Galaxy F54 5G: ಭಾರತದಲ್ಲಿ ರಿಲೀಸ್ ಆಯ್ತು 108MP ಕ್ಯಾಮೆರಾದ ಗ್ಯಾಲಕ್ಸಿ F54 5G ಸ್ಮಾರ್ಟ್​ಫೋನ್: ಬೆಲೆ ಎಷ್ಟು?

|

Updated on: Jun 06, 2023 | 2:47 PM

ಸ್ಯಾಮ್​ಸಂಗ್ ಭಾರತದಲ್ಲಿ ಇಂದು ತನ್ನ ಗ್ಯಾಲಕ್ಸಿ F ಸರಣಿಯ ಅಡಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಗ್ಯಾಲಕ್ಸಿ F54 5G (Galaxy F54 5G) ಸ್ಮಾರ್ಟ್‌ಫೋನ್‌ ಅನಾವರಣ ಮಾಡಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

Galaxy F54 5G: ಭಾರತದಲ್ಲಿ ರಿಲೀಸ್ ಆಯ್ತು 108MP ಕ್ಯಾಮೆರಾದ ಗ್ಯಾಲಕ್ಸಿ F54 5G ಸ್ಮಾರ್ಟ್​ಫೋನ್: ಬೆಲೆ ಎಷ್ಟು?
Samsung Galaxy F54
Follow us on

ಈಗಂತು ಕ್ಯಾಮೆರಾದ ಸ್ಮಾರ್ಟ್​ಫೋನ್​ಗಳಿಗೆ (Smartphones) ಹೆಚ್ಚಿನ ಬೇಡಿಕೆಯಿದೆ. ಅದರಲ್ಲೂ 108 ಮೆಗಾಪಿಕ್ಸೆಲ್ ಕ್ಯಾಮೆರಾ ಫೋನ್​ಗಳು ಭಾರತದಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ಇವುಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಬೇಗನೆ ಸೋಲ್ಡ್ ಔಟ್ ಆಗುತ್ತದೆ. ಇದನ್ನು ಮನಗಂಡು ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ (Samsung) ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ ಹೊಸ ಮೊಬೈಲ್ ರಿಲೀಸ್ ಮಾಡಿದೆ. ಸ್ಯಾಮ್​ಸಂಗ್ ಭಾರತದಲ್ಲಿ ಇಂದು ತನ್ನ ಗ್ಯಾಲಕ್ಸಿ F ಸರಣಿಯ ಅಡಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಗ್ಯಾಲಕ್ಸಿ F54 5G (Galaxy F54 5G) ಸ್ಮಾರ್ಟ್‌ಫೋನ್‌ ಅನಾವರಣ ಮಾಡಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಗ್ಯಾಲಕ್ಸಿ F54 5G ಫೋನ್​ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆಗೆ 27,999 ರೂ. ನಿಗದಿ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಪ್ರೀ ಆರ್ಡರ್ ಶುರುವಾಗುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ಸ್ಯಾಮ್​ಸಂಗ್ ಇಂಡಿಯಾದ ಅಧಿಕೃತ ವೆಬ್​ಸೈಟ್ ಮತ್ತು ಪ್ರಮುಖ ರಿಟೇಲ್ ಸ್ಟೋರ್​ಗಳಲ್ಲಿ ಖರೀದಿಗೆ ಸಿಗಲಿದೆ.

ಇದನ್ನೂ ಓದಿ
Apple WWDC 2023 Announcements: ಆ್ಯಪಲ್ WWDC 2023 ಈವೆಂಟ್​ನಲ್ಲಿ iOS 17, ಆ್ಯಪಲ್ ವಿಷನ್‌ ಪ್ರೊ ಸೇರಿದಂತೆ ಅನೇಕ ಪ್ರಾಡಕ್ಟ್ ಬಿಡುಗಡೆ
Samsung Galaxy F54: 6000mAh ಬ್ಯಾಟರಿ ಮತ್ತು 108 MP ಕ್ಯಾಮೆರಾ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್
OnePlus 11 5G: ಭರ್ಜರಿ ಡಿಮ್ಯಾಂಡ್​ ಹೊಂದಿರುವ ಒನ್‌ಪ್ಲಸ್‌ 11 5G ಮಾರ್ಬಲ್ ಒಡಿಸ್ಸಿ ಆವೃತ್ತಿ ಬಿಡುಗಡೆ
WhatsApp Ban: ಏಪ್ರಿಲ್ ತಿಂಗಳಲ್ಲಿ ಭಾರತದ 74 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ

SIM Port: ಒಂದು ಮೊಬೈಲ್ ಸಂಖ್ಯೆಯನ್ನು ನೀವು ಎಷ್ಟು ಬಾರಿ ಬೇಕಾದರೂ ಪೋರ್ಟ್ ಮಾಡಬಹುದು!

ಫೀಚರ್ಸ್ ಏನಿದೆ?:

ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.7 ಇಂಚಿನ ಫುಲ್ ಹೆಚ್​ಡಿ ಪ್ಲಸ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್​ರೇಟ್​ನಿಂದ ಕೂಡಿದ್ದು, ಸ್ಕ್ರೀನ್​ಗೆ ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ನೀಡಲಾಗಿದೆ. ಬಲಿಷ್ಠವಾದ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು ಬರೋಬ್ಬರಿ 108 ಮೆಗಾ ಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. ಇದು ಫೋಟೋಗ್ರಫಿಗೆ ಸೂಕ್ತವಾಗಿದ್ದು ಅತ್ಯುತ್ತಮ ಕ್ವಾಲಿಟಿಯಲ್ಲಿ ವಿಡಿಯೋವನ್ನು ಸೆರೆಹಿಡಿಯುತ್ತದೆ. ಇದರಲ್ಲಿರುವ ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರ ಜೊತೆಗೆ ನೈಟೋಗ್ರಫಿ ಎಂಬ ವಿಶೇಷ ಆಯ್ಕೆ ನೀಡಾಗಿದ್ದು, ಇದರ ಮೂಲಕ ಮಂದ ಬೆಳಕಿನಲ್ಲಿ ಕೂಡ ಅತ್ಯುತ್ತಮ ಫೋಟೋ ಕ್ಲಿಕ್ಕಿಸಬಹುದು.

ಗ್ಯಾಲಕ್ಸಿ F54 5G ಫೋನ್ ದೀರ್ಘ ಸಮಯ ಬಾಳಕೆ ಬರುವ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದು 5G ಬೆಂಬಲ ಪಡೆದುಕೊಂಡಿದೆ. ಜೊತೆಗೆ 4ಜಿ ಎಲ್​ಟಿಇ, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇರಲಿವೆ. ಮಧ್ಯಮ ಬೆಲೆಗೆ ಉತ್ತಮ ಕ್ಯಾಮೆರಾ, ಪ್ರೊಸೆಸರ್, ಬಿಗ್ ಬ್ಯಾಟರಿಯ ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಈ ಫೋನ್ ಒಳ್ಳೆಯ ಆಯ್ಕೆ ಆಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ