Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy M32: 6000mAh ಬ್ಯಾಟರಿಯ ಗ್ಯಾಲಕ್ಸಿ M32 ಫೋನಿನ ಬೆಲೆ ಭರ್ಜರಿ ಇಳಿಕೆ: ಇಂದೇ ಖರೀದಿಸಿ

Samsung Galaxy M32 Price Cut: ಅಚ್ಚರಿ ಎಂಬಂತೆ ಸ್ಯಾಮ್​ಸಂಗ್ ತನ್ನ ಗ್ಯಾಲಕ್ಸಿ ಎಮ್3​2 (Samsung Galaxy M32) ಸ್ಮಾರ್ಟ್​​ಫೋನ್ ಬೆಲೆಯಲ್ಲಿ ಖಡಿತ ಮಾಡಿದೆ. ನೀವು ದೊಡ್ಡ ಬ್ಯಾಟರಿಯ ಫೋನನ್ನು ಹುಡುಕುತ್ತಿದ್ದರೆ ಇದೊಂದು ಅತ್ಯುತ್ತಮ ಆಯ್ಕೆ ಆಗಲಿದೆ.

Galaxy M32: 6000mAh ಬ್ಯಾಟರಿಯ ಗ್ಯಾಲಕ್ಸಿ M32 ಫೋನಿನ ಬೆಲೆ ಭರ್ಜರಿ ಇಳಿಕೆ: ಇಂದೇ ಖರೀದಿಸಿ
Samsung Galaxy M32
Follow us
TV9 Web
| Updated By: Vinay Bhat

Updated on: Jun 29, 2022 | 6:02 AM

ಭಾರತದಲ್ಲಿ ಅತಿ ಹೆಚ್ಚು ಮಾರಾಟ ಆಗುವ ಸ್ಮಾರ್ಟ್​​ಫೋನ್​ಗಳ ಪೈಕಿ ಸ್ಯಾಮ್​ಸಂಗ್ (Samsung) ದ್ವಿತೀಯ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುವುದು. ಮುಖ್ಯವಾಗಿ ಗ್ಯಾಲಕ್ಸಿ ಹೊಸ ಆವೃತ್ತಿಯ ಫೋನ್ ಬಿಡುಗಡೆ ಆಯಿತು ಎಂದಾದರೆ ಅಲ್ಲಿ ಹಿಂದಿನ ಆವೃತ್ತಿಯ ಫೋನಿನ ಬೆಲೆ ಕೊಂಚ ಕಡಿಮೆ ಮಾಡಿ ಮಾರಾಟ ಮಾಡುತ್ತದೆ. ಆದರೆ, ಇದೀಗ ಅಚ್ಚರಿ ಎಂಬಂತೆ ಸ್ಯಾಮ್​ಸಂಗ್ ತನ್ನ ಗ್ಯಾಲಕ್ಸಿ ಎಮ್3​2 (Samsung Galaxy M32) ಸ್ಮಾರ್ಟ್​​ಫೋನ್ ಬೆಲೆಯಲ್ಲಿ ಖಡಿತ ಮಾಡಿದೆ. ನೀವು ದೊಡ್ಡ ಬ್ಯಾಟರಿಯ ಫೋನನ್ನು ಹುಡುಕುತ್ತಿದ್ದರೆ ಇದೊಂದು ಅತ್ಯುತ್ತಮ ಆಯ್ಕೆ ಆಗಲಿದೆ. ಯಾಕಂದ್ರೆ ಈ ಫೋನ್ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ಪವರ್ ಹೊಂದಿದೆ. ಹಾಗಾದ್ರೆ ಈ ಫೋನಿನ ಮೇಲೆ ಎಷ್ಟು ರಿಯಾಯಿತಿ ನೀಡಲಾಗಿದೆ?, ಫೀಚರ್ಸ್​ ಏನು ಎಂಬುದನ್ನು ನೋಡೋಣ.

ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M32 ಫೋನ್ ಕಳೆದ ವರ್ಷ ಜೂನ್​ನಲ್ಲಿ ಭಾರತದಲ್ಲಿ ಬಿಡುಗಡೆ ಆಗಿತ್ತು. ಇದೀಗ ಇದರ ಎರಡೂ ವೇರಿಯಂಟ್​ನಲ್ಲಿ 2,000 ರೂ. ಗಳನ್ನು ಇಳಿಕೆ ಮಾಡಲಾಗಿದೆ. ಬೆಲೆ ಇಳಿಕೆಯಿಂದಾಗಿ ಈ ಫೋನಿನ 4GB RAM + 64GB ಸ್ಟೋರೆಜ್‌ ಸಾಮರ್ಥ್ಯದ ಬೆಲೆ 12,999 ರೂ. ಆಗಿದೆ. ಹಾಗೆಯೆ 6GB RAM + 128GB ಸ್ಟೋರೆಜ್​ನ ಬೆಲೆ 14,999 ರೂ. ಕಂಪನಿಯ ಅಧಿಕೃತ ವೆಬ್​ಸೈಟ್ ಮೂಲಕ ಗ್ಯಾಲಕ್ಸಿ M32 ಫೋನನ್ನು ನೀವು ಖರೀದಿಸಬಹುದು.

WhatsApp: ವಾಟ್ಸ್ಆ್ಯಪ್​​ನಲ್ಲಿರುವ ಈ ಹಿಡನ್ ಫೀಚರ್ ನೀವು ಬಳಸಿದ್ದೀರಾ?: ಒಮ್ಮೆ ಇಲ್ಲಿ ನೋಡಿ

ಇದನ್ನೂ ಓದಿ
Image
Laptops Under Rs. 25000: ಬಜೆಟ್ ಬೆಲೆಯ ಬೆಸ್ಟ್​ ಲ್ಯಾಪ್​ಟಾಪ್ ಹುಡುಕುತ್ತಿದ್ದೀರಾ?: ಇಲ್ಲಿದೆ ನೋಡಿ
Image
Poco F4 5G: 28,000 ರೂ. ಫೋನನ್ನು 23,999ಕ್ಕೆ ಖರೀದಿಸಿ: ಹೊಸ ಪೋಕೋ F4 5G ಮೇಲೆ ಭರ್ಜರಿ ಡಿಸ್ಕೌಂಟ್
Image
OnePlus Nord 2T: ಒನ್​ಪ್ಲಸ್ ನಾರ್ಡ್ 2T ಬಿಡುಗಡೆಗೆ ಕ್ಷಣಗಣನೆ: ಏನು ವಿಶೇಷತೆ?, ಬೆಲೆ ಎಷ್ಟು?
Image
Gmail: ಇದೀಗ ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸಿ: ಜಿಮೇಲ್​​ನಲ್ಲಿ ಬಂದಿದೆ ಹೊಸ ಆಯ್ಕೆ

ಗ್ಯಾಲಕ್ಸಿ M32 ಸ್ಮಾರ್ಟ್​​ಫೋನ್ 6.4 ಇಂಚಿನ ಎಸ್-ಅಮೋಲೆಡ್ (sAMOLED) ಎಫ್‌ಹೆಚ್‌ಡಿ ಪ್ಯಾನೆಲ್ ಸ್ಕ್ರೀನ್ ಇದ್ದು, 90Hz ರೀಫ್ರೆಶ್ ರೇಟ್ ಇದೆ. ಮೀಡಿಯಾಟೆಕ್ ಹೀಲಿಯೋ ಜಿ80 ಪ್ರೊಸೆಸರ್ ಜೊತೆಗೂಡಿರುವುದರಿಂದ ಕಾರ್ಯಾಚರಣೆಯು ಸುಲಲಿತವಾಗಿದೆ. ಆಂಡ್ರಾಯ್ಡ್ 11 ಆಧಾರಿತ ಒನ್‌ಯುಐ 3.1 ನೊಂದಿಗೆ ಬರುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್‌ನ ಪ್ರಧಾನ ಕ್ಯಾಮೆರಾದಲ್ಲಿ 64 ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರಧಾನ ಸೆನ್ಸರ್ ಇದ್ದು, 8MP ವೈಡ್ ಆ್ಯಂಗಲ್ ಲೆನ್ಸ್ ಹಾಗೂ ತಲಾ 2 ಮೆಗಾಪಿಕ್ಸೆಲ್ ಸಾಮರ್ಥ್ಯದ ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್ ಲೆನ್ಸ್‌ಗಳಿವೆ. ಸೆಲ್ಫೀಗೆ 20 ಮೆಗಾಪಿಕ್ಸೆಲ್ ಸಾಮರ್ಥ್ಯದ ಮುಂಭಾಗದ ಕ್ಯಾಮೆರಾ ಸೆಟಪ್ ನೀಡಲಾಗಿದೆ. ಪ್ರಧಾನ ಕ್ಯಾಮೆರಾವು ಹೊರಾಂಗಣದಲ್ಲಿ ಅದ್ಭುತವಾಗಿ ಬಣ್ಣಗಳ ಮಿಳಿತದೊಂದಿಗೆ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಸಮೀಪದ ವಸ್ತುಗಳು ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್‌ಗಳಿಂದಾಗಿ ಅತ್ಯುತ್ತಮವಾಗಿ ಸೆರೆಯಾಗುತ್ತವೆ. 20MP ಸಾಮರ್ಥ್ಯದ ಲೆನ್ಸ್ ಮೂಲಕ ಸೆಲ್ಫೀ, ಈಗಿನ ಅಗತ್ಯಕ್ಕೆ ತಕ್ಕಂತೆ ಚಿತ್ರಗಳಿಗೆ ಹೆಚ್ಚು ಸೌಂದರ್ಯ ಒದಗಿಸುತ್ತದೆ.

ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಸೇರಿದಂತೆ ಪ್ರಮುಖ ನೂತನ ಫೀಚರ್​ಗಳಿಂದ ಕೂಡಿದೆ.

Moto G42: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ಮೋಟೋ G42 ಸ್ಮಾರ್ಟ್​​ಫೋನ್: ಜುಲೈ 4ಕ್ಕೆ ಬಿಡುಗಡೆ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು