Galaxy A33 5G: ಗ್ಯಾಲಕ್ಸಿ A ಸರಣಿಯಲ್ಲಿ ಬಿಡುಗಡೆ ಆಯಿತು ಎರಡು ಹೊಸ ಸ್ಮಾರ್ಟ್​ಫೋನ್: ಬೆಲೆ ಎಷ್ಟು?

Galaxy A33 5G, A53 5G: ಸ್ಯಾಮ್​ಸಂಗ್ ಕಂಪನಿ (Samsung) ಇದೀಗ ಇದೇ ಗ್ಯಾಲಕ್ಸಿ A ಸರಣಿಯಲ್ಲಿ ಮತ್ತೆ ಎರಡು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ53 5G ಮತ್ತು ಗ್ಯಾಲಕ್ಸಿ ಎ33 5G ಸ್ಮಾರ್ಟ್‌ಫೋನ್‌ ಇದೆ.

Galaxy A33 5G: ಗ್ಯಾಲಕ್ಸಿ A ಸರಣಿಯಲ್ಲಿ ಬಿಡುಗಡೆ ಆಯಿತು ಎರಡು ಹೊಸ ಸ್ಮಾರ್ಟ್​ಫೋನ್: ಬೆಲೆ ಎಷ್ಟು?
Galaxy A33 and the Galaxy A53
Follow us
TV9 Web
| Updated By: Vinay Bhat

Updated on: Mar 19, 2022 | 6:25 AM

ಗ್ಯಾಲಕ್ಸಿ A ಸರಣಿಯಲ್ಲಿ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಸಾಧಿಸಿರುವ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ (Samsung) ಇದೀಗ ಇದೇ ಗ್ಯಾಲಕ್ಸಿ A ಸರಣಿಯಲ್ಲಿ ಮತ್ತೆ ಎರಡು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ53 5G (Galaxy A53) ಮತ್ತು ಗ್ಯಾಲಕ್ಸಿ ಎ33 5G (Galaxy A33) ಸ್ಮಾರ್ಟ್‌ಫೋನ್‌ ಇದೆ. ಸಾಕಷ್ಟು ವಿಶೇಷತೆಗಳಿಂಡ ಕೂಡಿರುವ ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌, ಆಕ್ಟಾ-ಕೋರ್ ಪ್ರೊಸೆಸರ್‌, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್‌ ಆಗಲಿವೆ. ಸದ್ಯಕ್ಕೆ ಈ ಫೋನ್​ಗಳು ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಸದ್ಯದಲ್ಲೇ ಭಾರತಕ್ಕು ಕಾಲಿಡಲಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ವಿಶೇಷತೆಗಳು ಏನು ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್​ಗೆ ಯುರೋಪ್​ನಲ್ಲಿ EUR 449 ನಿಗದಿ ಮಾಡಲಾಗಿದೆ. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 37,800 ರೂ. ಎನ್ನಬಹುದು. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಬೆಲೆ EUR 369, ಭಾರತದಲ್ಲಿ ಅಂದಾಜು 31,000 ರೂ. ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನು ಈ ಎರಡೂ ಫೋನ್‌ಗಳು 6GB + 128GB, 8GB + 128GB ಮತ್ತು 8GB + 256GB ಕಾನ್ಫಿಗರೇಶನ್‌ಗಳಲ್ಲಿ ಬರುತ್ತವೆ. ಈ ಎರಡೂ ಫೋನ್​ಗಳು ಏಪ್ರಿಲ್ 22 ರಿಂದ ಲಭ್ಯವಿರುತ್ತದೆ ಎಂದು ಕಂಪನಿ ಹೇಳಿದೆ.

ಏನು ವಿಶೇಷತೆ?:

ಸ್ಯಾಮ್​​ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಆದರೆ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಸ್ಟೈಲ್ ನಾಚ್‌ನೊಂದಿಗೆ ಬರುತ್ತದೆ. ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಹೊಂದಿರುವ 6.5 ಇಂಚಿನ ಫುಲ್‌ HD+ ಸೂಪರ್ ಅಮೋಲೆಡ್‌ ಇನ್ಫಿನಿಟಿ-O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಗ್ಯಾಲಕ್ಸಿ A53 5G ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಸೂಪರ್ ಅಮೋಲೆಡ್ ಇನ್ಫಿನಿಟಿ U ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ One UI 4.1 ನೊಂದಿಗೆ ಬರುತ್ತದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ದೀರ್ಘ ಬಾಳಿಕೆಯ ಬ್ಯಾಟರಿ ಅಳವಡಿಸಲಾಗಿದೆ.

Redmi K50 series: 108MP ಕ್ಯಾಮೆರಾ: ಜಾಗತೀಕ ಮಾರುಕಟ್ಟೆಗೆ ಎಂಟ್ರಿಕೊಟ್ಟ ರೆಡ್ಮಿ K50 ಸರಣಿ

Netflix: ನೆಟ್​​ಫ್ಲಿಕ್ಸ್​ನಿಂದ ಶಾಕ್: ನೀವು ಸ್ನೇಹಿತರಿಗೆ ಪಾಸ್ವರ್ಡ್ ಕೊಟ್ಟಿದ್ದರೆ ತಪ್ಪದೇ ಈ ಸ್ಟೋರಿ ಓದಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್