Galaxy S23 Ultra: ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಆಲ್ಟ್ರಾ ಸ್ಮಾರ್ಟ್​​ಫೋನ್ ಬಗ್ಗೆ ಹೊರಬಿತ್ತು ಶಾಕಿಂಗ್ ವಿಚಾರ

ಇದೀಗ ಗ್ಯಾಲಕ್ಸಿ S22 ಆಲ್ಟ್ರಾ (Galaxy S23 Ultra) ಬಗ್ಗೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ. ಈ ಫೋನ್ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದೊಂದಿಗೆ (200MP Camera Phone) ಲಾಂಚ್ ಆಗಲಿದೆಯಂತೆ.

Galaxy S23 Ultra: ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಆಲ್ಟ್ರಾ ಸ್ಮಾರ್ಟ್​​ಫೋನ್ ಬಗ್ಗೆ ಹೊರಬಿತ್ತು ಶಾಕಿಂಗ್ ವಿಚಾರ
Samsung Galaxy S23 Ultra
Follow us
TV9 Web
| Updated By: Vinay Bhat

Updated on:Aug 20, 2022 | 2:15 PM

ಸ್ಯಾಮ್​ಸಂಗ್ ಕಂಪನಿ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S23 (Samsung Galaxy S23 Series) ಸರಣಿಯ ಸ್ಮಾರ್ಟ್​​ಫೋನ್ ಅನ್ನು ತಯಾರಿ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಇದು ಈ ವರ್ಷ ಫೆಬ್ರವರಿಯಲ್ಲಿ ಅನಾವರಣಗೊಂಡ ಸ್ಯಾಮ್​ಸಂಗ್ ಗ್ಯಾಲಕ್ಸಿ S22 ಸರಣಿಯ ಮುಂದಿನ ಆವೃತ್ತಿಯಾಗಿದೆ. ಗ್ಯಾಲಕ್ಸಿ S22 ಸರಣಿಯಲ್ಲಿ S22 ಆಲ್ಟ್ರಾ ಸ್ಮಾರ್ಟ್​​ಫೋನ್ ಎಲ್ಲರ ಹುಬ್ಬೇರುವಂತೆ ಮಾಡಿದ್ದು ಗೊತ್ತೇ ಇದೆ. ಇದರಲ್ಲಿರುವ ಫೀಚರ್ಸ್, ಅದರಲ್ಲೂ 108 ಮೆಗಾಫಿಕ್ಸೆಲ್ ಕ್ಯಾಮೆರಾಕ್ಕೆ ಎಲ್ಲರೂ ಫಿದಾ ಆಗಿದ್ದರು. ಇದೀಗ ಗ್ಯಾಲಕ್ಸಿ S22 ಆಲ್ಟ್ರಾ (Galaxy S23 Ultra) ಬಗ್ಗೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ. ಈ ಫೋನ್ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದೊಂದಿಗೆ (200MP Camera Phone) ಲಾಂಚ್ ಆಗಲಿದೆಯಂತೆ.

ಕೊರಿಯಾ ಐಟ ನ್ಯೂಸ್ ಮಾಡಿರುವ ವರದಿ ಪ್ರಕಾರ, ಗ್ಯಾಲಕ್ಸಿ S22 ಆಲ್ಟ್ರಾ 200 ಮೆಗಾಫಿಕ್ಸೆಲ್ ಕ್ಯಾಮೆರಾದಿಂದ ಆವೃತ್ತವಾಗಿದೆ ಎಂದು ಹೇಳಿದೆ. ಈ ಫೋನ್ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಲಿದೆ. ಇನ್ನೊಂದು ಶಾಕಿಂಗ್ ವಿಚಾರ ಎಂದರೆ S22 ಆಲ್ಟ್ರಾದಲ್ಲಿ ಕ್ವಾಲ್ಕಂ 3D ಸೋನಿಕ್ ಮ್ಯಾಕ್ಸ್ ಫಿಂಗರ್​ಪ್ರಿಂಟ್ ಅಳವಡಿಸಲಾಗಿದೆಯಂತೆ. ಇದರ ಮೂಲಕ ನೀವು ಕ್ಷಣಾರ್ಧದಲ್ಲಿ ಮೊಬೈಲ್ ಅನ್ನು ಅನ್ಲಾಕ್ ಮಾಡಬಹುದು.

ಗ್ಯಾಲಕ್ಸಿ S22 ಅಲ್ಟ್ರಾ ಹೇಗಿದೆ?:

ಇದನ್ನೂ ಓದಿ
Image
Fake App: ಪ್ಲೇ ಸ್ಟೋರ್​ನಲ್ಲಿ 35 ಅಪಾಯಕಾರಿ ಆ್ಯಪ್ ಪತ್ತೆ: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ
Image
ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ಹಾನರ್‌ 70 5G ಸ್ಮಾರ್ಟ್‌ಫೋನ್‌: ಏನಿದೆ ಫೀಚರ್ಸ್?, ಬೆಲೆ ಎಷ್ಟು?
Image
OnePlus Nord CE 2 Lite: ಒನ್​​ಪ್ಲಸ್ ಕಂಪನಿಯ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ
Image
5ಜಿ ಸೇವೆ ಆರಂಭಕ್ಕೆ ಸಿದ್ಧವಾಗಿರುವಂತೆ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ; 4ಜಿ ಡಾಟಾಗೂ 5ಜಿ ಡಾಟಾಗೂ ಇರುವ ವ್ಯತ್ಯಾಸ, ದರ ಎಷ್ಟು ?

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 12MP+ 10MP+ 10MP ಸ್ಪೋರ್ಟ್ಸ್ ಕ್ಯಾಮೆರಾ ನೀಡಲಾಗಿದೆ. 40 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ಕೂಡ ಇದೆ. 100X ಜೂಮ್ ಫೀಚರ್ ಇದರ ಹೈಲೇಟ್. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಈ ಫೋನಿನ 12GB RAM ಮತ್ತು 253GB ಸ್ಟೋರೇಜ್ ಆಯ್ಕೆಯ ಬೆಲೆ 1,09,999 ರೂ. 5G, 4G LTE, ವೈ ಫೈ 6E, ಬ್ಲೂಟೂತ್ v5.2, ಜಿಪಿಎಸ್‌/ A ಜಿಪಿಎಸ್‌, NFC ಮತ್ತು USB ಟೈಪ್ ಸಿ ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆ ಗಳನ್ನು ಒಳಗೊಂಡಿದೆ.

Published On - 2:13 pm, Sat, 20 August 22