Realme GT 2 Pro: ಒಂದೇ ದಿನ ಬಾಕಿ: ಸೋಮವಾರ ಮಾರುಕಟ್ಟೆಗೆ ಅಪ್ಪಳಿಸಲಿದೆ ಬಹುನಿರೀಕ್ಷೆಯ ರಿಯಲ್‌ ಮಿ GT 2 ಸರಣಿ

Realme GT 2 series: ಹೊಸದಾಗಿ ಬಿಡುಗಡೆಯಾದ ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್‌ ಹೊಂದಿರಲಿರುವ ರಿಯಲ್‌ ಮಿ GT 2 Pro ಇದೇ ಡಿಸೆಂಬರ್ 20 ರಂದು ಅಂದರೆ ಸೋಮವಾರ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ.

Realme GT 2 Pro: ಒಂದೇ ದಿನ ಬಾಕಿ: ಸೋಮವಾರ ಮಾರುಕಟ್ಟೆಗೆ ಅಪ್ಪಳಿಸಲಿದೆ ಬಹುನಿರೀಕ್ಷೆಯ ರಿಯಲ್‌ ಮಿ GT 2 ಸರಣಿ
Realme GT 2 series
Follow us
TV9 Web
| Updated By: Vinay Bhat

Updated on: Dec 19, 2021 | 3:29 PM

ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ನಿಂದ (Budget Smartphone) ಹಿಡಿದು ದುಬಾರಿ ಬೆಲೆಯ ಮೊಬೈಲ್ ವರೆಗೆ (Mobile) ಭರ್ಜರಿ ಬೇಡಿಕೆಯನ್ನು ಸೃಷ್ಟಿಸಿರುವ ರಿಯಲ್ ಮಿ (Realme) ಕಂಪನಿ ಮಾರುಕಟ್ಟೆಯಲ್ಲಿ ಭದ್ರವಾಗಿ ನೆಲೆಯೂರಿದೆ. ತಿಂಗಳಿಗೆ ಒಂದರಂತೆ ಹೊಸ ಹೊಸ ಫೋನನ್ನು ಬಿಡುಗಡೆ ಮಾಡುತ್ತಿರುವ ರಿಯಲ್ ಮಿ ಕಂಪನಿ ಇದೀಗ ತನ್ನ ಬಹುನಿರೀಕ್ಷಿತ ಹೊಸ ರಿಯಲ್‌ ಮಿ ಜಿಟಿ2 (Realme GT 2) ಸರಣಿಯನ್ನು ಅನಾವರಣ ಮಾಡಲು ತಯಾರು ನಡೆಸಿದೆ. ಇದೇ ಡಿಸೆಂಬರ್ 20 ರಂದು ಅಂದರೆ ಸೋಮವಾರ ರಿಯಲ್‌ ಮಿ GT 2 ಸರಣಿ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಇದರಲ್ಲಿ ರಿಯಲ್‌ ಮಿ GT 2 Pro ಫೋನ್‌ ಹೊಸದಾಗಿ ಬಿಡುಗಡೆಯಾದ ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್‌ (Snapdragon 8 Gen 1 SoC) ಹೊಂದಿರಲಿದೆ ಎನ್ನಲಾಗಿದೆ.

ರಿಯಲ್‌ ಮಿ GT 2 Pro ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಒಳಗೊಂಡಿರುವ 6.8 ಇಂಚಿನ WQHD+ OLED ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದ್ದು, ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆಯಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಹೊಂದಿರುವುದು ವಿಶೇಷ. ಅಂತೆಯೆ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ.

ರಿಯಲ್‌ ಮಿ GT 2 Pro ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಪೋರ್ಟ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿಸೆಂಬರ್ 20 ರಂದು ಮುಂಬರುವ Realme GT 2 ಸರಣಿಯ ಈವೆಂಟ್‌ನಲ್ಲಿ ಬಿಡುಗಡೆಯಾಗಲಿದೆ. ಇವುಗಳ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ.

Smartphone Tips: ನಿಮಗೆ ಸ್ಮಾರ್ಟ್​ಫೋನ್​ನಲ್ಲಿ ಸ್ಕ್ರೀನ್ ರೆಕಾರ್ಡ್ ಮಾಡುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ

Mi Fan Sale 2021: ಶುರುವಾಗಿದೆ ಕ್ರಿಸ್ಮಸ್ ಸೇಲ್: ರೆಡ್ಮಿ ಸ್ಮಾರ್ಟ್​ಫೋನ್​ಗಳ ಮೇಲೆ ಊಹಿಸಲಾಗದಷ್ಟು ಡಿಸ್ಕೌಂಟ್

(Snapdragon 8 Gen 1 SoC-powered Realme GT 2 Pro will launch tommorow December 20)

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?