Galaxy Z Fold 3: ಸ್ಯಾಮ್​ಸಂಗ್​ನಿಂದ ಅಂಡರ್‌ ಡಿಸ್‌ಪ್ಲೇ ಇರುವ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

Samsung Foldable phones: ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ.

Galaxy Z Fold 3: ಸ್ಯಾಮ್​ಸಂಗ್​ನಿಂದ ಅಂಡರ್‌ ಡಿಸ್‌ಪ್ಲೇ ಇರುವ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?
Samsung Galaxy Fold
Follow us
TV9 Web
| Updated By: Vinay Bhat

Updated on: Aug 17, 2021 | 1:54 PM

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್‌ (Samsung) ಕಂಪೆನಿಗೆ ಭಾರತ ನೆಚ್ಚಿನ ತಾಣವಾಗಿದದೆ. ತಿಂಗಳಿಗೆ ಕಡಿಮೆ ಎಂದರೂ ಎರಡು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತದೆ. ಸದ್ಯ ಸ್ಯಾಮ್​ಸಂಗ್ ಹೊಸ ದಾಗಿ ಗ್ಯಾಲಕ್ಸಿ ಫೋಲ್ಡ್‌ 3 ಮತ್ತು ಗ್ಯಾಲಕ್ಸಿ ಫ್ಲಿಪ್ 3 (Samsung Galaxy Z Fold 3, Samsung Galaxy Z Flip 3) ಸ್ಮಾರ್ಟ್‌ಫೋನ್‌ಗಳನ್ನು ದೇಶದಲ್ಲಿ ಅನಾವರಣ ಮಾಡಿದ. ಅಂಡರ್‌ ಡಿಸ್‌ಪ್ಲೇ ಕ್ಯಾಮೆರಾ, ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಸೇರಿದಂತೆ ಅನೇಕ ಅಮೋಘ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಫೋನ್‌ಗಳ ಬೆಲೆ ಕೊಂಚ ದುಬಾರಿ. ಹಾಗಾದ್ರೆ ಇದರ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ಗ್ಯಾಲಕ್ಸಿ ಫೋಲ್ಡ್‌ 3:

ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ. ಡಿಸ್‌ಪ್ಲೇ ಅನುಪಾತವು 22.5:18 ಆಗಿದೆ. ಹಾಗೆಯೇ ಫೋನಿನ ಕವರ್‌ ಸ್ಕ್ರೀನ್ 6.2-ಇಂಚಿನ HD+ (832×2,268 ಪಿಕ್ಸೆಲ್‌ಗಳು) ಡೈನಾಮಿಕ್ AMOLED 2X ಡಿಸ್‌ಪ್ಲೇ 120Hz ರಿಫ್ರೆಶ್ ದರದಲ್ಲಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI ಬೆಂಬಲಿತ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್ ಇದೆ. ಹಿಂಬದಿಯಲ್ಲಿ ಒಟ್ಟು ಮೂರು ರಿಯರ್‌ ಕ್ಯಾಮೆರಾ ನೀಡಲಾಗಿದೆ. ಇದರಲ್ಲಿನ ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾ 10 ಎಂಪಿ ಸೆನ್ಸಾರ್‌ನಲ್ಲಿದೆ.

ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ 4,400mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 25W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಈ ಸ್ಮಾರ್ಟ್​ಫೋನಿನ 8GB RAM ಮತ್ತು 128GB ವೇರಿಯಂಟ್ ದರವು 84,999 ರೂ. ಆಗಿದೆ. 8GB RAM ಮತ್ತು 256GB ವೇರಿಯಂಟ್​ಗೆ 88,999 ರೂ. ನಿಗದಿ ಮಾಡಲಾಗಿದ.

ಗ್ಯಾಲಕ್ಸಿ ಫ್ಲಿಪ್ 3:

ಗ್ಯಾಲಕ್ಸಿ ಫ್ಲಿಪ್ 3 ಫೋನ್‌ 1,080×2,640 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥದೊಂದಿಗೆ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. 5nm ಆಕ್ಟಾ ಕೋರ್ SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಸೆಲ್ಫಿ ಕ್ಯಾಮೆರಾವು 10 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 15W ಫಾಸ್ಟ್‌ ಚಾರ್ಜಿಂಗ್ ಜೊತೆಗೆ 3,300mAh ಡ್ಯುಯಲ್ ಸೆಲ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಈ ಸ್ಮಾರ್ಟ್​ಫೋನಿನ 12GB RAM ಮತ್ತು 256GB ವೇರಿಯಂಟ್ ಬೆಲೆಯು 1,49,999 ರೂ. ಆಗಿದೆ. ಇನ್ನೂ 12GB RAM ಮತ್ತು 512GB ಸ್ಟೋರೇಜ್‌ ಸಾಮರ್ಥ್ಯಕ್ಕೆ 1,57,999 ರೂ. ನಿಗದಿ ಮಾಡಲಾಗಿದೆ.

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಫೋನ್ ಸೇಲ್ ಕಾಣಲಿದೆ. ಆಗಸ್ಟ್ 24ಕ್ಕೆ ಬುಕ್ಕಿಂಗ್ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 10ಕ್ಕೆ ಮಾರಾಟ ಕಾಣಲಿದೆ.

Jio Offer: ಜಿಯೋ ಧಮಾಕಾ ಆಫರ್: 1095 GB ಡೇಟಾ ಜೊತೆ 1 ವರ್ಷದವರೆಗೆ ಉಚಿತ ಕರೆ ಸೌಲಭ್ಯ

Smartphone Tips 3: ಹೊಸ ಮೊಬೈಲ್ ಫೋನ್ ಖರೀದಿಸುವಾಗ ಎಲ್ಲರಂತೆ ನೀವು ಕೂಡ ಈ ತಪ್ಪು ಮಾಡದಿರಿ!

(Samsung Galaxy Z Fold 3 and Samsung Galaxy Z Flip 3 Foldable SmartPhones Launched in India Here is Price and specs)

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ