ಭಾರತದಲ್ಲಿ ಸ್ಯಾಮ್‌ಸಂಗ್ (Samsung) ಕಂಪನಿಯ ಮೊಬೈಲ್ಗಳಿಗೆ ವಿಶೇಷ ಬೇಡಿಕೆ ಇದೆ. ಯಾಕೆಂದರೆ ಸ್ಯಾಮ್‌ಸಂಗ್ ಬಜೆಟ್ ಬೆಲೆಯಿಂದ ಹಿಡಿದು ಮಧ್ಯಮ ಹಾಗೂ ಹೈ ರೇಂಜ್ ಮಾದರಿಯ ವರೆಗೆ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಕಡಿಮೆ ಬೆಲೆಯ ಸ್ಯಾಮ್‌ಸಂಗ್ ಫೋನುಗಳಿಗೆ ದೇಶದಲ್ಲಿ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿ ಭಾರತದಲ್ಲಿ ಹೆಚ್ಚು ಬಜೆಟ್ ಬೆಲೆಗೆವೇ ಫೋನ್ ಅನಾವರಣ ಮಾಡುತ್ತಿದೆ. ಅದರಲ್ಲೂ ತನ್ನ A ಸರಣಿಯ ಫೋನ್ಗೆ ಅತ್ಯುತ್ತಮ ಪ್ರತಿಕ್ರಿಯೆ ಕೇಳಿಬರುತ್ತದೆ. ಇದಕ್ಕಾಗಿ ಇದೀಗ ಸ್ಯಾಮ್‌ಸಂಗ್ ಕಂಪನಿ ದೇಶದಲ್ಲಿ ಹೊಸ ಗ್ಯಾಲಕ್ಸಿ ಎ04ಎಸ್ (Samsung Galaxy A04s) ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಇದುಕೂಡ ಒಂದು ರೀತಿಯ ಬಜೆಟ್ ಬೆಲೆಯ ಫೋನಾಗಿದ್ದರೂ ಆಕ್ಟಾ-ಕೋರ್ ಎಕ್ಸಿನೋಸ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್, ಬಲಿಷ್ಠ ಬ್ಯಾಟರ್ ಸಾಮರ್ಥ್ಯ ನೀಡಲಾಗಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಿ ಅನಾವರಣಗೊಂಡಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,499 ರೂ. ಇದು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಖರೀದಿಗೆ ಲಭ್ಯವಿದೆ. SBI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 1,000ರೂ. ಕ್ಯಾಶ್‌ಬ್ಯಾಕ್ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ಬ್ಲಾಕ್, ಕಾಪರ್ ಅಂಡ್ ಗ್ರೀನ್ ಬಣ್ಣಗಳ ಅನಾವರಣಗೊಂಡಿದೆ.
ಏನು ವಿಶೇಷತೆ?:
ಸ್ಯಾಮ್‌ಸಂಗ್ ಗ್ಯಾಲಕ್ಸಿ A04s ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್ಪಿನಿಟಿ ವಿ ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಆಕ್ಟಾ-ಕೋರ್ ಎಕ್ಸಿನೋಸ್ 850 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI ಕೋರ್ 4.1 ಜೊತೆಗೆ ರನ್ ಆಗುತ್ತದೆ. ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 8GB ವರೆಗೆ ವಿಸ್ತರಿಸಬಹುದಾದ ಆಯ್ಕೆ ಕೂಡ ನೀಡಲಾಗಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ಗಳನ್ನು ನೀಡಲಾಗಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವಿಡಿಯೋ ಚಾಟ್‌ಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸಿಂಗಲ್ ಚಾರ್ಜ್‌ನಲ್ಲಿ ಎರಡು ದಿನಗಳ ಪ್ಲೇಬ್ಯಾಕ್ ಟೈಂ ನೀಡಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ನೀಡಿಲ್ಲ. ಬದಲಾಗಿ 4G LTE, ವೈಫೈ , ಬ್ಲೂಟೂತ್ v5, ಮತ್ತು GPS/ A-GPS ಸೇರಿವೆ.
Published On - 12:49 pm, Tue, 4 October 22