Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy M52 5G: ಸ್ಯಾಮ್​ಸಂಗ್ ವೆಬ್​ಸೈಟ್​ನಲ್ಲಿ ದೀಪಾವಳಿಗೆ ಬಂಪರ್ ಆಫರ್: ಕೈಗೆಟಕುವ ದರದಲ್ಲಿ ಗ್ಯಾಲಕ್ಸಿ M52 5G

ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M52 5G ಫೋನಿನ ಬೆಲೆಯಲ್ಲಿ ಕಡಿತ ಮಾಡಿದೆ. ದೀಪಾವಳಿ ಪ್ರಯುಕ್ತ ಗ್ರಾಹಕರು ಈ ಸ್ಮಾರ್ಟ್‌ಫೋನ್‌ ಅನ್ನು 5,000 ರೂ.ಗಳ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ.

Galaxy M52 5G: ಸ್ಯಾಮ್​ಸಂಗ್ ವೆಬ್​ಸೈಟ್​ನಲ್ಲಿ ದೀಪಾವಳಿಗೆ ಬಂಪರ್ ಆಫರ್: ಕೈಗೆಟಕುವ ದರದಲ್ಲಿ ಗ್ಯಾಲಕ್ಸಿ M52 5G
Samsung Galaxy M52 5G
Follow us
TV9 Web
| Updated By: Vinay Bhat

Updated on: Oct 30, 2021 | 3:29 PM

ದೀಪಾವಳಿ (Deepavali) ಹಬ್ಬ ಆರಂಭವಾಗುತ್ತಿದ್ದಂತೆ ಪ್ರಸಿದ್ಧ ಇ ಕಾಮರ್ಸ್ ತಾಣಗಳಾದ ಫ್ಲಿಪ್​ಕಾರ್ಟ್ (Flipkart) ಮತ್ತು ಅಮೆಜಾನ್ (Amazon) ಭರ್ಜರಿ ಡಿಸ್ಕೌಂಟ್​ಗಳ ಮೇಳವನ್ನು ಶುರುಮಾಡಿದೆ. ಆದರೆ, ಇವುಗಳ ನಡುವೆ ಸ್ಯಾಮ್​ಸಂಗ್ (Samsung) ಕಂಪನಿ ತನ್ನ ವೆಬ್​ಸೈಟ್​ನಲ್ಲಿ ಸದ್ದಿಲ್ಲದೆ ದೀಪಾವಳಿ ಆಫರ್ ನಡೆಸುತ್ತಿದ್ದು, ಅನೇಕ ಸ್ಮಾರ್ಟ್​ಫೋನ್​ಗಳು (Smartphone) ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಪ್ರಮುಖವಗಾಗಿ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಎಮ್​52 5ಜಿ (Samsung Galaxy M52 5G) ಸ್ಮಾರ್ಟ್‌ಫೋನಿಗೆ ಭರ್ಜರಿ ಡಿಸ್ಕೌಂಟ್‌ ಘೋಷಿಸಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M52 5G ಫೋನಿನ ಬೆಲೆಯಲ್ಲಿ ಕಡಿತ ಮಾಡಿದೆ. ದೀಪಾವಳಿ ಪ್ರಯುಕ್ತ ಗ್ರಾಹಕರು ಈ ಸ್ಮಾರ್ಟ್‌ಫೋನ್‌ ಅನ್ನು 5,000 ರೂ.ಗಳ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಕಳೆದ ತಿಂಗಳು ಭಾರತದಲ್ಲಿ ಬೇಸ್‌ ವೇರಿಯಂಟ್‌ 29,999 ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಬಿಡುಗಡೆ ಆಗಿತ್ತು. ಇದೀಗ ಬೆಲೆ ಇಳಿಕೆಯಿಂದಾಗಿ 6GB+128GB ಸ್ಟೋರೇಜ್‌ನ ಬೇಸ್ ವೇರಿಯಂಟ್‌ 24,999 ರೂ. ಗಳಗೆ ಮಾರಾಟ ಆಗುತ್ತಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್-ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಆಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒಂದು UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್ ಆಂಗಲ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

5,000 mAh ಬ್ಯಾಟರಿ ಯನ್ನು ಒಳಗೊಂಡಿದ್ದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಸಿಂಗಲ್‌ ಚಾರ್ಜ್‌ ನಲ್ಲಿ 48 ಗಂಟೆ ಗಳ ಟಾಕ್ ಟೈಮ್ ಅಥವಾ 20 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS, A-GPS, NFC, ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ ಸದ್ಯ ಕೊಡುಗೆಯಲ್ಲಿ 24,999 ರೂ. ಗೆ ಖರೀದಿsಬಹುದು. ಅದೇ ರೀತಿ 8GB RAM ಮತ್ತು 128GB ವೇರಿಯಂಟ್ ಆಯ್ಕೆಗೆ 26,999 ರೂ. ಬೆಲೆ ನಿಗದಿ ಮಾಡಲಾಗಿದೆ.

Vodafone Idea: ವೊಡಾಫೋನ್-ಐಡಿಯಾ ಸಿಮ್ ಖರೀದಿಗೆ ಮುಗಿಬಿದ್ದ ಜನರು: ಇದಕ್ಕೆ ಕಾರಣ ಆ ಒಂದು ಆಫರ್

JioPhone Next: ರಿವೀಲ್ ಆಯ್ತು ಜಿಯೋಫೋನ್‌ ನೆಕ್ಸ್ಟ್‌ ಸ್ಮಾರ್ಟ್​ಫೋನ್ ಬೆಲೆ: ದೀಪಾವಳಿಯಂದು ಖರೀದಿಗೆ ಲಭ್ಯ

(Samsung has cut the price of its Samsung Galaxy M52 5G ahead of Diwali)

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ