Samsung Galaxy S21 FE 5G: ಸ್ಯಾಮ್​ಸಂಗ್ ಕಂಪನಿಯ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ, ವಿಶೇಷತೆ ಏನು?

Samsung Galaxy S21 FE 5G: ಸ್ಯಾಮ್​ಸಂಗ್ ಕಂಪನಿಯ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ, ವಿಶೇಷತೆ ಏನು?
Samsung Galaxy S21 FE

ಸ್ಯಾಮ್​ಸಂಗ್ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಅತ್ಯಂತ ಬಲಿಷ್ಠವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 4,500mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಸಾಕಷ್ಟು ಫೀಚರ್​ಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದೆ.

TV9kannada Web Team

| Edited By: Vinay Bhat

Jan 04, 2022 | 2:37 PM

ದಕ್ಷಿಣ ಕೊರಿಯಾದ ಪ್ರಸಿದ್ಧ ಟೆಕ್‌ ಕಂಪನಿ ಸ್ಯಾಮ್‌ಸಂಗ್‌ (Samsung) 2022ನೇ ವರ್ಷದ ಮೊದಲ ಸ್ಮಾರ್ಟ್​ಫೋನನ್ನು ಅನಾವರಣ ಮಾಡಿದೆ. ಬಹುನಿರೀಕ್ಷಿತ ಗ್ಯಾಲಕ್ಸಿ ಎಸ್​21 ಎಫ್​ಇ 5ಜಿ (Samsung Galaxy S21 FE 5G) ಸ್ಮಾರ್ಟ್‌ಫೋನ್‌ ಇದೀಗ ಅಧಿಕೃತವಾಗಿ ಬಿಡುಗಡೆ ಆಗಿದೆ. ಅತ್ಯಂತ ಬಲಿಷ್ಠವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ (Qualcomm Snapdragon), ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಸಾಕಷ್ಟು ಫೀಚರ್​ಗಳಿಂದ ಈ ಸ್ಮಾರ್ಟ್​ಫೋನ್ (Smartphone) ಕೂಡಿದೆ. ಸದ್ಯಕ್ಕೆ ವಿದೇಶದಲ್ಲಿ ಲಭ್ಯವಿರುವ ಈ ಫೋನ್ ಎರಡು ತಿಂಗಳ ಒಳಗೆ ಭಾರತಕ್ಕೂ ಕಾಲಿಡಲಿದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE 5G ಸ್ಮಾರ್ಟ್‌ಫೋನ್‌ 2340×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುತ್ತದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಒನ್‌ ಯುಐ 4.0 ಆಧಾರಿತ ಆಂಡ್ರಾಯ್ಡ್‌ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್‌ ಹೊರಗೆ ಇರಿಸಲಾಗಿದೆ.

ದೀರ್ಘ ಬಾಳಿಕೆಯ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಜಾಗತಿಕವಾಗಿ USD 699 ಗಳಿಗೆ ಲಭ್ಯವಿದೆ. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 52,031 ರೂ. ಎನ್ನಬಹುದು. ಇದು 6GB ಮತ್ತು 128GB, 8GB ಮತ್ತು 128GB, ಹಾಗೂ 8GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

Blackberry Shutdown: ಇಂದಿನಿಂದ ಕಾರ್ಯನಿರ್ವಹಿಸಲ್ಲ ಈ ಫೋನ್: ಕರೆ, ಎಸ್​ಎಮ್​ಎಸ್​ ಎಲ್ಲವೂ ಬಂದ್

(Samsung Galaxy S21 FE 5G is finally released Here is everything you need to know)

Follow us on

Related Stories

Most Read Stories

Click on your DTH Provider to Add TV9 Kannada