Galaxy F54 5G: 6000mAh ಬ್ಯಾಟರಿ: ಭಾರತಕ್ಕೆ ಬರುತ್ತಿದೆ ಕಡಿಮೆ ಬೆಲೆಯ 108MP ಕ್ಯಾಮೆರಾದ ಹೊಚ್ಚ ಹೊಸ ಸ್ಮಾರ್ಟ್​ಫೋನ್

ಹೊಸ ಗ್ಯಾಲಕ್ಸಿ F54 5G ಫೋನ್‌ ಇದೇ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಲಾಂಚ್ ಆಗುವ ಸಾಧ್ಯತೆಗಳಿವೆ. ಈ ಫೋನಿನ ಬೆಲೆಯ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ 25,000 ರೂ. ಗಳ ಆಸುಪಾಸು ಇರಬಹುದು ಎಂದು ಅಂದಾಜಿಸಲಾಗಿದೆ.

Galaxy F54 5G: 6000mAh ಬ್ಯಾಟರಿ: ಭಾರತಕ್ಕೆ ಬರುತ್ತಿದೆ ಕಡಿಮೆ ಬೆಲೆಯ 108MP ಕ್ಯಾಮೆರಾದ ಹೊಚ್ಚ ಹೊಸ ಸ್ಮಾರ್ಟ್​ಫೋನ್
Samsung Galaxy F54 5G
Follow us
|

Updated on: Apr 15, 2023 | 2:10 PM

ಇತರೆ ದೇಶಗಳಿಗೆ ಹೋಲಿಸಿದರೆ ಆಕರ್ಷಕ ಕ್ಯಾಮೆರಾದ ಸ್ಮಾರ್ಟ್​ಫೋನ್​ಗಳಿಗೆ (Smartphones) ಭಾರತದಲ್ಲಿ ಬೇಡಿಕೆ ಹೆಚ್ಚಿದೆ. ಅದರಲ್ಲೂ 108 ಮೆಗಾಪಿಕ್ಸೆಲ್ ಕ್ಯಾಮೆರಾ ಫೋನ್​ಗಳು ದೇಶದಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ವಿಶೇಷ ಎಂದರೆ ಇವುಗಳು ಕಡಿಮೆ ಬೆಲೆಗೆ ಕೂಡ ಲಭ್ಯವಿದೆ. ಇದೀಗ ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ (Samsung) ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ ಹೊಸ ಮೊಬೈಲ್ ರಿಲೀಸ್ ಮಾಡಲು ಮುಂದಾಗಿದೆ. ಗ್ಯಾಲಕ್ಸಿ F ಸರಣಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ ಇದೆ. ಈ ಸರಣಿಯ ಫೋನ್​ಗಳು ಬಿಡುಗಡೆ ಆಯಿತು ಎಂದಾದರೆ ಅದು ಬೊಂಬಾಟ್ ಸೇಲ್ ಕಾಣುತ್ತದೆ. ಇದಕ್ಕಾಗಿಯೆ ಸ್ಯಾಮ್‌ಸಂಗ್ ಇದೀಗ ಗ್ಯಾಲಕ್ಸಿ F ಸರಣಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಹೊಸ ಗ್ಯಾಲಕ್ಸಿ F54 5G (Galaxy F54 5G) ಸ್ಮಾರ್ಟ್‌ಫೋನ್‌ ಅನಾವರಣ ಮಾಡುತ್ತಿದೆ. ಇದು ಮೀಡ್‌ರೇಂಜ್‌ ಮಾದರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ.

ಹೊಸ ಗ್ಯಾಲಕ್ಸಿ F54 5G ಫೋನ್‌ ಇದೇ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಲಾಂಚ್ ಆಗುವ ಸಾಧ್ಯತೆಗಳಿವೆ. ಈ ಫೋನಿನ ಬೆಲೆಯ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ 25,000 ರೂ. ಗಳ ಆಸುಪಾಸು ಇರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್ ಬಗ್ಗೆ ಕೆಲ ಮಾಹಿತಿ ಸೋರಿಕೆ ಆಗಿದೆ. ಇದರ ಪ್ರಕಾರ, ನೂತನ ಫೋನ್‌ ಸೂಪರ್‌ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿರಲಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಪಡೆದಿರಲಿದೆ. ಹಿಂಬದಿಯ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇರಲಿದೆ.

Best Smartphones: 10,000 ರೂ. ಒಳಗಿನ ಬೆಸ್ಟ್ ಬಜೆಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ

ಇದನ್ನೂ ಓದಿ
Image
OnePlus Nord 3: ಭಾರತಕ್ಕೆ ಬರುತ್ತಿದೆ ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ
Image
Realme Narzo N55: ಬೆಸ್ಟ್ ಫೋನ್, ಬಜೆಟ್ ದರಕ್ಕೆ ದೊರೆಯುತ್ತಿದೆ ರಿಯಲ್​ಮಿ ಫೋನ್
Image
Oppo A1 5G: ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಲಗ್ಗೆ ಇರಿಸಿದೆ ಒಪ್ಪೊ ಹೊಸ ಫೋನ್
Image
Xiaomi 13 Pro: 10 ಸಾವಿರ ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ ಶಓಮಿ ಸ್ಮಾರ್ಟ್​ಫೋನ್

ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿರಲಿದೆ. ಬಲಿಷ್ಠವಾದ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಪಡೆದಿರಲಿದೆ. ಜೊತೆಗೆ 6GB RAM + 128GB ಮತ್ತು 8GB RAM + 256GB ಆಯ್ಕೆಗಳಲ್ಲಿ ಬರುವುದು ಬಹುತೇಕ ಖಚಿತ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು ಬರೋಬ್ಬರಿ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದು ಫೋಟೋಗ್ರಫಿಗೆ ಸೂಕ್ತವಾಗಿದ್ದು ಅತ್ಯುತ್ತಮ ಕ್ವಾಲಿಟಿಯಲ್ಲಿ ವಿಡಿಯೋವನ್ನು ಸೆರೆಹಿಡಿಯುತ್ತದೆ. ಇದರಲ್ಲಿರುವ ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರಲಿದೆ ಎಂದು ಹೇಳಲಾಗಿದೆ.

ಗ್ಯಾಲಕ್ಸಿ F54 5G ಫೋನ್ ದೀರ್ಘ ಸಮಯ ಬಾಳಕೆ ಬರುವ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇರಲಿವೆ. ಕಡಿಮೆ ಬೆಲೆಗೆ ಉತ್ತಮ ಕ್ಯಾಮೆರಾ, ಡೀಸೆಂಟ್ ಪ್ರೊಸೆಸರ್, ಬಿಗ್ ಬ್ಯಾಟರಿಯ ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಈ ಫೋನ್​ಗಾಗಿ ಕೆಲ ದಿನಗಳ ಕಾಲ ಕಾಯುವುದು ಉತ್ತಮ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ