AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 500 ಮಿಲಿಯನ್ ಮೊಬೈಲ್ ನಂಬರ್ ಮಾರಾಟ: ಇದು ವಾಟ್ಸ್​ಆ್ಯಪ್ ಬಳಕೆದಾರರನ್ನು ಬೆಚ್ಚಿ ಬೀಳಿಸುವ ಸುದ್ದಿ

WhatsApp data leaked: ಡಾರ್ಕ್ ವೆಬ್‌ನಲ್ಲಿ (Dark Web) ಸುಮಾರು 500 ಮಿಲಿಯನ್ ವಾಟ್ಸ್​ಆ್ಯಪ್ ಬಳಕೆದಾರರ ಮೊಬೈಲ್ ಸಂಖ್ಯೆಗಳು ಮಾರಾಟವಾಗಿವೆಯಂತೆ. ಸೈಬರ್‌ನ್ಯೂಸ್ (Cyber News) ಈ ಬಗ್ಗೆ ವರದಿ ಮಾಡಿದೆ.

Shocking News: 500 ಮಿಲಿಯನ್ ಮೊಬೈಲ್ ನಂಬರ್ ಮಾರಾಟ: ಇದು ವಾಟ್ಸ್​ಆ್ಯಪ್ ಬಳಕೆದಾರರನ್ನು ಬೆಚ್ಚಿ ಬೀಳಿಸುವ ಸುದ್ದಿ
WhatsApp
TV9 Web
| Edited By: |

Updated on: Nov 28, 2022 | 1:13 PM

Share

ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ವಿಶ್ವದಲ್ಲಿ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಮೆಟಾ ಒಡೆತನದ ಈ ಮೆಸೇಜಿಂಗ್ ಆ್ಯಪ್ ಯಶಸ್ಸು ಸಾಧಿಸಿದೆ. ಆದರೀಗ ವಾಟ್ಸ್​ಆ್ಯಪ್ ಬಳಕೆದಾರರು ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಡಾರ್ಕ್ ವೆಬ್‌ನಲ್ಲಿ (Dark Web) ಸುಮಾರು 500 ಮಿಲಿಯನ್ ವಾಟ್ಸ್​ಆ್ಯಪ್ ಬಳಕೆದಾರರ ಮೊಬೈಲ್ ಸಂಖ್ಯೆಗಳು ಮಾರಾಟವಾಗಿವೆಯಂತೆ. ಸೈಬರ್‌ನ್ಯೂಸ್ (Cyber News) ಈ ಬಗ್ಗೆ ವರದಿ ಮಾಡಿದ್ದು, ಪ್ರಸಿದ್ಧ ಹ್ಯಾಕಿಂಗ್ ಗುಂಪು ಕಮ್ಯುನಿಟಿ ವೇದಿಕೆಯಲ್ಲಿ ಜಾಹೀರಾತೊಂದನ್ನು ಪೋಸ್ಟ್ ಮಾಡಿದ್ದು ಇದರಲ್ಲಿ 47.8 ಕೋಟಿ ವಾಟ್ಸ್​ಆ್ಯಪ್ ಬಳಕೆದಾರರ ಸಂಖ್ಯೆಗಳ ಡೇಟಾಬೇಸ್ ಅನ್ನು ಮಾರಾಟ ಮಾಡುತ್ತಿರುವುದಾಗಿ ಹೇಳಲಾಗಿದೆ.

ಸೋರಿಕೆಯಾದ ಡೇಟಾಸೆಟ್ 84 ದೇಶಗಳ ವಾಟ್ಸ್​ಆ್ಯಪ್ ಬಳಕೆದಾರರ ಮಾಹಿತಿಯನ್ನು ಹೊಂದಿದೆಯಂತೆ. ಭಾರತ ಸೇರಿ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ವಾಟ್ಸ್‌ಆ್ಯಪ್‌ ಬಳಕೆದಾರರ ವೈಯಕ್ತಿಕ ಮಾಹಿತಿ, ದತ್ತಾಂಶ ಕದ್ದು ಮಾರಾಟ ಮಾಡಲಾಗಿದೆ. ಈ ಮೂಲಕ ಬಳಕೆದಾರರ ವಾಟ್ಸ್​ಆ್ಯಪ್ ಸಂಖ್ಯೆ, ವೈಯಕ್ತಿಕ ಮಾಹಿತಿ ಬೇರೆಯವರ ಪಾಲಾಗುತ್ತಿದೆ ಎಂಬುದು ಬಹಿರಂಗವಾಗಿದೆ. ಮಾರಾಟಕ್ಕಿರುವ ಡೇಟಾಬೇಸ್‌ನಲ್ಲಿ ಭಾರತ, ಇಟಲಿ, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್, ರಷ್ಯಾ, ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸೇರಿದಂತೆ 84 ವಿವಿಧ ದೇಶಗಳ ವಾಟ್ಸ್​ಆ್ಯಪ್ ಬಳಕೆದಾರರ ಮೊಬೈಲ್ ಸಂಖ್ಯೆಗಳಿವೆ ಎಂದು ವರದಿಯಾಗಿದೆ.

ಅಮೆರಿಕದಲ್ಲಿ 3.2 ಕೋಟಿ, ಬ್ರಿಟನ್‌ 1.1 ಕೋಟಿ, ರಷ್ಯಾ 1 ಕೋಟಿ, ಇಟಲಿ 3.5 ಕೋಟಿ, ಸೌದಿ ಅರೇಬಿಯಾ 2.9 ಕೋಟಿ, ಭಾರತದ 60 ಲಕ್ಷ ಜನರ ಮೊಬೈಲ್‌ ನಂಬರ್‌ ಸೈಬರ್‌ ಖದೀಮರ ಕೈಸೇರಿದ್ದು, ಖಾಸಗಿ ಮಾಹಿತಿ ಸೋರಿಕೆಯಾಗಿದೆಯಂತೆ. ನವೆಂಬರ್ 16 ರಂದು ಹ್ಯಾಕಿಂಗ್ ಕಮ್ಯೂನಿಟಿ ವೇದಿಕೆಯಲ್ಲಿ ಜಾಹೀರಾತು ಒಂದು ಪೋಸ್ಟ್ ಮಾಡಲಾಗಿದೆ. ಇದರಲ್ಲಿ ವಾಟ್ಸ್​ಆ್ಯಪ್​ನ ಅಂದಾಜು ಎರಡು ಶತಕೋಟಿ ಸಕ್ರಿಯ ಮಾಸಿಕ ಬಳಕೆದಾರರಲ್ಲಿ ನಾಲ್ಕನೇ ಒಂದು ಭಾಗವು ಅಪಾಯದಲ್ಲಿದೆ ಎಂದು ವರದಿಯಾಗಿದೆ.

ಇಂಥಹ ಅಪಾಯದಿಂದ ಪಾರಾಗಲು ನೀವು ವಾಟ್ಸ್​ಆ್ಯಪ್​ನಲ್ಲಿ ಗೊತ್ತಿರದ ಅನಾಮಿಕ ಸಂಖ್ಯೆಯಿಂದ ಬರುವ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ. ಮುಖ್ಯವಾಗಿ ಅನಾಮಿಕ ಸಂಖ್ಯೆಗಳಿಂದ ಕೇಳುವ ನಿಮ್ಮ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬೇಡಿ. ಪದೇ ಪದೆ ಸಂದೇಶ ಬರುವ ಸ್ಪ್ಯಾಮ್‌ ಸಂಖ್ಯೆಗಳನ್ನು ಬ್ಲಾಕ್‌ ಮಾಡಿ ಅಥವಾ ಡಿಲೀಟ್‌ ಮಾಡಿಬಿಡಿ. ಸಾಧ್ಯವಾದಷ್ಟು ಮಾಹಿತಿಯನ್ನು, ನಿಮ್ಮ ಪ್ರೊಫೈಲ್‌ ಫೋಟೋವನ್ನು ಗೌಪ್ಯವಾಗಿ ಇಡುವುದು ಉತ್ತಮ.

Follow Us
TV9 Web
TV9 Web

TV9 Kannada

Read More
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?