Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಭಾರತಕ್ಕೆ ಕಾಲಿಟ್ಟ ಬಜೆಟ್ ಬೆಲೆಯ ಗ್ಯಾಲಕ್ಸಿ M33 5G

| Updated By: Vinay Bhat

Updated on: Apr 02, 2022 | 1:58 PM

Samsung Galaxy M33 5G Launched: ಬಿಡುಗಡೆ ಮುನ್ನ ಸಾಕಷ್ಟು ಕುತೂಹಲ ಕೆರಳಿಸಿದ್ದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಮ್​​33 5G (Galaxy M33 5G) ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಆಕರ್ಷಕ ಫೀಚರ್​​ಗಳಿಂದ ಕೂಡಿರುವ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿರುವುದು ವಿಶೇಷ.

Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಭಾರತಕ್ಕೆ ಕಾಲಿಟ್ಟ ಬಜೆಟ್ ಬೆಲೆಯ ಗ್ಯಾಲಕ್ಸಿ M33 5G
Samsung Galaxy M33 5G
Follow us on

ಸ್ಯಾಮ್​ಸಂಗ್ (Samsung) ಕಂಪನಿ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಸಾಧಿಸಿದೆ. ಇತ್ತೀಚೆಗಷ್ಟೆ ಕಂಪನಿ ಗ್ಯಾಲಕ್ಸಿ M ಸರಣಿಯಲ್ಲಿ ಎರಡು ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳನ್ನು ಘೋಷಣೆ ಮಾಡಿತ್ತು. ಇದೀಗ ಬಿಡುಗಡೆ ಮುನ್ನ ಸಾಕಷ್ಟು ಕುತೂಹಲ ಕೆರಳಿಸಿದ್ದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಮ್​​33 5G (Galaxy M33 5G) ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಆಕರ್ಷಕ ಫೀಚರ್​​ಗಳಿಂದ ಕೂಡಿರುವ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿರುವುದು ವಿಶೇಷ. ಗ್ಯಾಲಕ್ಸಿ M33 5G ಫೋನ್ 50 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಅಲ್ಲದೆ ದೀರ್ಘ ಸಮಯದ ಬಾಳಿಕೆಗಾಗಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ. ಹಾಗಿದ್ರೆ ಇದರ ಬೆಲೆ ಎಷ್ಟು?, ಇತರೆ ವಿಶೇಷತೆ ಏನು ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೇಸ್‌ ಮಾಡೆಲ್‌ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 18,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ಆವೃತ್ತಿಯ ಬೆಲೆ 20,499 ರೂ. ಆಗಿದೆ. ಆದರೆ ಈ ಎರಡು ಮಾದರಿಯಗಳು ಲಾಂಚ್‌ ಆಫರ್‌ನಲ್ಲಿ ಕ್ರಮವಾಗಿ 17,999 ಮತ್ತು 19,999 ರೂ. ಗಳಿಗೆ ಮಾರಾಟ ಕಾಣಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಸ್ಯಾಮ್​ಸಂಗ್ ಕಂಪನಿಯ ಅಧಿಕೃತ ಭಾರತ ವೆಬ್​ಸೈಟ್​ನಲ್ಲಿ ಎಪ್ರಿಲ್ 8 ರಿಂದ ಮಾರಾಟ ಕಾಣಲಿದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದಾದ ಆಯ್ಕೆ ನೀಡಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಎಫೆಕ್ಟ್, ಸಿಂಗಲ್ ಟೇಕ್, ಆಬ್ಜೆಕ್ಟ್ ಎರೇಸರ್ ಮತ್ತು ವೀಡಿಯೋ TNR ಮತ್ತು ವೀಡಿಯೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯದ ಬಾಳಿಕೆಗಾಗಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಯನ್ನು ನೀಡಲಾಗಿದೆ.

One Plus 10 Pro: 66,999 ರೂ. ಬೆಲೆಯ ಹೊಸ ಒನ್​ಪ್ಲಸ್ 10 ಪ್ರೊ ಫೋನ್ ಖರೀದಿಸಬಹುದೇ?