Galaxy S23 Ultra: ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಸರಣಿ ಬಗ್ಗೆ ಹೊರಬಿತ್ತು ಮತ್ತೊಂದು ಶಾಕಿಂಗ್ ವಿಚಾರ: ಪ್ರೊಸೆಸರ್ ಯಾವುದು?

Samsung Galaxy S23 Series: ಕಳೆದ ಕೆಲವು ತಿಂಗಳುಗಳಿಂದ ಗ್ಯಾಲಕ್ಸಿ S22 ಆಲ್ಟ್ರಾ ಬಗ್ಗೆ ಒಂದಲ್ಲ ಒಂದು ಮಾಹಿತಿ ಸೋರಿಕೆಯಾಗುತ್ತಲೇ ಇದೆ. ಇದೀಗ ಈ ಫೋನಿನಲ್ಲಿ ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 2 ಪ್ರೊಸೆಸರ್ ಇರಲಿದೆ ಎಂದು ಹೇಳಲಾಗಿದೆ.

Galaxy S23 Ultra: ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಸರಣಿ ಬಗ್ಗೆ ಹೊರಬಿತ್ತು ಮತ್ತೊಂದು ಶಾಕಿಂಗ್ ವಿಚಾರ: ಪ್ರೊಸೆಸರ್ ಯಾವುದು?
Samsung Galaxy S23 Ultra
Follow us
TV9 Web
| Updated By: Vinay Bhat

Updated on:Oct 24, 2022 | 2:30 PM

ಸ್ಯಾಮ್​ಸಂಗ್ ಕಂಪನಿ ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಸ್ಯಾಮ್​ಸಂಗ್ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S23 (Samsung Galaxy S23 Series) ಸರಣಿಯ ಸ್ಮಾರ್ಟ್​​ಫೋನ್ ಅನ್ನು ತಯಾರಿ ಮಾಡುವ ಕಾರ್ಯದಲ್ಲಿರುವ ತೊಡಗಿಕೊಂಡಿದ್ದು ಈ ಬಗ್ಗೆ ಒಂದೊಂದೆ ವಿಚಾರ ಬಹಿರಂಗವಾಗುತ್ತಿದೆ. ಇದು ಈ ವರ್ಷ ಫೆಬ್ರವರಿಯಲ್ಲಿ ಅನಾವರಣಗೊಂಡ ಸ್ಯಾಮ್​ಸಂಗ್ ಗ್ಯಾಲಕ್ಸಿ S22 ಸರಣಿಯ ಮುಂದಿನ ಆವೃತ್ತಿಯಾಗಿದೆ. ಗ್ಯಾಲಕ್ಸಿ S22 ಸರಣಿಯಲ್ಲಿ S22 ಆಲ್ಟ್ರಾ ಸ್ಮಾರ್ಟ್​​ಫೋನ್ ಎಲ್ಲರ ಹುಬ್ಬೇರುವಂತೆ ಮಾಡಿದ್ದು ಗೊತ್ತೇ ಇದೆ. ಇದರಲ್ಲಿರುವ ಫೀಚರ್ಸ್, ಅದರಲ್ಲೂ 108 ಮೆಗಾಫಿಕ್ಸೆಲ್ ಕ್ಯಾಮೆರಾಕ್ಕೆ ಎಲ್ಲರೂ ಫಿದಾ ಆಗಿದ್ದರು. ಇದೀಗ ಗ್ಯಾಲಕ್ಸಿ S22 ಆಲ್ಟ್ರಾ (Galaxy S23 Ultra) ಬಗ್ಗೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ.

ಕಳೆದ ಕೆಲವು ತಿಂಗಳುಗಳಿಂದ ಗ್ಯಾಲಕ್ಸಿ S22 ಆಲ್ಟ್ರಾ ಬಗ್ಗೆ ಒಂದಲ್ಲ ಒಂದು ಮಾಹಿತಿ ಸೋರಿಕೆಯಾಗುತ್ತಲೇ ಇದೆ. ಇದೀಗ ಈ ಫೋನಿನಲ್ಲಿ ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 2 ಪ್ರೊಸೆಸರ್ ಇರಲಿದೆ ಎಂದು ಹೇಳಲಾಗಿದೆ. ಇದು ಅತ್ಯಂತ ಬಲಿಷ್ಠ ಪ್ರೊಸೆಸರ್ ಆಗಿದ್ದು ವೇಗವಾಗಿ ಕಾರ್ಯನಿರ್ವಹಿಸಲಿದೆಯಂತೆ. ಇದರ ಜೊತೆಗೆ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದೊಂದಿಗೆ ಲಾಂಚ್ ಆಗಲಿದೆ ಎನ್ನಲಾಗಿದೆ.

ಕೊರಿಯಾ ಐಟ ನ್ಯೂಸ್ ಮಾಡಿರುವ ವರದಿ ಪ್ರಕಾರ, ಗ್ಯಾಲಕ್ಸಿ S22 ಆಲ್ಟ್ರಾ 200 ಮೆಗಾಫಿಕ್ಸೆಲ್ ಕ್ಯಾಮೆರಾದಿಂದ ಆವೃತ್ತವಾಗಿದೆ ಎಂದು ಹೇಳಿದೆ. ಈ ಫೋನ್ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಲಿದೆ. ಇನ್ನೊಂದು ಶಾಕಿಂಗ್ ವಿಚಾರ ಎಂದರೆ S22 ಆಲ್ಟ್ರಾದಲ್ಲಿ ಕ್ವಾಲ್ಕಂ 3D ಸೋನಿಕ್ ಮ್ಯಾಕ್ಸ್ ಫಿಂಗರ್​ಪ್ರಿಂಟ್ ಅಳವಡಿಸಲಾಗಿದೆಯಂತೆ. ಇದರ ಮೂಲಕ ನೀವು ಕ್ಷಣಾರ್ಧದಲ್ಲಿ ಮೊಬೈಲ್ ಅನ್ನು ಅನ್ಲಾಕ್ ಮಾಡಬಹುದು.

ಇದನ್ನೂ ಓದಿ
Image
Tech Tips: ಯೂಟ್ಯೂಬ್​ನಲ್ಲಿ ವಿಡಿಯೋ ನೋಡುವಾಗ ಜಾಹೀರಾತು ಬಾರದಂತೆ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್
Image
Google Photos: ಗೂಗಲ್ ಫೋಟೋಸ್​ನಿಂದ ಡಿಲೀಟ್ ಆದ ಫೈಲ್​ಗಳನ್ನು ಮರಳಿ ಪಡೆಯುವುದು ಹೇಗೆ?
Image
Big Diwali sale: ಇಂದು​ ಬಿಗ್ ದಿವಾಳಿ ಸೇಲ್ ಕೊನೇ ದಿನ: ಐಫೋನ್ 13 ಮೇಲಿದೆ ಭರ್ಜರಿ ಆಫರ್
Image
WhatsApp: ಬ್ಯಾನ್ ಆದ ವಾಟ್ಸ್​ಆ್ಯಪ್ ಅಕೌಂಟ್ ಅನ್ನು ರಿಕವರಿ ಮಾಡೋದು ಹೇಗೆ?

ಗ್ಯಾಲಕ್ಸಿ S22 ಅಲ್ಟ್ರಾ ಹೇಗಿದೆ?:

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 12MP+ 10MP+ 10MP ಸ್ಪೋರ್ಟ್ಸ್ ಕ್ಯಾಮೆರಾ ನೀಡಲಾಗಿದೆ. 40 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ಕೂಡ ಇದೆ. 100X ಜೂಮ್ ಫೀಚರ್ ಇದರ ಹೈಲೇಟ್. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಈ ಫೋನಿನ 12GB RAM ಮತ್ತು 253GB ಸ್ಟೋರೇಜ್ ಆಯ್ಕೆಯ ಬೆಲೆ 1,09,999 ರೂ. 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

Published On - 2:30 pm, Mon, 24 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ