ಭಾರತದಲ್ಲಿ ಅತಿ ಹೆಚ್ಚು ಮಾರಾಟ ಆಗುವ ಸ್ಮಾರ್ಟ್ಫೋನ್ಗಳ ಪೈಕಿ ಸ್ಯಾಮ್‌ಸಂಗ್ (Samsung) ಎರಡನೇ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಕಂಪನಿ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುತ್ತಿರುವುದು. ಮುಖ್ಯವಾಗಿ ಗ್ಯಾಲಕ್ಸಿ ಹೊಸ ಆವೃತ್ತಿಯ ಫೋನ್ ಬಿಡುಗಡೆ ಆಯಿತು ಎಂದಾದರೆ ಆಗ ತನ್ನ ಹಿಂದಿನ ಆವೃತ್ತಿಯ ಫೋನಿನ ಬೆಲೆ ಕೊಂಚ ಕಡಿಮೆ ಮಾಡಿ ಮಾರಾಟ ಮಾಡುತ್ತದೆ. ಅದರಂತೆ ಸ್ಯಾಮ್‌ಸಂಗ್ ಕಂಪನಿ ಮೊನ್ನೆಯಷ್ಟೆ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S23 ಸರಣಿ (Galaxy S23 Series) ಅಡಿಯಲ್ಲಿ ಗ್ಯಾಲಕ್ಸಿ S23, ಗ್ಯಾಲಕ್ಸಿ S23 ಪ್ಲಸ್ ಮತ್ತು ಗ್ಯಾಲಕ್ಸಿ S23 ಆಲ್ಟ್ರಾ ಫೋನನ್ನು ಲಾಂಚ್ ಮಾಡಿತ್ತು. ಇದರ ಬೆನ್ನಲ್ಲೇ ಕಂಪನಿ ಕಳೆದ ವರ್ಷ ರಿಲೀಸ್ ಮಾಡಿದ ಗ್ಯಾಲಕ್ಸಿ S22 (Galaxy S22) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿ ಮಾರಾಟ ಮಾಡುತ್ತಿದೆ. ಹಾಗಾದರೆ ಗ್ಯಾಲಕ್ಸಿ S22 ಫೋನ್ ಈಗ ಡಿಸ್ಕೌಂಟ್ ಪಡೆದು ಎಷ್ಟು ರೂ. ಗೆ ಸೇಲ್ ಆಗುತ್ತಿದೆ?, ಫೀಚರ್ಸ್ ಏನೇನು ಎಂಬುದನ್ನು ನೋಡೋಣ.
ಏನು ಆಫರ್?:
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ ಬಂಪರ್ ಡಿಸ್ಕೌಂಟ್ನಲ್ಲಿ ಖರೀದಿಸಬಹುದು. ಇದರ 8GB RAM + 128GB ವೇರಿಯಂಟ್ 72,999ರೂ. ಗಳಲ್ಲಿ ಲಾಂಚ್ ಆಗಿತ್ತು. ಇದೀಗ ಬೆಲೆ ಇಳಿಕೆಯಿಂದಾಗಿ ಕೇವಲ 52,999 ರೂ. ಗಳಿಗೆ ಲಭ್ಯವಾಗುತ್ತಿದೆ. ಇದಲ್ಲದೆ 31,000 ರೂ. ವರೆಗೆ ಎಕ್ಸ್ಚೇಂಜ್ ಆಫರ್ ಕೂಡ ನೀಡಲಾಗಿದೆ. ಗ್ರೀನ್, ಪರ್ಪಲ್, ಪಿಂಕ್ ಗೋಲ್ಡ್, ಫಾಂಟೋಮ್ ಬ್ಲ್ಯಾಕ್ ಹಾಗೂ ಫ್ಯಾಂಟೋಮ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಫೀಚರ್ಸ್ ಏನು?:
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. 3,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ. 5G, 4G LTE, ವೈ ಫೈ 6, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
ಮೊನ್ನೆಯಷ್ಟೆ ಬಿಡುಗಡೆ ಆದ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್ ಇದಕ್ಕಿಂತಲೂ ಅದ್ಭುತವಾಗಿದೆ. ಇದು 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್ ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಾಂ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ನಿಂದ ಆವೃತ್ತವಾಗಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. 8 GB RAM ಮತ್ತು 256 GB ವೇರಿಯಂಟ್ ಆಯ್ಕೆಯಿಂದ ಪ್ರಾರಂಭವಾಗುತ್ತದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 50 ಮೆಗಾಫಿಕ್ಸೆಲ್ + 12 ಮೆಗಾಫಿಕ್ಸೆಲ್ + 10 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,900 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಗ್ಯಾಲಕ್ಸಿ S23 ಆರಂಭಿಕ ಬೆಲೆ ಯುಎಸ್ನಲ್ಲಿ $799. ಭಾರತದಲ್ಲಿ ಈ ಫೋನಿನ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:33 pm, Sun, 5 February 23