ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಟೆಕ್ ಕಂಪನಿ ಸ್ಯಾಮ್‌ಸಂಗ್ ಈ ವರ್ಷದ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 (Samsung Galaxy S22 Series) ಸ್ಮಾರ್ಟ್‌ಫೋನ್ ಸರಣಿಯನ್ನು ಭಾರತದಲ್ಲಿ ಅನಾವರಣ ಮಾಡಿದೆ. ಇದರಲ್ಲಿ ಗ್ಯಾಲಕ್ಸಿ S22, ಗ್ಯಾಲಕ್ಸಿ S22 ಪ್ಲಸ್ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ (Samsung Galaxy S22 Ultra) ಹೀಗೆ ಮೂರು ಮಾದರಿಯ ಫೋನ್ಗಳಿಂದ ಕೂಡಿದೆ. ದುಬಾರಿ ಬೆಲೆಯ ಈ ಫೋನಿನ ಫೀಚರ್ಗಳನ್ನು ಕಂಡು ಟೆಕ್ ಪ್ರಿಯರು ದಂಗಾಗಿದ್ದಾರೆ. ಈ ಮೂರು ಸ್ಮಾರ್ಟ್‌ಫೋನ್ AMOLED ಡಿಸ್‌ಪ್ಲೇ ಹೊಂದಿದ್ದು ಜೊತೆಗೆ 120 Hz ರಿಫ್ರೆಶ್ ರೇಟ್ ಅನ್ನು ಪಡೆದಿವೆ. ಇದರ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದ್ದು ಮಂದ ಬೆಳಕಿನಲ್ಲಿ ಅತ್ಯುತ್ತಮ ಫೋಟೊಗ್ರಫಿಗಾಗಿ (Photography) ನೈಟೋಗ್ರಫಿ ಆಯ್ಕೆಯನ್ನು ನೀಡಿರುವುದು ವಿಶೇಷ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಆಕ್ಟಾ ಕೋರ್ 4nm ಸ್ನಾಪ್ ಡ್ರಾಗನ್ 8 Gen 1 SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 25W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇದು ಆಕ್ಟಾ ಕೋರ್ 4 nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.
ಬೆಲೆ ಎಷ್ಟು?:
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ (12GB+512GB) — 118,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ (12GB+256GB) — Rs 109,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22+ (8GB+256GB) — Rs 88,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22+ (8GB+128GB) — Rs 84,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 (8GB+256GB) — Rs 76,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 (8GB+128GB) – Rs 72,999 ರೂ.
Tips and Tricks: ಈ ಟಿಪ್ಸ್ ಮತ್ತು ಟ್ರಿಕ್ಗಳನ್ನು ಪ್ರಯೋಗಿಸಿ ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಸೂಪರ್ ಫಾಸ್ಟ್ ಮಾಡಿ