Best SmartPhones: 10,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

Best Phones Under Rs. 10,000: ಕಳೆದ ಕೆಲವು ತಿಂಗಳುಗಳ ಹಿಂದೆ ವಿವಿಧ ಫೋನ್‌ಗಳು ಮಾರುಕಟ್ಟೆ ಪ್ರವೇಶಿಸಿದ್ದು, ಅದರಲ್ಲಿ 10,000 ರೂ. ಬಜೆಟ್ ಒಳಗಿನ ಫೋನ್ ಕೊಳ್ಳಲು ನೀವು ಬಯಸುವುದಾದಲ್ಲಿ ನಿಮಗೆ ಹಲವು ಆಯ್ಕೆಗಳನ್ನು ಇಲ್ಲಿ ನೀಡಲಾಗಿದೆ.

Best SmartPhones: 10,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ
Best phones under Rs 10000
Follow us
TV9 Web
| Updated By: Vinay Bhat

Updated on: Oct 14, 2021 | 12:27 PM

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ (Smartphone) ಭಾರಿ ಬೇಡಿಕೆ ಇದೆ. ಮೊಬೈಲ್ (Mobile) ಮಾರುಕಟ್ಟೆಯಲ್ಲಿ ಪ್ರತಿನಿತ್ಯವೂ ಹೊಸ ಫೋನ್‌ಗಳು ಲಗ್ಗೆ ಇಡುತ್ತಲೇ ಇವೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬರುತ್ತಿವೆ. ಇವುಗಳಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಅದರೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಆಕರ್ಷಸುತ್ತಲೇ ಬಂದಿವೆ. ಅದರಲ್ಲೂ ಬೆಲೆ, ಆಫರ್ ಮತ್ತು ತಾಂತ್ರಿಕ ವೈಶಿಷ್ಟ್ಯಗಳ ಫೋನ್ ಹೆಚ್ಚಿನ ಗಮನ ಸೆಳೆದಿವೆ. ಕಳೆದ ಕೆಲವು ತಿಂಗಳುಗಳ ಹಿಂದೆ ವಿವಿಧ ಫೋನ್‌ಗಳು ಮಾರುಕಟ್ಟೆ ಪ್ರವೇಶಿಸಿದ್ದು, ಅದರಲ್ಲಿ 10,000 ರೂ. ಬಜೆಟ್ (Budget Smartphone) ಒಳಗಿನ ಫೋನ್ ಕೊಳ್ಳಲು ನೀವು ಬಯಸುವುದಾದಲ್ಲಿ ನಿಮಗೆ ಹಲವು ಆಯ್ಕೆಗಳನ್ನು ಇಲ್ಲಿ ನೀಡಲಾಗಿದೆ.

ರಿಯಲ್‌ಮಿ ನಾರ್ಜೊ 50i: ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ಕೇವಲ 7499 ರೂ. ಆಗಿದೆ.

ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌: ಈ ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಅಲ್ಲದೇ ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್​ಫೋನ್ 8499 ರೂ. ಗೆ ಮಾರಾಟವಾಗುತ್ತಿದೆ.

ಒಪ್ಪೊ A31: ಈ ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB +128GB ವೇರಿಯಂಟ್ ಆಯ್ಕೆ ಹೊಂದಿದೆ. ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಇದರ ಬೆಲೆ 11490 ರೂ. ಆಗಿದೆ.

ಇನ್ನೂ ಇವುಗಳ ಜೊತೆಗೆ 9999 ರೂ. ಗೆ ಪೊಕೊ ಎಮ್​3 ಸ್ಮಾರ್ಟ್​ಫೋನ್, ರೆಡ್ಮಿ 9 ಪ್ರೈಮ್ ಸಿಗುತ್ತಿದ್ದರೆ, ಸ್ಯಾಮ್​ಸಂಗ್ ಗ್ಯಾಲಕ್ಸಿ ಎಫ್ 12 ಮತ್ತು ಎಮ್​12 9,499 ರೂ. ಗೆ ಖರೀದಿಸಬಹುದು. ದೇಶೀಯ ಮೈಕ್ರೊಮ್ಯಾಕ್ಸ್​ ಇನ್ ನೋಟ್ 1 ಕೂಡ ಕೇವಲ 9,4999 ರೂ. ಗೆ ಮಾರಾಟವಾಗುತ್ತಿದೆ. ರಿಯಲ್ ಮಿ ಸಿ21ವೈ ಬೆಲೆ 8,999 ರೂ. ಆಗಿದೆ.

Realme GT Neo 2 5G: ಭಾರತದಲ್ಲಿ ಬಿಡುಗಡೆಯಾದ ರಿಯಲ್ ಮಿ ಜಿಟಿ ನಿಯೋ 2 5ಜಿ ಸ್ಮಾರ್ಟ್​ಫೋನ್​; ಇಲ್ಲಿದೆ ಸಂಪೂರ್ಣ ಡಿಟೇಲ್ಸ್

(Samsung Poco Redmi Here are your best options under Rs 10000 this month)