದೆ ಇಂದರಂತೆ ಕಳೆದ ವರ್ಷ ಬಿಡುಗಡೆ ಮಾಡಿದ ತನ್ನ ಸ್ಮಾರ್ಟ್​ಫೋನ್ ಬೆಲೆಯನ್ನು ಕಡಿತ ಮಾಡುತ್ತಿದೆ. ಎರಡು ದಿನಗಳ ಹಿಂದೆಯಷ್ಟೆ ಸ್ಯಾಮ್​ಸಂಗ್ ಗ್ಯಾಲಕ್ಸಿ ಎ21ಎಸ್ (Samsung Galaxy A21s) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 2,500 ರೂ. ಇಳಿಕೆ ಮಾಡಿತ್ತು. ಸದ್ಯ ಇದರ ಬೆನ್ನಲ್ಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್​​20 ಎಫ್​ಇ (Samsung Galaxy S20 FE) ಸ್ಮಾರ್ಟ್‌ಫೋನ್‌ ಮೇಲೆ ಭರ್ಜರಿ ಬೆಲೆ ಇಳಿಕೆ ಮಾಡಿದ್ದು, ಗ್ರಾಹಕರ ಹುಬ್ಬೇರುವಂತೆ ಮಾಡಿದೆ. ಮತ್ತಷ್ಟು ಗ್ರಾಹಕರನ್ನು ತಿರುಗಿ ನೋಡುವಂತೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಜನಪ್ರಿಯ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಬರೋಬ್ಬರಿ 14,000 ರೂ.  ಕಡಿತ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಸಿಂಗಲ್‌ ವೇರಿಯೆಂಟ್‌ ಬೆಲೆ ಸದ್ಯ 36,990 ರೂ.ಗಳು ಆಗಿದೆ. ಈ ಫೋನ್ ಕ್ಲೌಡ್ ರೆಡ್, ಕ್ಲೌಡ್ ಲ್ಯಾವೆಂಡರ್, ಕ್ಲೌಡ್ ಮಿಂಟ್, ಕ್ಲೌಡ್ ನೇವಿ ಮತ್ತು ಕ್ಲೌಡ್ ವೈಟ್ ಸೇರಿದಂತೆ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಇನ್ನೂ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ವಾಯರ್‌ಲೆಸ್‌ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್‌ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, ಜಿಪಿಎಸ್‌, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ.

Flipkart Big Billion Days Sale: 17000ರೂ. ಫೋನ್ ಬೆಲೆ 12999ರೂ: ಫ್ಲಿಪ್​ಕಾರ್ಟ್​ನಲ್ಲಿ 20000ರೂ. ಒಳಗೆ ಲಭ್ಯವಿದೆ ಈ ಸ್ಮಾರ್ಟ್​ಫೋನ್​ಗಳು

Windows 11: ಬಹುನಿರೀಕ್ಷಿತ ಹೊಸ ಮೈಕ್ರೋಸಾಫ್ಟ್ ವಿಂಡೀಸ್ 11 ಅಪ್ಡೇಟ್ ಲಭ್ಯ: ಏನು ವಿಶೇಷತೆ?, ಅಪ್ಡೇಟ್ ಹೇಗೆ?

(Samsung Galaxy S20 FE received the biggest price cut ever Here is the new price)