Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy S21 FE 5G: ಭಾರತದಲ್ಲಿ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಮಾದರಿಯಲ್ಲಿ ಅನಾವರಣಗೊಂಡಿದೆ. ಈ ಫೋನಿನ 8GB RAM ಮತ್ತು 128GB ವೇರಿಯಂಟ್ ಬೆಲೆಯು 49,999 ರೂ. ಆಗಿದೆ.

Galaxy S21 FE 5G: ಭಾರತದಲ್ಲಿ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?
Galaxy S21 FE 5G
Follow us
TV9 Web
| Updated By: Vinay Bhat

Updated on:Jan 10, 2022 | 3:37 PM

ದಕ್ಷಿಣ ಕೊರಿಯಾದ ಪ್ರಸಿದ್ಧ ಟೆಕ್‌ ಕಂಪನಿ ಸ್ಯಾಮ್‌ಸಂಗ್‌ (Samsung) 2022ನೇ ವರ್ಷದ ಮೊದಲ ಸ್ಮಾರ್ಟ್​ಫೋನನ್ನು ಇತ್ತೀಚೆಗಷ್ಟೆ ವಿದೇಶದಲ್ಲಿ ಅನಾವರಣ ಮಾಡಿತ್ತು. ಬಹುನಿರೀಕ್ಷಿತ ಗ್ಯಾಲಕ್ಸಿ ಎಸ್​21 ಎಫ್​ಇ 5ಜಿ (Samsung Galaxy S21 FE 5G) ಸ್ಮಾರ್ಟ್‌ಫೋನ್‌ ಕಳೆದ ವಾರ ಯುಎಸ್, ಯುಕೆ ಮತ್ತು ಯರೋಪ್​ನಲ್ಲಿ ಬಿಡುಗಡೆ ಆಗಿತ್ತು. ಇದೀಗ ಸದ್ದಿಲ್ಲದೆ ಭಾರತದಲ್ಲಿ ಈ ಫೋನ್ ಅನ್ನು ಲಾಂಚ್ ಮಾಡಿದೆ. ಹೌದು, ಸ್ಯಾಮ್‌ಸಂಗ್‌ ಕಂಪನಿ ತನ್ನ ಹೊಸ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅತ್ಯಂತ ಬಲಿಷ್ಠವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ (Qualcomm Snapdragon), ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಈ ಫೋನ್ ಹೊಂದಿದೆ. ಜೊತೆಗೆ ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಎಷ್ಟು?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಮಾದರಿಯಲ್ಲಿ ಅನಾವರಣಗೊಂಡಿದೆ. ಈ ಫೋನಿನ 8GB RAM ಮತ್ತು 128GB ವೇರಿಯಂಟ್ ಬೆಲೆಯು 49,999 ರೂ. ಆಗಿದೆ. ಅದೇ ರೀತಿ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್‌ ಬೆಲೆಯು 53,999 ರೂ. ಆಗಿದೆ. ಈ ಫೋನ್ ಸ್ಯಾಮ್‌ಸಂಗ್ ವೆಬ್‌ಸೈಟ್, ಅಮೆಜಾನ್ ಸೇರಿದಂತೆ ಇತರೆ ಪ್ರಮುಖ ಆನ್‌ಲೈನ್ ತಾಣಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಹಾಗೆಯೇ ಜನವರಿ 11 ರಂದು ರೀಟೇಲ್ ಸ್ಟೋರ್‌ಗಳಲ್ಲಿ ಸಿಗಲಿದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ 2340 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸುತ್ತದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಒನ್‌ ಯುಐ 4.0 ಆಧಾರಿತ ಆಂಡ್ರಾಯ್ಡ್‌ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MP ಸೆನ್ಸಾರ್‌ ಸಾಮರ್ಥ್ಯ, ಎರಡನೇ ಕ್ಯಾಮೆರಾ 12MP ಅಲ್ಟ್ರಾವೈಡ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 8MP 3x ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32MP ಫಿಕ್ಸೆಡ್ ಫೋಕಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಬಂಪ್ ಅನ್ನು ಮ್ಯಾಟ್-ಫಿನಿಶ್ ಬ್ಯಾಕ್ ಪ್ಯಾನೆಲ್‌ಗೆ ಸಂಯೋಜಿಸಲಾಗಿದೆ. ಫ್ಲ್ಯಾಶ್ ಮಾಡ್ಯೂಲ್ ಅನ್ನು ಕ್ಯಾಮರಾ ಲೈಟ್‌ ಹೊರಗೆ ಇರಿಸಲಾಗಿದೆ.

4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ಗಳನ್ನು ಒಳಗೊಂಡಿದೆ. ಇದು ಮಲ್ಟಿ-ಕ್ಯಾಮೆರಾ ರೆಕಾರ್ಡಿಂಗ್ ಮೋಡ್ ಅನ್ನು ಒಳಗೊಂಡಿದೆ. ಇದರಿಂದ ಒಂದೇ ಸಮಯದಲ್ಲಿ ಸೆಲ್ಫಿ ಮತ್ತು ರಿಯರ್‌ ಕ್ಯಾಮೆರಾಗಳಿಂದ ವಿಡಿಯೋವನ್ನು ಸೆರೆಹಿಡಿಯಬಹುದಾಗಿದೆ.

Moto G71 5G: ಬಜೆಟ್ ಬೆಲೆಗೆ ಆಕರ್ಷಕ ಫೀಚರ್: ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್‌ ಬಿಡುಗಡೆ

OnePlus Nord CE: ಕಿಸೆಯಲ್ಲಿದ್ದ ಒನ್‌ಪ್ಲಸ್ ನಾರ್ಡ್ CE ಸ್ಮಾರ್ಟ್​ಫೋನ್ ಸ್ಪೋಟ: ಪ್ರಾಣಾಪಾಯದಿಂದ ಪಾರು

Published On - 3:29 pm, Mon, 10 January 22

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ