Galaxy A54 5G: ಒಂದೇ ದಿನ ಎರಡು ಬೊಂಬಾಟ್ ಸ್ಮಾರ್ಟ್​ಫೋನ್ಸ್ ಬಿಡುಗಡೆ ಮಾಡಿದ ಸ್ಯಾಮ್​ಸಂಗ್: ಯಾವುವು?, ಏನು ವಿಶೇಷತೆ?

|

Updated on: Mar 17, 2023 | 11:34 AM

Galaxy A34 5G: ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ54 5ಜಿ (Samsung Galaxy A54 5G) ಮತ್ತು ಗ್ಯಾಲಕ್ಸಿ ಎ34 5ಜಿ (Samsung Galaxy A34 5G) ಫೋನ್ ರಿಲೀಸ್ ಆಗಿದೆ. ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿರುವ ಈ ಸ್ಮಾರ್ಟ್​ಫೋನ್ ಮಧ್ಯಮ ಬೆಲೆಯನ್ನು ಹೊಂದಿದೆ.

ದಕ್ಷಿಣ ಕೊರಿಯಾದ ಸ್ಯಾಮ್​ಸಂಗ್ (Samsung) ಕಂಪನಿಯ ಮೊಬೈಲ್​ಗಳಿಗೆ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ. ಬಜೆಟ್ ಬೆಲೆ, ಮಧ್ಯಮ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಸ್ಯಾಮ್​ಸಂಗ್ ಗ್ಯಾಲಕ್ಸಿ ಸ್ಮಾರ್ಟ್​ಫೋನ್​ಗಳು ದೇಶದಲ್ಲಿ ಭರ್ಜರಿ ಸೇಲ್ ಆಗುತ್ತದೆ. ಇದಕ್ಕಾಗಿಯೆ ಸ್ಯಾಮ್​ಸಂಗ್ ಕಂಪನಿ ಭಾರತದಲ್ಲಿ ಪ್ರಥಮ ಅಥವಾ ದ್ವಿತೀಯ ಸ್ಥಾನದಲ್ಲೇ ಇರುತ್ತದೆ. ಸಾಮಾನ್ಯವಾಗಿ ತಿಂಗಳಿಗೆ ಒಂದು-ಎರಡು ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಕಂಪನಿ ಇದೀಗ ಒಂದೇ ದಿನ ಎರಡು ಹೊಸ ಸ್ಮಾರ್ಟ್​ಫೋನ್​ಗಳನ್ನು ಅನಾವರಣ ಮಾಡಿ ಅಚ್ಚರಿ ಮೂಡಿಸಿದೆ. ಹೌದು, ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ54 5ಜಿ (Samsung Galaxy A54 5G) ಮತ್ತು ಗ್ಯಾಲಕ್ಸಿ ಎ34 5ಜಿ (Samsung Galaxy A34 5G) ಫೋನ್ ರಿಲೀಸ್ ಆಗಿದೆ. ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿರುವ ಈ ಸ್ಮಾರ್ಟ್​ಫೋನ್ ಮಧ್ಯಮ ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G:

ಈ ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ನೀಡಲಾಗಿದೆ. ಬಲಿಷ್ಠವಾದ ಎಕ್ಸಿನೋಸ್ 1380 SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್‌ UI 5.1 ರನ್‌ ಆಗಲಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ ಓಐಎಸ್‌ ಬೆಂಬಲದ 50MP ಪ್ರಾಥಮಿಕ ಕ್ಯಾಮೆರಾ, 12MP ಅಲ್ಟ್ರಾ ವೈಡ್ ಲೆನ್ಸ್ ಹಾಗೂ 5MP ಮ್ಯಾಕೋ ಲೆನ್ಸ್ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ. 32 ಮೆಗಾಪಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ಅಳವಡಿಸಲಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ.

WhatsApp New Feature: ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್: ಇನ್ಮುಂದೆ ಮೆಸೇಜ್ ಬಂದರೆ ನಂಬರ್ ಕಾಣಿಸುವುದಿಲ್ಲ

ಇದನ್ನೂ ಓದಿ
Airtel 5G: 265ಕ್ಕೂ ಅಧಿಕ ನಗರಗಳಲ್ಲಿ ಏರ್ಟೆಲ್ 5G ಲಾಂಚ್: ಪ್ಲಾನ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
iPhone 11: ವಿಶೇಷ ಆಫರ್​ನಲ್ಲಿ ₹17,999ಕ್ಕೆ ಆ್ಯಪಲ್ iPhone 11 64 GB ಲಭ್ಯ
Jio 5G Recharge Offer: ರಿಲಯನ್ಸ್ ಜಿಯೋ ₹2,999 ರೀಚಾರ್ಜ್, 1 ವರ್ಷ ವ್ಯಾಲಿಡಿಟಿ, ಪ್ರತಿದಿನ 2.5GB 5G
Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ ಮೋಟೋ G73 5G ಫೋನ್‌ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್‌ ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಇದರ 8GB RAM +128GB ಸ್ಟೋರೇಜ್ ವೇರಿಯಂಟ್‌ಗೆ 38,999 ರೂ. ಇದೆ. ಹಾಗೆಯೆ 8GB RAM +256GB ವೇರಿಯಂಟ್‌ಗೆ 40,999 ರೂ. ನಿಗದಿ ಮಾಡಲಾಗಿದೆ. ಮಾರ್ಚ್ 28 ರಿಂದ ಸ್ಯಾಮ್‌ಸಂಗ್‌ನ ಆನ್‌ಲೈನ್ ಸ್ಟೋರ್, ಪ್ರಮುಖ ಇ-ಕಾಮರ್ಸ್ ಸೈಟ್‌ಗಳಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G:

ಈ ಸ್ಮಾರ್ಟ್​ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಜೊತೆಗೆ ಮಾಲಿ-G68 MC4 GPU ಸಪೋರ್ಟ್ ಪಡೆದಿದೆ. ಹಾಗೆಯೇ ಆಂಡ್ರಾಯ್ಡ್‌ 13 ಓಎಸ್​ನಿಂದ ರನ್ ಆಗುತ್ತದೆ. ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿವೆ. ಸೆಲ್ಫಿಗಾಗಿ 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ನೀಡಲಾಗಿದೆ. 5000mAh ಸಾಮರ್ಥ್ಯದ ಬ್ಯಾಟರಿಗೆ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯ ಮೂಲಕ ಖರೀದಿಸಬಹುದು. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 30,999ರೂ. ಇದೆ. ಹಾಗೆಯೆ 8GB RAM + 256GB ವೇರಿಯಂಟ್ ಬೆಲೆ 32,999ರೂ. ಆಗಿದೆ. ಈ ಫೋನ್ ಮಾರ್ಚ್ 28ರಿಂದ ಖರೀದಿಗೆ ಲಭ್ಯವಾಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Fri, 17 March 23