ಈ ತಿಂಗಳು ಬಿಡುಗಡೆ ಆಗಲಿವೆ ಸಾಲು ಸಾಲು ಸ್ಮಾರ್ಟ್​ಫೋನ್​ಗಳು: ಇಲ್ಲಿದೆ ಪಟ್ಟಿ

ಶವೋಮಿ ಕಂಪೆನಿಯ ರೆಡ್ಮಿ 10 ಪ್ರೈಮ್ ಸ್ಮಾರ್ಟ್​ಫೋನ್ ಬಾರತೀಯ ಮಾರುಕಟ್ಟೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಆಗಲಿದೆ.

ಈ ತಿಂಗಳು ಬಿಡುಗಡೆ ಆಗಲಿವೆ ಸಾಲು ಸಾಲು ಸ್ಮಾರ್ಟ್​ಫೋನ್​ಗಳು: ಇಲ್ಲಿದೆ ಪಟ್ಟಿ
Smartphone
Follow us
TV9 Web
| Updated By: Vinay Bhat

Updated on: Sep 03, 2021 | 10:51 AM

ಭಾರತದ ಸ್ಮಾರ್ಟ್‌ಫೋನ್‌ (Smartphone) ವಲಯ ಸಾಕಷ್ಟು ದೊಡ್ಡದಿದೆ. ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿವೆ. ಕಳೆದ ತಿಂಗಳು ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಅದರಂತೆ ಈ ಸೆಪ್ಟೆಂಬರ್ ತಿಂಗಳಲ್ಲೂ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿವೆ. ಸ್ಮಾರ್ಟ್‌ಫೋನ್‌ ಪ್ರಿಯರು ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದಾರೆ. ಹಾಗಾದ್ರೆ ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ನೋಡೋಣ.

ರೆಡ್ಮಿ 10 ಪ್ರೈಮ್: ಶವೋಮಿ ಕಂಪೆನಿಯ ರೆಡ್ಮಿ 10 ಪ್ರೈಮ್ ಸ್ಮಾರ್ಟ್​ಫೋನ್ ಬಾರತೀಯ ಮಾರುಕಟ್ಟೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಆಗಲಿದೆ. ಈ ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿರಲಿದ್ದು, ಡಿಸ್‌ಪ್ಲೇಯು ಎಲ್‌ಸಿಡಿ ಮಾದರಿಯಲ್ಲಿರಲಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G88 ಪ್ರೊಸೆಸರ್‌ ಅನ್ನು ಹೊಂದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಇರಲಿದೆ. ಆರಂಭಿಕ 4GB RAM ವೇರಿಯಂಟ್‌ನ ಆಯ್ಕೆ ಪಡೆದಿರಲಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದ್ದು, ಅವು ಕ್ರಮವಾಗಿ 50+8+2+2 ಮೆಗಾ ಪಿಕ್ಸಲ್ ಸೆನ್ಸಾರ್‌ ಬಲವನ್ನು ಪಡೆದಿರಲಿವೆ. ಸೆಲ್ಫಿಗಾಗಿ 8 ಮೆಗಾ ಪಿಕ್ಸಲ್ ಕ್ಯಾಮೆರಾ ಇರಲಿದೆ. ಹಾಗೆಯೇ 5,000mAh ಬ್ಯಾಟರಿ ಸಪೋರ್ಟ್‌ ಸಹ ಪಡೆದಿರಲಿದೆ.

ಐಫೋನ್ 13 ಸರಣಿ: ಬಹುನಿರೀಕ್ಷಿತ ಐಫೋನ್ 13 ಸರಣಿ ಕೂಡ ಇದೇ ತಿಂಗಳು ಲಾಂಚ್ ಆಗಲಿದೆ. ಸೆಪ್ಟೆಂಬರ್ 13 ರಂದು ಮಾರುಕಟ್ಟೆಗೆ ಬರಲಿದೆ ಎಂದು ಹೇಳಲಾಗಿದೆ. ಇದರಲ್ಲಿ ಐಫೋನ್ 13 ಮಿನಿ, ಐಫೋನ್ 13, ಐಫೋನ್ 13 ಪ್ರೊ ಮತ್ತು ಐಫೋನ್ 13 ಪ್ರೊ ಮ್ಯಾಕ್ಸ್ ಫೋನುಗಳು ಇರಲಿವೆ.

ರಿಯಲ್‌ಮಿ Q3i: ಈ ಫೋನ್‌ ಈ ತಿಂಗಳು ಬಿಡುಗಡೆ ಆಗಲಿದೆ. ಆದರೆ, ಯಾವ ದಿನಾಂಕದಂದು ಎಂಬುದನ್ನು ಕಂಪೆನಿ ಇನ್ನೂ ಬಹಿರಂಗ ಪಡಿಸಿಲ್ಲ. ಈ ಸ್ಮಾರ್ಟ್​ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿರಲಿದ್ದು, ಡಿಸ್‌ಪ್ಲೇಯು LCD ಮಾದರಿಯಲ್ಲಿರಲಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ Dimensity 700 ಪ್ರೊಸೆಸರ್‌ ಅನ್ನು ಹೊಂದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಇರಲಿದೆ. ಈ ಫೋನ್‌ 4GB RAM ಸಾಮರ್ಥ್ಯದ ಬೇಸ್ ವೇರಿಯಂಟ್‌ನ ಆಯ್ಕೆ ಪಡೆದಿರಲಿದೆ. ಇದರೊಂದಿಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದ್ದು, ಅವು ಕ್ರಮವಾಗಿ 48+2+2 ಮೆಗಾ ಪಿಕ್ಸಲ್ ಸೆನ್ಸಾರ್‌ ಬಲವನ್ನು ಪಡೆದಿರಲಿವೆ. ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಇರಲಿದೆ. ಹಾಗೆಯೇ 5,000mAh ಬ್ಯಾಟರಿ ಸಪೋರ್ಟ್‌ ಸಹ ಪಡೆದಿರಲಿದೆ.

ರೆಡ್ಮಿ ನೋಟ್ 11: ಈ ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿರಲಿದ್ದು, ಡಿಸ್‌ಪ್ಲೇಯು ಎಲ್‌ಇಡಿ ಮಾದರಿಯಲ್ಲಿರಲಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ಅನ್ನು ಹೊಂದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಇರಲಿದೆ. ಆರಂಭಿಕ 4GB RAM ವೇರಿಯಂಟ್‌ನ ಆಯ್ಕೆ ಪಡೆದಿರಲಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದ್ದು, ಅವು ಕ್ರಮವಾಗಿ 48+8+5+2 ಮೆಗಾ ಪಿಕ್ಸಲ್ ಸೆನ್ಸಾರ್‌ ಬಲವನ್ನು ಪಡೆದಿರಲಿವೆ. ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಇರಲಿದೆ. ಹಾಗೆಯೇ 5,000mAh ಬ್ಯಾಟರಿ ಸಪೋರ್ಟ್‌ ಸಹ ಪಡೆದಿರಲಿದೆ.

ಜಿಯೋಫೋನ್ ನೆಕ್ಸ್ಟ್: ಬಹುನಿರೀಕ್ಷಿತ ಜಿಯೋಫೋನ್ ನೆಕ್ಸ್ಟ್ ಕೂಡ ಇದೇ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಮೂಲಗಳ ಪ್ರಕಾರ, ಜಿಯೋಫೋನ್ ನೆಕ್ಸ್ಟ್ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 11 ಒಎಸ್‌ನಿಂದ ರನ್ ಆಗಲಿದೆ. ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ಇರಬಹುದು. ಎಚ್‌ಡಿ ಡಿಸ್‌ಪ್ಲೇ ಇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಈ ಫೋನ್ ಮಾಡೆಲ್ LS-5701-J ನಂಬರ್ ಹೊಂದಿದೆ. ಗೂಗಲ್‌ನ ಗೋ ಎಡಿಷನ್ ಆಂಡ್ರಾಯ್ಡ್ 11 ಒಎಸ್, 720×1,440 ಪಿಕ್ಸೆಲ್ ಪ್ರದರ್ಶಕ, ಕ್ವಾಲಕಾಂ QM215 ಎಸ್ಒಸಿ ಅನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕ್ವಾಡ್ ಕೋರ್ ಕ್ವಾಲ್ಕಮ್ ಪ್ರೊಸೆಸರ್ ಜೊತೆಗೆ ಕ್ವಾಲಕಾಮ್ ಅಡ್ರಿನೊ 308 ಜಿಪಿಯು ಹೊಂದಿದೆ. ಬ್ಲೂಟೂತ್ v4.2, GPS, 1080ಪಿ ವಿಡಿಯೋ ರೆಕಾರ್ಡಿಂಗ್, ಎಲ್‌ಡಿಪಿಆರ್ 3 ರ್ಯಾಮ್, ಮತ್ತು ಇಎಂಎಂಸಿ 4.5 ಸ್ಟೋರೇಜ್ ಹೊಂದಿರುವ ಸಾಧ್ಯತೆ ಇದೆ.

Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 50 ಸಾವಿರ ರೂ.

Redmi 10 Prime: ಬಿಡುಗಡೆಗೆ ಒಂದು ದಿನ ಬಾಕಿ ಇರುವಾಗಲೇ ಧೂಳೆಬ್ಬಿಸುತ್ತಿದೆ ರೆಡ್ಮಿ 10 ಪ್ರೈಮ್: ಅಂಥದ್ದೇನಿದೆ ಗೊತ್ತೇ?

(Smartphones set to launch in September 2021 iPhone 13 JioPhone Next and all new mobiles expected)

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ