Galaxy A04s: ಸ್ಯಾಮ್​ಸಂಗ್ ಕಂಪನಿಯಿಂದ ಕೇವಲ 13,499 ರೂ. ಗೆ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್‌ ಬಿಡುಗಡೆ: ಏನಿದೆ ಫೀಚರ್ಸ್?

ಸ್ಯಾಮ್​ಸಂಗ್ ಕಂಪನಿ ದೇಶದಲ್ಲಿ ಹೊಸ ಗ್ಯಾಲಕ್ಸಿ ಎ04ಎಸ್ (Samsung Galaxy A04s) ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಇದುಕೂಡ ಒಂದು ರೀತಿಯ ಬಜೆಟ್ ಬೆಲೆಯ ಫೋನಾಗಿದ್ದರೂ ಆಕ್ಟಾ-ಕೋರ್ ಎಕ್ಸಿನೋಸ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

Galaxy A04s: ಸ್ಯಾಮ್​ಸಂಗ್ ಕಂಪನಿಯಿಂದ ಕೇವಲ 13,499 ರೂ. ಗೆ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್‌ ಬಿಡುಗಡೆ: ಏನಿದೆ ಫೀಚರ್ಸ್?
Samsung Galaxy A04s
Follow us
TV9 Web
| Updated By: Vinay Bhat

Updated on:Oct 04, 2022 | 12:49 PM

ಭಾರತದಲ್ಲಿ ಸ್ಯಾಮ್​ಸಂಗ್ (Samsung) ಕಂಪನಿಯ ಮೊಬೈಲ್​ಗಳಿಗೆ ವಿಶೇಷ ಬೇಡಿಕೆ ಇದೆ. ಯಾಕೆಂದರೆ ಸ್ಯಾಮ್​ಸಂಗ್ ಬಜೆಟ್ ಬೆಲೆಯಿಂದ ಹಿಡಿದು ಮಧ್ಯಮ ಹಾಗೂ ಹೈ ರೇಂಜ್ ಮಾದರಿಯ ವರೆಗೆ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಕಡಿಮೆ ಬೆಲೆಯ ಸ್ಯಾಮ್​ಸಂಗ್ ಫೋನುಗಳಿಗೆ ದೇಶದಲ್ಲಿ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿ ಭಾರತದಲ್ಲಿ ಹೆಚ್ಚು ಬಜೆಟ್ ಬೆಲೆಗೆವೇ ಫೋನ್ ಅನಾವರಣ ಮಾಡುತ್ತಿದೆ. ಅದರಲ್ಲೂ ತನ್ನ A ಸರಣಿಯ ಫೋನ್​ಗೆ ಅತ್ಯುತ್ತಮ ಪ್ರತಿಕ್ರಿಯೆ ಕೇಳಿಬರುತ್ತದೆ. ಇದಕ್ಕಾಗಿ ಇದೀಗ ಸ್ಯಾಮ್​ಸಂಗ್ ಕಂಪನಿ ದೇಶದಲ್ಲಿ ಹೊಸ ಗ್ಯಾಲಕ್ಸಿ ಎ04ಎಸ್ (Samsung Galaxy A04s) ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಇದುಕೂಡ ಒಂದು ರೀತಿಯ ಬಜೆಟ್ ಬೆಲೆಯ ಫೋನಾಗಿದ್ದರೂ ಆಕ್ಟಾ-ಕೋರ್ ಎಕ್ಸಿನೋಸ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌, ಬಲಿಷ್ಠ ಬ್ಯಾಟರ್ ಸಾಮರ್ಥ್ಯ ನೀಡಲಾಗಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಿ ಅನಾವರಣಗೊಂಡಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,499 ರೂ. ಇದು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಖರೀದಿಗೆ ಲಭ್ಯವಿದೆ. SBI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿ ಮಾಡಿದರೆ 1,000ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಬ್ಲಾಕ್, ಕಾಪರ್ ಅಂಡ್ ಗ್ರೀನ್ ಬಣ್ಣಗಳ ಅನಾವರಣಗೊಂಡಿದೆ.

ಇದನ್ನೂ ಓದಿ
Image
Xiaomi 12T: ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿಂದು 200MP ಕ್ಯಾಮೆರಾದ ಶವೋಮಿ 12T ಸರಣಿ ಬಿಡುಗಡೆ: ಬೆಲೆ ಎಷ್ಟು?
Image
Oppo A16K: ಬಜೆಟ್ ಬೆಲೆಯ ಒಪ್ಪೋ A16K ಸ್ಮಾರ್ಟ್‌ಫೋನ್ ದರದಲ್ಲಿ ಭರ್ಜರಿ ಇಳಿಕೆ: ನೂತನ ದರ ಇಲ್ಲಿದೆ
Image
6G service: ಇನ್ನು ಎಂಟೇ ವರ್ಷಗಳಲ್ಲಿ ಭಾರತಕ್ಕೆ 6G ಸೇವೆ
Image
Moto G72: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದು?, ಎಷ್ಟು ರೂ.

ಏನು ವಿಶೇಷತೆ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್ಪಿನಿಟಿ ವಿ ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಆಕ್ಟಾ-ಕೋರ್ ಎಕ್ಸಿನೋಸ್‌ 850 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI ಕೋರ್ 4.1 ಜೊತೆಗೆ ರನ್ ಆಗುತ್ತದೆ. ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಮೂಲಕ RAM ಅನ್ನು 8GB ವರೆಗೆ ವಿಸ್ತರಿಸಬಹುದಾದ ಆಯ್ಕೆ ಕೂಡ ನೀಡಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ಗಳನ್ನು ನೀಡಲಾಗಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವಿಡಿಯೋ ಚಾಟ್‌ಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಸಿಂಗಲ್‌ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಬ್ಯಾಕ್ ಟೈಂ ನೀಡಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ನೀಡಿಲ್ಲ. ಬದಲಾಗಿ 4G LTE, ವೈಫೈ , ಬ್ಲೂಟೂತ್ v5, ಮತ್ತು GPS/ A-GPS ಸೇರಿವೆ.

Published On - 12:49 pm, Tue, 4 October 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್