Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಸ್ಯಾಮ್​ಸಂಗ್​ನ ಈ ಫೋನನ್ನು ಕೇವಲ 16,999 ರೂ. ಗೆ ಖರೀದಿಸಿ

Amazon Offer: ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ ಎಮ್​​33 5G (Galaxy M33 5G) ಮೊಬೈಲ್ ಅನ್ನು ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಮಾಡುತ್ತಿದೆ. ಬಿಗ್ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಹೊಂದಿರುವ ಈ ಫೋನಿನ ಬೆಲೆಯಲ್ಲಿ ಇದೀಗ ಕಡಿತಗೊಂಡಿದೆ.

Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಸ್ಯಾಮ್​ಸಂಗ್​ನ ಈ ಫೋನನ್ನು ಕೇವಲ 16,999 ರೂ. ಗೆ ಖರೀದಿಸಿ
Samsung Galaxy M33 5G
Follow us
Vinay Bhat
|

Updated on:Feb 06, 2023 | 12:40 PM

ಭಾರತದಲ್ಲಿ ಸ್ಯಾಮ್​ಸಂಗ್ (Samsung) ಕಂಪನಿ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್​ಫೋನ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಈ ಸರಣಿಯ ಫೋನ್​ಗಳಯ ದೇಶದಲ್ಲಿ ಭರ್ಜರಿ ಸೇಲ್ ಕಾಣುತ್ತದೆ. ಇದಕ್ಕಾಗಿಯೆ ಭಾರತದಲ್ಲಿ ಅತಿ ಹೆಚ್ಚು ಮಾರಾಟ ಆಗುವ ಸ್ಮಾರ್ಟ್​​ಫೋನ್​ಗಳ ಪೈಕಿ ಸ್ಯಾಮ್​ಸಂಗ್ ಎರಡನೇ ಸ್ಥಾನದಲ್ಲಿದೆ. ಸಾಮಾನ್ಯವಾಗಿ ಗ್ಯಾಲಕ್ಸಿ ಹೊಸ ಆವೃತ್ತಿಯ ಫೋನ್ ಬಿಡುಗಡೆ ಆಯಿತು ಎಂದಾದರೆ ಆಗ ತನ್ನ ಹಿಂದಿನ ಆವೃತ್ತಿಯ ಫೋನಿನ ಬೆಲೆ ಕೊಂಚ ಕಡಿಮೆ ಮಾಡಿ ಮಾರಾಟ ಮಾಡುತ್ತದೆ. ಅದರಂತೆ ಕಳೆದ ವಾರ ಕಂಪನಿ ಈ ವರ್ಷದ ಬಹುನಿರೀಕ್ಷಿತ ಗ್ಯಾಲಕ್ಸಿ S23 ಸರಣಿಯನ್ನು (Galaxy S23 Series) ಅನಾವರಣ ಮಾಡಿತ್ತು. ಇದರ ಬೆನ್ನಲ್ಲೇ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ ಎಮ್​​33 5G (Galaxy M33 5G) ಮೊಬೈಲ್ ಅನ್ನು ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಮಾಡುತ್ತಿದೆ. ಬಿಗ್ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಹೊಂದಿರುವ ಈ ಫೋನಿನ ಬೆಲೆಯಲ್ಲಿ ಇದೀಗ ಕಡಿತಗೊಂಡಿದೆ.

ಏನಿದೆ ಆಫರ್?:

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಮಾದರಿಯಲ್ಲಿ ರಿಲೀಸ್ ಆಗಿತ್ತು. ಇದರ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 24,999 ರೂ. ಆಗಿದೆ. ಆದರೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಈ ಫೋನ್ ಮೇಲೆ ಶೇ. 32 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಇದರ ಮೂಲಕ ಕೇವಲ 16,999 ರೂ. ಗೆ ಈ ಫೋನನ್ನು ನೀವು ಖರೀದಿಸಬಹುದು. ಅಷ್ಟೇ ಅಲ್ಲದೆ 15,450 ರೂ. ವರೆಗಿನ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ. ನೀವು ಪ್ರೈಮ್ ಚಂದಾದಾರರಾಗಿದ್ದಲ್ಲಿ ಇನ್ನಷ್ಟು ಆಫರ್​ಗಳು ಲಭ್ಯವಾಗಲಿದೆ. ನೀವು ಬಜೆಟ್ ಬೆಲೆಗೆ ಒಂದೊಳ್ಳೆ ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಇದು ಅತ್ಯುತ್ತಮ ಆಯ್ಕೆಯಾಗಿದೆ.

ಇದನ್ನೂ ಓದಿ
Image
Tech Tips: ಆಧಾರ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು?: ಮರಳಿ ಪಡೆಯುವುದು ಹೇಗೆ?
Image
ಏರ್‌ಟೆಲ್​ನ ನಾಲ್ಕು ಅಗ್ಗದ ರೀಚಾರ್ಜ್ ಪ್ಲಾನ್‌ಗಳು ಇಲ್ಲಿವೆ, ಉಚಿತ OTT ಚಂದಾದಾರಿಕೆಯೂ ಲಭ್ಯ
Image
Vi SIM ಬಳಸುತ್ತಿದ್ದೀರಾ? ಹಾಗಿದ್ದರೆ 0% ಬಡ್ಡಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಬಹುದು, ಮಾಹಿತಿ ಇಲ್ಲಿದೆ
Image
Galaxy S22: ಗ್ಯಾಲಕ್ಸಿ S23 ಬಿಡುಗಡೆ ಆಗುತ್ತಿದ್ದಂತೆ ಗ್ಯಾಲಕ್ಸಿ S22 ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಎಷ್ಟು ರೂ. ಗೊತ್ತೇ?

Infinix Zero 5G 2023: ಭಾರತದಲ್ಲಿ ಬಹುನಿರೀಕ್ಷಿತ ಇನ್ಫಿನಿಕ್ಸ್‌ ಜಿರೋ 5G 2023 ಸ್ಮಾರ್ಟ್​ಫೋನ್ ಬಿಡುಗಡೆ: ಇದರ ಬೆಲೆ ಕೇವಲ …

ಏನು ವಿಶೇಷತೆ?:

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದಾದ ಆಯ್ಕೆ ನೀಡಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಎಫೆಕ್ಟ್, ಸಿಂಗಲ್ ಟೇಕ್, ಆಬ್ಜೆಕ್ಟ್ ಎರೇಸರ್ ಮತ್ತು ವೀಡಿಯೋ TNR ಮತ್ತು ವೀಡಿಯೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯದ ಬಾಳಿಕೆಗಾಗಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಯನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Mon, 6 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ