Samsung Galaxy S22 Series: ಸ್ಯಾಮ್​ಸಂಗ್ ಗ್ಯಾಲಕ್ಸಿ S22, S22+ ಮತ್ತು S22 ಆಲ್ಟ್ರಾ: ಇದರಲ್ಲಿ ಯಾವುದು ಖರೀದಿಗೆ ಬೆಸ್ಟ್?

ಸ್ಯಾಮ್​ಸಂಗ್ ಕಂಪನಿ ತನ್ನ ಗ್ಯಾಲಕ್ಸಿ ಅನ್‌ಪ್ಯಾಕ್ಡ್ 2022 ಕಾರ್ಯಕ್ರಮದಲ್ಲಿ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌‌ ಸರಣಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗ್ಯಾಲಕ್ಸಿ S22, ಗ್ಯಾಲಕ್ಸಿ S22 ಪ್ಲಸ್‌ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ (Samsung Galaxy S22 Series) ಹೀಗೆ ಮೂರು ಮಾದರಿಯ ಫೋನ್​ಗಳಿಂದ ಕೂಡಿದೆ.

Samsung Galaxy S22 Series: ಸ್ಯಾಮ್​ಸಂಗ್ ಗ್ಯಾಲಕ್ಸಿ S22, S22+ ಮತ್ತು S22 ಆಲ್ಟ್ರಾ: ಇದರಲ್ಲಿ ಯಾವುದು ಖರೀದಿಗೆ ಬೆಸ್ಟ್?
Samsung Galaxy S22 series
Follow us
TV9 Web
| Updated By: Vinay Bhat

Updated on: Feb 10, 2022 | 12:54 PM

ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಟೆಕ್ ಕಂಪನಿ ಸ್ಯಾಮ್‌ಸಂಗ್‌ ಈ ವರ್ಷದ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 (Samsung Galaxy S22 Series) ಸ್ಮಾರ್ಟ್‌ಫೋನ್‌‌ ಸರಣಿಯನ್ನು ಬುಧವಾರ ಅನಾವರಣ ಮಾಡಿದೆ. ಇದರ ಫೀಚರ್​ಗಳನ್ನು ಕಂಡು ದಂಗಾಗಿರುವ ಟೆಕ್ ಪ್ರಿಯರು ಖರೀದಿಗೆ ಮುಗಿ ಬೀಳುತ್ತಿದ್ದಾರೆ. ತನ್ನ ಗ್ಯಾಲಕ್ಸಿ ಅನ್‌ಪ್ಯಾಕ್ಡ್ 2022 ಕಾರ್ಯಕ್ರಮದಲ್ಲಿ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌‌ (Smartphone) ಸರಣಿ ಬಿಡುಗಡೆ ಆಗಿದ್ದು, ಇದರಲ್ಲಿ ಗ್ಯಾಲಕ್ಸಿ S22, ಗ್ಯಾಲಕ್ಸಿ S22 ಪ್ಲಸ್‌ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ (Samsung Galaxy S22 Series) ಹೀಗೆ ಮೂರು ಮಾದರಿಯ ಫೋನ್​ಗಳಿಂದ ಕೂಡಿದೆ. ಈ ಮೂರು ಸ್ಮಾರ್ಟ್​ಫೋನ್ AMOLED ಡಿಸ್‌ಪ್ಲೇ ಹೊಂದಿದ್ದು ಜೊತೆಗೆ 120 Hz ರಿಫ್ರೆಶ್ ರೇಟ್‌ ಅನ್ನು ಪಡೆದಿವೆ. ಇದರ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದ್ದು ಮಂದ ಬೆಳಕಿನಲ್ಲಿ ಅತ್ಯುತ್ತಮ ಫೋಟೊಗ್ರಫಿಗಾಗಿ ನೈಟೋಗ್ರಫಿ ಆಯ್ಕೆಯನ್ನು ನೀಡಿರುವುದು ವಿಶೇಷ. ಹಾಗಾದ್ರೆ ಈ ಫೋನಿನ ವಿಶೇಷತೆ ಏನು?, ಯಾವುದನ್ನು ಖರೀದಿಸಬಹುದು ಎಂಬುದನ್ನು ನೋಡೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಪ್ಲಸ್ ಸ್ಮಾರ್ಟ್‌ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇದು ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಬೆಲೆ $799, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 59,900 ರೂ. ಎಂದು ಊಹಿಸಲಾಗಿದೆ. ಗ್ಯಾಲಕ್ಸಿ S22 ಪ್ಲಸ್ ಬೆಲೆ $999 (ಅಂದಾಜು 74,800 ರೂ) ಆಗಿದೆ. S22 ಅಲ್ಟ್ರಾ ಬೆಲೆಯು $1,199 (ಅಂದಾಜು 89,700 ರೂ.) ರಿಂದ ಪ್ರಾರಂಭವಾಗುತ್ತದೆ. ಭಾರತಕ್ಕೆ ಈ ಫೋನ್ ಸದ್ಯದಲ್ಲೇ ಕಾಳಿಡಲಿದೆಯಂತೆ. ಆದರೆ, ಇದರ ಬೆಲೆ ದೇಶದಲ್ಲಿ ಎಷ್ಟು ಎಂಬ ವಿಚಾರ ಬಹಿರಂಗವಾಗಿಲ್ಲ. ಮೇಲ್ನೋಟಕ್ಕೆ ಗ್ಯಾಲಕ್ಸಿ S22 ಆಲ್ಟ್ರಾ ಅತ್ಯುತ್ತಮ ಫೋನ್​ನಂತೆ ಗೋಚರಿಸುತ್ತದೆ. ಇದರಲ್ಲಿ 5G ಆಯ್ಕೆ ಕೂಡ ನೀಡಲಾಗಿದೆ.

Tecno Pova 5G: ಭಾರತದಲ್ಲಿ ಟೆಕ್ನೋ ಕಂಪನಿಯ ಮೊಟ್ಟ ಮೊದಲ 5G ಫೋನ್ ಬಿಡುಗಡೆ: ಇದರ ಬೆಲೆ ಕೇವಲ …

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್