Galaxy S23 Series: ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸರಣಿ ಡಿಸೈನ್ ಸೋರಿಕೆ: ಹೇಗಿದೆ ನೋಡಿ ಹೊಸ ಸ್ಮಾರ್ಟ್‌ಫೋನ್
Samsung Galaxy S23 Ultra: ಕಳೆದ ಕೆಲವು ತಿಂಗಳುಗಳಿಂದ ಗ್ಯಾಲಕ್ಸಿ S23 ಆಲ್ಟ್ರಾ ಬಗ್ಗೆ ಒಂದಲ್ಲ ಒಂದು ಮಾಹಿತಿ ಸೋರಿಕೆಯಾಗುತ್ತಲೇ ಇದೆ. ಇದೀಗ ಈ ಫೋನಿನ ಡಿಸೈನ್ ಫೋಟೋ ಲೀಕ್ ಆಗಿದೆ. ಗ್ಯಾಲಕ್ಸಿ S23 ಆಲ್ಟ್ರಾ ಫೋನ್ ಥೇಟ್ ಗ್ಯಾಲಕ್ಸಿ S22 ಆಲ್ಟ್ರಾ ರೀತಿಯಲ್ಲೇ ಇದೆ.
ಸ್ಯಾಮ್‌ಸಂಗ್ ಕಂಪನಿ ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಸ್ಯಾಮ್‌ಸಂಗ್ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S23 (Samsung Galaxy S23 Series) ಸರಣಿಯ ಸ್ಮಾರ್ಟ್‌ಫೋನ್ ಅನ್ನು ತಯಾರಿ ಮಾಡುವ ಕಾರ್ಯದಲ್ಲಿರುವ ತೊಡಗಿಕೊಂಡಿದ್ದು ಈ ಬಗ್ಗೆ ಒಂದೊಂದೆ ವಿಚಾರ ಬಹಿರಂಗವಾಗುತ್ತಿದೆ. ಇದು ಈ ವರ್ಷ ಫೆಬ್ರವರಿಯಲ್ಲಿ ಅನಾವರಣಗೊಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸರಣಿಯ ಮುಂದಿನ ಆವೃತ್ತಿಯಾಗಿದೆ. ಗ್ಯಾಲಕ್ಸಿ S22 ಸರಣಿಯಲ್ಲಿ S22 ಆಲ್ಟ್ರಾ ಸ್ಮಾರ್ಟ್‌ಫೋನ್ ಎಲ್ಲರ ಹುಬ್ಬೇರುವಂತೆ ಮಾಡಿದ್ದು ಗೊತ್ತೇ ಇದೆ. ಇದರಲ್ಲಿರುವ ಫೀಚರ್ಸ್, ಅದರಲ್ಲೂ 108 ಮೆಗಾಫಿಕ್ಸೆಲ್ ಕ್ಯಾಮೆರಾಕ್ಕೆ ಎಲ್ಲರೂ ಫಿದಾ ಆಗಿದ್ದರು. ಇದೀಗ ಗ್ಯಾಲಕ್ಸಿ S23 ಆಲ್ಟ್ರಾ (Galaxy S23 Ultra) ಬಗ್ಗೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ.
ಕಳೆದ ಕೆಲವು ತಿಂಗಳುಗಳಿಂದ ಗ್ಯಾಲಕ್ಸಿ S23 ಆಲ್ಟ್ರಾ ಬಗ್ಗೆ ಒಂದಲ್ಲ ಒಂದು ಮಾಹಿತಿ ಸೋರಿಕೆಯಾಗುತ್ತಲೇ ಇದೆ. ಇದೀಗ ಈ ಫೋನಿನ ಡಿಸೈನ್ ಫೋಟೋ ಲೀಕ್ ಆಗಿದೆ. ಗ್ಯಾಲಕ್ಸಿ S23 ಆಲ್ಟ್ರಾ ಫೋನ್ ಥೇಟ್ ಗ್ಯಾಲಕ್ಸಿ S22 ಆಲ್ಟ್ರಾ ರೀತಿಯಲ್ಲೇ ಇದೆ. ಇದರಲ್ಲಿರುವ ಕ್ವಾಡ್ ಕ್ಯಾಮೆರಾ ಒಂದೇ ಮಾದರಿಯಲ್ಲಿದೆ. ಗ್ಯಾಲಕ್ಸಿ S23 ಮತ್ತು ಗ್ಯಾಲಕ್ಸಿ S23+ ಡಿಸೈನ್ನಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇನ್ನು ಗ್ಯಾಲಕ್ಸಿ S23 ಆಲ್ಟ್ರಾದಲ್ಲಿ ಕ್ವಾಲ್ಕಂ ಸ್ನಾಪ್ಡ್ರಾಗನ್ 8 Gen 2 ಪ್ರೊಸೆಸರ್ ಇರಲಿದೆ ಎಂದು ಹೇಳಲಾಗಿದೆ. ಇದು ಅತ್ಯಂತ ಬಲಿಷ್ಠ ಪ್ರೊಸೆಸರ್ ಆಗಿದ್ದು ವೇಗವಾಗಿ ಕಾರ್ಯನಿರ್ವಹಿಸಲಿದೆಯಂತೆ. ಇದರ ಜೊತೆಗೆ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದೊಂದಿಗೆ ಲಾಂಚ್ ಆಗಲಿದೆ ಎನ್ನಲಾಗಿದೆ.
Nokia C31: ವಿದೇಶದಲ್ಲಿ ಧೂಳೆಬ್ಬಿಸಿದ ನೋಕಿಯಾ C31 ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?
ಕೊರಿಯಾ ಐಟ ನ್ಯೂಸ್ ಮಾಡಿರುವ ವರದಿ ಪ್ರಕಾರ, ಗ್ಯಾಲಕ್ಸಿ S23 ಆಲ್ಟ್ರಾ 200 ಮೆಗಾಫಿಕ್ಸೆಲ್ ಕ್ಯಾಮೆರಾದಿಂದ ಆವೃತ್ತವಾಗಿದೆ ಎಂದು ಹೇಳಿದೆ. ಈ ಫೋನ್ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಲಿದೆ. ಇನ್ನೊಂದು ಶಾಕಿಂಗ್ ವಿಚಾರ ಎಂದರೆ S23 ಆಲ್ಟ್ರಾದಲ್ಲಿ ಕ್ವಾಲ್ಕಂ 3D ಸೋನಿಕ್ ಮ್ಯಾಕ್ಸ್ ಫಿಂಗರ್ಪ್ರಿಂಟ್ ಅಳವಡಿಸಲಾಗಿದೆಯಂತೆ. ಇದರ ಮೂಲಕ ನೀವು ಕ್ಷಣಾರ್ಧದಲ್ಲಿ ಮೊಬೈಲ್ ಅನ್ನು ಅನ್ಲಾಕ್ ಮಾಡಬಹುದು.
ಗ್ಯಾಲಕ್ಸಿ S22 ಅಲ್ಟ್ರಾ ಹೇಗಿದೆ?:
ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.
ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 12MP+ 10MP+ 10MP ಸ್ಪೋರ್ಟ್ಸ್ ಕ್ಯಾಮೆರಾ ನೀಡಲಾಗಿದೆ. 40 ಮೆಗಾಫಿಕ್ಸೆಲ್ನ ಸೆಲ್ಫೀ ಕ್ಯಾಮೆರಾ ಕೂಡ ಇದೆ. 100X ಜೂಮ್ ಫೀಚರ್ ಇದರ ಹೈಲೇಟ್. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.
ಈ ಫೋನಿನ 12GB RAM ಮತ್ತು 253GB ಸ್ಟೋರೇಜ್ ಆಯ್ಕೆಯ ಬೆಲೆ 1,09,999 ರೂ. 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್/ A ಜಿಪಿಎಸ್, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:24 pm, Sun, 18 December 22