Galaxy F14 5G: ಕೇವಲ 12,990 ರೂ.: ಅತಿ ಕಡಿಮೆ ಬೆಲೆಯ ಸ್ಯಾಮ್ಸಂಗ್ನ ಹೊಸ 5G ಫೋನಿನ ಮಾರಾಟ ಆರಂಭ
ಕಳೆದ ವಾರ ಸ್ಯಾಮ್‌ಸಂಗ್ ಕಂಪನಿ ಅತ್ಯಂತ ಕಡಿಮೆ ಬೆಲೆಗೆ ಭಾರತದಲ್ಲಿ ಗ್ಯಾಲಕ್ಸಿ ಎಫ್ 14 5ಜಿ (Samsung Galaxy F14 5G) ಫೋನನ್ನು ಅನಾವರಣ ಮಾಡಿತ್ತು. ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಪ್ರೊಸೆಸರ್ನಿಂದ ಆವೃತ್ತವಾಗಿರುವ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ.
ಭಾರತದಲ್ಲಿ 5ಜಿ (5G) ಸೇವೆ ಆರಂಭವಾಗಿದ್ದೆ ತಡ ಪ್ರಸಿದ್ಧ ಮೊಬೈಲ್ ತಯಾರಿಕ ಸಂಸ್ಥೆಗಳು ಒಂದರ ಹಿಂದೆ ಒಂದರಂತೆ ಆಕರ್ಷಕವಾದ 5ಜಿ ಬೆಂಬಲ ನೀಡುವ ಸ್ಮಾರ್ಟ್ಫೋನ್ಗಳನ್ನು (Smartphones) ಅನಾವರಣ ಮಾಡುತ್ತಿದೆ. ಅದುಕೂಡ ಕಡಿಮೆ ಬೆಲೆಗೆ ಎಂಬುದು ವಿಶೇಷ. ಇದೇ ಸಾಲಿನಲ್ಲಿ ಕಳೆದ ವಾರ ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್ ಕಂಪನಿ ಅತ್ಯಂತ ಕಡಿಮೆ ಬೆಲೆಗೆ ಭಾರತದಲ್ಲಿ ನೂತನ 5ಜಿ ಮೊಬೈಲ್ ಅನಾವರಣ ಮಾಡಿತ್ತು. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 14 5ಜಿ (Samsung Galaxy F14 5G). ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಪ್ರೊಸೆಸರ್ನಿಂದ ಆವೃತ್ತವಾಗಿರುವ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಹಾಗಾದರೆ ಇದರ ಬೆಲೆ ಎಷ್ಟು?, ಏನೆಲ್ಲ ಫೀಚರ್ಗಳಿವೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿತ್ತು. ಇದರ 4GB RAM + 128GB ರೂಪಾಂತರದ ಆಯ್ಕೆಗೆ 14,490 ರೂ. ಇದೆ. ಅಂತೆಯೆ 6GB RAM + 128GB ಆಯ್ಕೆಗೆ 15,990 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಸೇರಿದಂತೆ ಸ್ಯಾಮ್ಸಂಗ್ನ ಅಧಿಕೃತ ವೆಬ್ಸೈಟ್ನಲ್ಲಿ ಇಂದಿನಿಂದ (ಮಾರ್ಚ್ 30) ಖರೀದಿಗೆ ಸಿಗುತ್ತಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಕೂಡ ಘೋಷಣೆ ಮಾಡಲಾಗಿದ್ದು, HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 1,500 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಈ ಮೂಲಕ ಈ ಫೋನಿನ 4GB RAM ಆಯ್ಕೆಯನ್ನು ಕೇವಲ 12,990 ರೂ. ಗೆ ನಿಮ್ಮದಾಗಿಸಬಹುದು.
Tecno Spark 10 5G: ₹12,999ಕ್ಕೆ ದೊರೆಯುತ್ತಿದೆ ಟೆಕ್ನೋ 5G ಸ್ಮಾರ್ಟ್‌ಫೋನ್, ಏನಿದು ಆಫರ್?
ಏನು ಫೀಚರ್ಸ್?:
ಈ ಸ್ಮಾರ್ಟ್‌ಫೋನ್ F14 5G ಸ್ಮಾರ್ಟ್‌ಫೋನ್ 2408*1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ ಹೆಚ್‌ಡಿ+ ಐಪಿಎಸ್ ಎಲ್ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದ್ದು, ಡಿಸ್ ಪ್ಲೇ ಅತ್ಯುತ್ತಮ ಅನುಭವ ನೀಡುತ್ತದೆ. ಆಕ್ಟಾ-ಕೋರ್ Exynos 1330 ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹಿಂಭಾಗದ ಕ್ಯಾಮೆರಾ ಜೊತೆ ಎಲ್ಇಡಿ ಫ್ಲ್ಯಾಶ್ ನೀಡಲಾಗಿದೆ.
ಈ ಸ್ಮಾರ್ಟ್ಫೋನ್ನ ಪ್ರಮುಖ ಹೈಲೇಟ್ ಆಗಿರುವ ಬ್ಯಾಟರಿಯು 6000mAh ಸಾಮರ್ಥ್ಯದಿಂದ ಕೂಡಿದೆ. 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿದ್ದು, 5G, 4G, Wi-Fi, ಬ್ಲೂಟೂತ್, NFC ಮತ್ತು GPS ಕನೆಕ್ಟಿವಿಟಿ ಆಯ್ಕೆಯನ್ನು ನೀಡಲಾಗಿದೆ. ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಸ್ಮಾರ್ಟ್ಫೋನ್ಗಳ ಸಾಲಿಗೆ ಇದುಕೂಡ ಸೇರ್ಪಡೆ ಆಗಿದ್ದು ಬಜೆಟ್ ಪ್ರಿಯರು ಫಿದಾ ಆಗುವುದು ಖಚಿತ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:37 pm, Thu, 30 March 23