Samsung Galaxy S23 series: ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸರಣಿ ಅನಾವರಣ: ಟೆಕ್ ಪ್ರಿಯರನ್ನು ದಂಗಾಗಿಸಿದೆ ಈ ಸ್ಮಾರ್ಟ್​ಫೋನ್

Galaxy S23, Galaxy S23 Plus, Galaxy S23 Ultra: ಇದರಲ್ಲಿ ಗ್ಯಾಲಕ್ಸಿ S23, ಗ್ಯಾಲಕ್ಸಿ S23 ಪ್ಲಸ್‌ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ (Samsung Galaxy S23 Ultra) ಹೀಗೆ ಮೂರು ಮಾದರಿಯ ಫೋನ್​ಗಳಿಂದ ಕೂಡಿದೆ. ದುಬಾರಿ ಬೆಲೆಯ ಈ ಫೋನಿನ ಫೀಚರ್​ಗಳನ್ನು ಕಂಡು ಟೆಕ್ ಪ್ರಿಯರು ದಂಗಾಗಿದ್ದಾರೆ.

Samsung Galaxy S23 series: ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸರಣಿ ಅನಾವರಣ: ಟೆಕ್ ಪ್ರಿಯರನ್ನು ದಂಗಾಗಿಸಿದೆ ಈ ಸ್ಮಾರ್ಟ್​ಫೋನ್
Galaxy S23, Galaxy S23 Plus, Galaxy S23 Ultra
Follow us
| Updated By: Vinay Bhat

Updated on:Feb 02, 2023 | 7:52 AM

ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಟೆಕ್ ಕಂಪನಿ ಸ್ಯಾಮ್‌ಸಂಗ್‌ ಈ ವರ್ಷದ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 (Samsung Galaxy S23 Series) ಸ್ಮಾರ್ಟ್‌ಫೋನ್‌‌ ಸರಣಿಯನ್ನು ಅನಾವರಣ ಮಾಡಿದೆ. ಇದರಲ್ಲಿ ಗ್ಯಾಲಕ್ಸಿ S23, ಗ್ಯಾಲಕ್ಸಿ S23 ಪ್ಲಸ್‌ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ (Samsung Galaxy S23 Ultra) ಹೀಗೆ ಮೂರು ಮಾದರಿಯ ಫೋನ್​ಗಳಿಂದ ಕೂಡಿದೆ. ದುಬಾರಿ ಬೆಲೆಯ ಈ ಫೋನಿನ ಫೀಚರ್​ಗಳನ್ನು ಕಂಡು ಟೆಕ್ ಪ್ರಿಯರು ದಂಗಾಗಿದ್ದಾರೆ. ಈ ಮೂರು ಸ್ಮಾರ್ಟ್​ಫೋನ್​ಗಳು ಆಕರ್ಷಕವಾದ ಡಿಸ್ ಪ್ಲೇ, ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದ್ದು ಮಂದ ಬೆಳಕಿನಲ್ಲಿ ಅತ್ಯುತ್ತಮ ಫೋಟೊಗ್ರಫಿಗಾಗಿ (Photography) ನೈಟೋಗ್ರಫಿ ಆಯ್ಕೆಯನ್ನು ನೀಡಿರುವುದು ವಿಶೇಷ.

ಗ್ಯಾಲಕ್ಸಿ S23 ಆಲ್ಟ್ರಾ:

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಆಲ್ಟ್ರಾ ಸ್ಮಾರ್ಟ್‌ಫೋನ್‌ 3088 x 1440 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.8 ಇಂಚಿನ QHD+ ಪ್ಲಸ್‌ ಡೈನಾಮಿಕ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು 120hz ರಿಫ್ರೆಶ್​ರೇಟ್ ದರವನ್ನು ಪಡೆದುಕೊಂಡಿದೆ. ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 2 SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆಯಿಂದ ಪ್ರಾರಂಭವಾಗುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು ಬರೋಬ್ಬರಿ 200 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. 10 ಮೆಗಾ ಪಿಕ್ಸಲ್ ಟೆಲಿಫೋಟೋ ಲೆನ್ಸ್, 12 ಮೆಗಾ ಪಿಕ್ಸಲ್ ಆಲ್ಟ್ರಾ ವೈಡ್ ಆ್ಯಂಗಲ್ ಲೆನ್ಸ್ ಹಾಗೆಯೇ 50 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ನೀಡಲಾಗಿದೆ. ಈ ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

Infinix Note 12i: ಕೇವಲ 9,999 ರೂ.: ಆಕರ್ಷಕ ಫೀಚರ್​ಗಳ ಇನ್ಫಿನಿಕ್ಸ್‌ ನೋಟ್‌ 12i ಫೋನ್ ಈಗ ಖರೀದಿಗೆ ಲಭ್ಯ

ಇದನ್ನೂ ಓದಿ
Image
ಭಾರತದ ಮೊದಲ ಹೈಡ್ರೋಜನ್ ರೈಲು ಘೋಷಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಏನಿದರ ವಿಶೇಷತೆ?
Image
Samsung Galaxy Unpacked 2023: ಇಂದು ಬಹುನಿರೀಕ್ಷಿತ ಸ್ಯಾಮ್ಸಂಗ್ ಗ್ಯಾಲಕ್ಸಿ S23 ಸರಣಿ ಬಿಡುಗಡೆ, ವೈಶಿಷ್ಟ್ಯಗಳು ಇಲ್ಲಿವೆ
Image
Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
Image
JIO-Vi-Airtel: 365 ದಿನಗಳ ವ್ಯಾಲಿಡಿಟಿ ಹೊಂದಿರುವ ಬೆಸ್ಟ್ ಯೋಜನೆಗಳು ಇಲ್ಲಿದೆ ನೋಡಿ

ಗ್ಯಾಲಕ್ಸಿ S23 ಪ್ಲಸ್:

ಗ್ಯಾಲಕ್ಸಿ S23 ಪ್ಲಸ್ ಸ್ಮಾರ್ಟ್‌ಫೋನ್‌ 2340 x 1080 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್ ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 2 SoC ಪ್ರೊಸೆಸರ್​ನಿಂದ ಆವೃತ್ತವಾಗಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 50 ಎಂಪಿ + 12 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 4,700 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಗ್ಯಾಲಕ್ಸಿ S23:

ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್ ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 2 SoC ಪ್ರೊಸೆಸರ್​ನಿಂದ ಆವೃತ್ತವಾಗಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. 8 GB RAM ಮತ್ತು 256 GB ವೇರಿಯಂಟ್ ಆಯ್ಕೆಯಿಂದ ಪ್ರಾರಂಭವಾಗುತ್ತದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 50 ಎಂಪಿ + 12 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,900 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಬೆಲೆ ಎಷ್ಟು?:

ಗ್ಯಾಲಕ್ಸಿ S23 ಆರಂಭಿಕ ಬೆಲೆ ಯುಎಸ್​ನಲ್ಲಿ $799 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 65,500 ರೂ. ಇರಬಹುದು. ಗ್ಯಾಲಕ್ಸಿ S23+ $999 (ಭಾರತದಲ್ಲಿ ಅಂದಾಜು 81,900 ರೂ.), ಹಾಗೆಯೆ ಗ್ಯಾಲಕ್ಸಿ S23 ಆಲ್ಟ್ರಾ $1,199 (ಭಾರತದಲ್ಲಿ 98,270 ರೂ.). ಈ ಫೋನ್ ಸದ್ಯಕ್ಕೆ ವಿದೇಶದಲ್ಲಿ ಅನಾವರಣಗೊಂಡಿದೆ. ಈ ತಿಂಗಳ ಅಂತ್ಯದಲ್ಲಿ ಈ ಫೋನ್ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:52 am, Thu, 2 February 23

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ