Kannada News Technology Samsung Galaxy S20FE 5G can be found selling at a discounted price easily at e-commerce stores
Galaxy S20FE 5G: ನೀವು ಸ್ಯಾಮ್ಸಂಗ್ ಪ್ರಿಯರಾಗಿದ್ದಲ್ಲಿ ಇದಕ್ಕಿಂತ ಕಡಿಮೆ ಬೆಲೆಗೆ ಈ ಫೋನ್ ಮತ್ತೆ ಸಿಗಲ್ಲ
ಇದೀಗ ಅಚ್ಚರಿ ಎಂಬಂತೆ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎಸ್20ಎಫ್ಇ (Samsung Galaxy S20 FE) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್ ಘೋಷಿಸಿದೆ.
Samsung Galaxy S20FE 5G
Follow us on
ಭಾರತದಲ್ಲಿ ಅತಿ ಹೆಚ್ಚು ಮಾರಾಟ ಆಗುವ ಸ್ಮಾರ್ಟ್ಫೋನ್ಗಳ ಪೈಕಿ ಸ್ಯಾಮ್ಸಂಗ್ (Samsung) ದ್ವಿತೀಯ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುತ್ತಿರುವುದು. ಮುಖ್ಯವಾಗಿ ಗ್ಯಾಲಕ್ಸಿ ಹೊಸ ಆವೃತ್ತಿಯ ಫೋನ್ ಬಿಡುಗಡೆ ಆಯಿತು ಎಂದಾದರೆ ಅಲ್ಲಿ ಹಿಂದಿನ ಆವೃತ್ತಿಯ ಫೋನಿನ ಬೆಲೆ ಕೊಂಚ ಕಡಿಮೆ ಮಾಡಿ ಮಾರಾಟ ಮಾಡುತ್ತದೆ. ಆದರೆ, ಇದೀಗ ಅಚ್ಚರಿ ಎಂಬಂತೆ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎಸ್20ಎಫ್ಇ (Samsung Galaxy S20 FE) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್ ಘೋಷಿಸಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ (Amazon) ಈ ಸ್ಮಾರ್ಟ್‌ಫೋನ್ ಮೇಲೆ ಬರೋಬ್ಬರಿ 3,500 ರೂ. ರಿಯಾಯಿತಿ ಘೋಷಿಸಲಾಗಿದೆ. ಇದಿಷ್ಟೇ ಅಲ್ಲದೆ ಇತರೆ ಆಫರ್ ಕೂಡ ನೀಡಲಾಗಿದೆ. ಹಾಗಾದ್ರೆ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನಿನ ನೂತನ ಬೆಲೆ ಎಷ್ಟು?, ಇದರಲ್ಲಿ ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
ಸ್ಯಾಮ್ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್ಫೋನನ್ನು ನೀವೀಗ ಕೇವಲ 33,490 ರೂಪಾಯಿಗೆ ಖರೀದಿಸಬಹುದು. ಜೊತೆಗೆ ನೀವು ಎಸ್ಬಿಐ ಕ್ರೆಡಿಟ್ ಕಾರ್ಡ್ ಮೂಲಕ ತೆಗೆದುಕೊಂಡರೆ ಪುನಃ 1,000 ರೂ. ಗಳ ರಿಯಾಯಿತಿ ಸಿಗಲಿದೆ. ಈ ಮೂಲಕ ಅಮೆಜಾನ್ನಲ್ಲಿ ನೀವು ಈ ಫೋನನ್ನು ಕೇವಲ 32,490 ರೂ. ಗೆ ನಿಮ್ಮದಾಗಿಸಬಹುದು.
ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ.
ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ.
ಇದನ್ನೂ ಓದಿ
ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.
ಇನ್ನೂ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ವಾಯರ್‌ಲೆಸ್ ಚಾರ್ಜಿಂಗ್-ಬೆಂಬಲಿತ ಡಿವೈಸ್‌ಗಳೊಂದಿಗೆ ಪವರ್ ಹಂಚಿಕೊಳ್ಳಲು ಸ್ಯಾಮ್‌ಸಂಗ್‌ನ ವಾಯರ್‌ಲೆಸ್ ಪವರ್‌ಶೇರ್ ಸಹ ಇದೆ.
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE ವೈ-ಫೈ, ಬ್ಲೂಟೂತ್ V5.0, ಜಿಪಿಎಸ್, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ.